AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಾಸಗಿ ಆಸ್ಪತ್ರೆಗಳಿಗೆ ಮಾನವೀಯವಾಗಿ ನಡೆದುಕೊಳ್ಳಲು ಮನವಿ ಮಾಡಿದ ಸಚಿವ ಜಗದೀಶ್ ಶೆಟ್ಟರ್

ಬೆಳಗಾವಿ ಜಿಲ್ಲೆಗೆ 24KL ಆಕ್ಸಿಜನ್ ನೀಡುವುದಾಗಿ ಸರ್ಕಾರ ಭರವಸೆ ನೀಡಿದೆ. ಲಭ್ಯವಿರುವ ಇತಿಮಿತಿಯಲ್ಲಿ ಕೆಲಸ ಮಾಡಬೇಕಿದೆ. ಬೆಳಗಾವಿ ಜಿಲ್ಲೆಗೆ 30KL ಆಕ್ಸಿಜನ್ ಅಗತ್ಯವಿದ್ದು ಮುಂದೆ ಹೆಚ್ಚಿಸುತ್ತೇವೆ ಎಂದು ಅವರು ತಿಳಿಸಿದರು.

ಖಾಸಗಿ ಆಸ್ಪತ್ರೆಗಳಿಗೆ ಮಾನವೀಯವಾಗಿ ನಡೆದುಕೊಳ್ಳಲು ಮನವಿ ಮಾಡಿದ ಸಚಿವ ಜಗದೀಶ್ ಶೆಟ್ಟರ್
ಸಚಿವ ಜಗದೀಶ್​ ಶೆಟ್ಟರ್
guruganesh bhat
|

Updated on:May 09, 2021 | 5:40 PM

Share

ಬೆಳಗಾವಿ: ಜಿಲ್ಲೆಯಲ್ಲಿ 30kl ಆಕ್ಸಿಜನ್ ಡಿಮ್ಯಾಂಡ್ ಇದ್ದು ಮುಂದಿನ ದಿನಗಳಲ್ಲಿ ಅದನ್ನು ಹೆಚ್ಚಿಸುತ್ತೇವೆ. ಆಕ್ಸಿಜನ್ ವಿಚಾರವಾಗಿ ಕೇಂದ್ರ ಸಚಿವರ ಜೊತೆಗೆ ಸಂಪರ್ಕದಲ್ಲಿದ್ದೇ‌ನೆ. ಇನ್ನೂ ಎರಡರಿಂದ ಮೂರು ದಿನಗಳಲ್ಲಿ ಆಕ್ಸಿಜನ್ ಸಮಸ್ಯೆ ಕಡಿಮೆಯಾಗಲಿದೆ ಎಂದು ಸಚಿವ ಜಗದೀಶ್ ಶೆಟ್ಟರ್ ವಿಶ್ವಾಸ ವ್ಯಕ್ತಪಡಿಸಿದರು.

ಬೆಳಗಾವಿಯಲ್ಲಿ ಆಕ್ಸಿಜನ್ ವಿತರಣೆ ಮಾಡಲು ಎನ್‌ಜಿಓಗಳಿಗೆ ಕಷ್ಟವಾಗುತ್ತಿದೆ. ಈ ಕಾರಣದಿಂದ ಜಿಲ್ಲಾಡಳಿತವೇ ಆಕ್ಸಿಜನ್ ವಿತರಣೆ ಮಾಡುತ್ತಿದೆ. ಕೆಲ ಖಾಸಗಿ ಆಸ್ಪತ್ರೆಯವರು ಹೆಚ್ಚಿನ ಹಣ ಚಾರ್ಜ್ ಮಾಡುತ್ತಿದ್ದಾರೆ. ಅಮಾನವೀಯವಾಗಿ ನಡೆದುಕೊಳ್ಳುತ್ತಿದ್ದಾರೆ. ಅಂತಹ ಆಸ್ಪತ್ರೆಗಳ ಬಳಿ ಮಾನವೀಯವಾಗಿ ನಡೆದುಕೊಳ್ಳುವಂತೆ ಮನವಿ ಮಾಡುತ್ತೇನೆ ಎಂದು ಅವರು ತಿಳಿಸಿದರು.

ಜಿಲ್ಲೆಗೆ 24KL ಆಕ್ಸಿಜನ್ ನೀಡುವುದಾಗಿ ಸರ್ಕಾರ ಭರವಸೆ ನೀಡಿದೆ. ಲಭ್ಯವಿರುವ ಇತಿಮಿತಿಯಲ್ಲಿ ಕೆಲಸ ಮಾಡಬೇಕಿದೆ. ಬೆಳಗಾವಿ ಜಿಲ್ಲೆಗೆ 30KL ಆಕ್ಸಿಜನ್ ಅಗತ್ಯವಿದ್ದು ಮುಂದೆ ಹೆಚ್ಚಿಸುತ್ತೇವೆ. ಆಕ್ಸಿಜನ್ ಹಂಚಿಕೆ ಜವಾಬ್ದಾರಿ ನೀಡಿದ ನಂತರ ಹಲವು ಸಭೆಗಳಲ್ಲಿ ಭಾಗಿಯಾಗಿದ್ದೇನೆ. ಬೆಳಗಾವಿಯ ಆಕ್ಸಿಜನ್ ಸಮಸ್ಯೆ ಬಗ್ಗೆ ಚರ್ಚೆ ಮಾಡಿದ್ದೇನೆ. ಈ ಸಮಸ್ಯೆಯನ್ನು ಶೀಘ್ರವೇ ಪರಿಹರಿಸುತ್ತೇವೆ. ಮಹಾರಾಷ್ಟ್ರ ರಾಜ್ಯಕ್ಕೆ ಮನವಿ ಮಾಡಿಕೊಂಡು ಅಲ್ಲಿಂದಲೂ ಆಕ್ಸಿಜನ್ ತರುವ ಪ್ರಯತ್ನ ಮಾಡುತ್ತೇವೆ ಎಂದು ಅವರು ಹೇಳಿದರು.

ಇದನ್ನೂ ಓದಿ: ಸಂಸದೆ ಸುಮಲತಾ ಅಂಬರೀಶ್ ವಿಶೇಷ ಸಂದರ್ಶನ: ‘ಕರ್ತವ್ಯ ದೋಷದಿಂದ ಒಂದು ಜೀವ ಹೋದ್ರೂ ಅದಕ್ಕೆ ನಾವೇ ಜವಾಬ್ದಾರಿ…;

ಆನ್​​ಲೈನ್​ನಲ್ಲಿ ಆರ್ಡರ್​ ಮಾಡಿದರೆ ಮನೆಬಾಗಿಲಿಗೆ ಬರುತ್ತದೆ ವೈದ್ಯಕೀಯ ಆಕ್ಸಿಜನ್​ ಸಿಲಿಂಡರ್​; ಈ ಜಿಲ್ಲೆಯಲ್ಲಿ ವಿನೂತನ ಕ್ರಮ

(Karnataka Minister Jagadish Shettar requests private hospitals to have some humanity in Belagavi)

Published On - 5:26 pm, Sun, 9 May 21

ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ