ಬೆಂಗಳೂರು, ಡಿಸೆಂಬರ್ 21: ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಉಚಿತ ಗ್ಯಾರಂಟಿ ಯೋಜನೆಗಳಲ್ಲಿ (Guarantee Scheme) ಒಂದಾದ ‘ಯುವನಿಧಿ’ ನಿರುದ್ಯೋಗ ಭತ್ಯೆ ಯೋಜನೆಯ (Yuva Nidhi Scheme) ನೋಂದಣಿಗೆ ಡಿಸೆಂಬರ್ 26ರಂದು ಚಾಲನೆ ನೀಡುತ್ತೇವೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಗುರುವಾರ ತಿಳಿಸಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಮ್ಮ ಸರ್ಕಾರದ ಐದನೇ ಕಾರ್ಯಕ್ರಮ ನೋಂದಣಿ ಚಾಲನೆ ಮಾಡ್ತಾ ಇದ್ದೇವೆ. ಡಿ. 26 ರಂದು ವಿಧಾನಸೌಧದಲ್ಲಿ ಸಿಎಂ, ಡಿಸಿಎಂ ಲೋಗೋ ಅನಾವರಣ ಮಾಡಲಿದ್ದು, ನೋಂದಣಿ ಪ್ರಕ್ರಿಯೆಗೆ ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದ್ದಾರೆ.
ನಮ್ಮ ಸರ್ಕಾರದ ಐದನೇ ಕಾರ್ಯಕ್ರಮ ನೋಂದಣಿ ಚಾಲನೆ ಮಾಡ್ತಾ ಇದ್ದೇವೆ. ಡಿ. 26 ರಂದು ವಿಧಾನಸೌಧದಲ್ಲಿ ಸಿಎಂ, ಡಿಸಿಎಂ ಲೋಗೋ ಅನಾವರಣ ಮಾಡಲಿದ್ದು, ನೋಂದಣಿ ಪ್ರಕ್ರಿಯೆಗೆ ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದ್ದಾರೆ.
ಜನವರಿ 12 ರಂದು ವಿವೇಕಾನಂದ ಜಯಂತಿ ದಿನ ನೇರ ನಗದು ವರ್ಗಾವಣೆ ಮೂಲಕ ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆಯಾಗಲಿದೆ. ಶಿವಮೊಗ್ಗದಲ್ಲಿ ಕಾರ್ಯಕ್ರಮ ನಡೆಯಲಿದೆ. ನಮ್ಮ ಭರವಸೆಗಳಂತೆ ಪದವಿ, ಡಿಪ್ಲೋಮಾ ಮುಗಿಸಿ ಆರು ತಿಂಗಳು ಆಗಿದ್ರೆ ಅವರು ಈ ಯುವನಿಧಿಗೆ ಅರ್ಹರಾಗಿರುತ್ತಾರೆ. ಡಿಗ್ರಿ ಪಾಸ್ ಆದವರೆಗೆ 3 ಸಾವಿರ, ಡಿಪ್ಲೋಮಾ 1500 ಸಾವಿರ ಎರಡು ವರ್ಷಗಳವರೆಗೆ ನೀಡುತ್ತೇವೆ. ಮಧ್ಯದಲ್ಲಿ ಯಾರಿಗೆ ಕೆಲಸ ಸಿಗುತ್ತೆ ಅವರಿಗೆ ಯುವನಿಧಿ ಸವಲತ್ತು ನಿಲ್ಲಿಸಲಾಗುತ್ತದೆ ಎಂದು ಸಚಿವರು ತಿಳಿಸಿದ್ದಾರೆ.
ಯುವ ನಿಧಿ ಫಲಾನುಭವಿಗಳು ಕೆಲಸ ದೊರೆತಿದೆಯೋ ಇಲ್ಲವೋ ಎಂಬುದನ್ನು ಪ್ರತಿ ತಿಂಗಳು ಸ್ವಯಂ ಘೋಷಣೆ ಮಾಡಬೇಕು. ಇದನ್ನು ಶೇ 100 ರಷ್ಟು ನಾವು ನೇರವಾಗಿ ಹುಡುಕಲು ಸಾಧ್ಯವಿಲ್ಲ. ಸಾಕಷ್ಟು ಚಾಲೆಂಜ್ ಇದೆ, ನೋಡೋಣ. ಕೆಲಸ ಸಿಕ್ಕಿದವರು ಯುವನಿಧಿ ಪಡೆದುಕೊಂಡರೆ, ಆ ಹಣವನ್ನು ವಾಪಸ್ ಪಡೆಯುತ್ತೇವೆ. ಅಂಥವರ ವಿರುದ್ಧ ಕಾನೂನು ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ. ಆದರೆ, ನಮಗೆ ನಮ್ಮ ಯುವಕರ ಮೇಲೆ ನಂಬಿಕೆ ಇದೆ ಎಂದು ಸಚಿವರು ಹೇಳಿದ್ದಾರೆ.
ಇದನ್ನೂ ಓದಿ: ಯುವ ನಿಧಿ ಗ್ಯಾರಂಟಿ ಜಾರಿಗೆ ದಿನಗಣನೆ: ಯಾರೆಲ್ಲ ಅರ್ಹರು, ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಮಾಹಿತಿ
10 ಲಕ್ಷಕ್ಕೂ ಹೆಚ್ಚು ಅರ್ಹರಿಗೆ ಪ್ರಯೋಜನ ಸಿಗಲಿದೆ. 250 ಕೋಟಿ ರೂ. ಹಣವನ್ನು ಯೋಜನೆಗೆ ನಿಗದಿ ಮಾಡಲಾಗಿದೆ. ಮುಂದಿನ ವರ್ಷ 1250 ಕೋಟಿ ಬಜೆಟ್ ಅವಶ್ಯಕತೆ ಇದೆ. ಪತ್ರಿ ತಿಂಗಳು 25 ರೊಳಗೆ ಅರ್ಜಿ ಸಲ್ಲಿಸಲು ಅವಕಾಶ ಇದೆ. ಸೇವಾ ಸಿಂಧುವಿನಲ್ಲಿ ಅರ್ಜಿ ಸಲ್ಲಿಸಬಹುದು. ಕರ್ನಾಟಕ ಓನ್, ಬಾಪೂಜಿ ಸೇವಾ ಕೇಂದ್ರ, ಗ್ರಾಮ ಓನ್ ಕೇಂದ್ರಗಳಲ್ಲಿಯೂ ಅರ್ಜಿ ಸಲ್ಲಿಸಬಹುದು ಎಂದು ಸಚಿವರು ತಿಳಿಸಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 12:03 pm, Thu, 21 December 23