73 ಜಾತಿಗಳನ್ನು ಗುರುತಿಸಿ ಮೀಸಲಾತಿಗೆ ಶಿಫಾರಸು ಮಾಡುತ್ತೇವೆ; ಕೋಟ ಶ್ರೀನಿವಾಸ್ ಪೂಜಾರಿ ಭರವಸೆ

73 ಜಾತಿಗಳನ್ನು ಗುರುತಿಸಿ ಮೀಸಲಾತಿಗೆ ಶಿಫಾರಸು ಮಾಡುತ್ತೇವೆ; ಕೋಟ ಶ್ರೀನಿವಾಸ್ ಪೂಜಾರಿ ಭರವಸೆ
ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ

73 ಜಾತಿಗಳನ್ನು ಗುರುತಿಸಿ ಕೇಂದ್ರಕ್ಕೆ ಶಿಫಾರಸು ಮಾಡುತ್ತೇನೆ. ದೇವರಾಜು‌ ಅರಸು ಪೀಠಕ್ಕೆ ಅನುದಾನ ಕೊಡುತ್ತೇವೆ ಎಂದು ಬೆಂಗಳೂರಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿಕೆ ನೀಡಿದ್ದಾರೆ.

TV9kannada Web Team

| Edited By: Sushma Chakre

Jan 06, 2022 | 4:43 PM

ಬೆಂಗಳೂರು: 73 ಜಾತಿಗಳನ್ನು ಗುರುತಿಸಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುತ್ತೇವೆ. ಮೀಸಲಾತಿಗಾಗಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುತ್ತೇವೆ. ಯಾರಿಗೂ ಅನ್ಯಾಯವಾಗದಂತೆ ಸರ್ಕಾರ ತೀರ್ಮಾನಿಸುತ್ತದೆ ಎಂದು ಬೆಂಗಳೂರಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ರಾಜ್ಯ ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯಿಂದ ಸನ್ಮಾನ ಮಾಡಲಾಗಿದೆ. ಈ ವೇಳೆ ಮಾತನಾಡಿದ ಅವರು, ಹಿಂದುಳಿದ ಆಯೋಗದ ಅಧ್ಯಕ್ಷರು ಪ್ರಸ್ತಾಪವನ್ನು ಪರಿಶೀಲಿಸುತ್ತಿದ್ದಾರೆ. ಹಲವು ಸಮುದಾಯದ ಪ್ರಸ್ತಾಪವನ್ನು ಪರಿಶೀಲಿಸುತ್ತಿದ್ದಾರೆ. ಸ್ಥಳೀಯ ಸಂಸ್ಥೆಗಳಲ್ಲಿ ಹಿಂದುಳಿದ ವರ್ಗಕ್ಕೆ ಮೀಸಲಾತಿ ವಿಚಾರವಾಗಿ 15 ದಿನದಲ್ಲಿ ಸಭೆ ಕರೆದು ಚರ್ಚೆ ಮಾಡುತ್ತೇವೆ ಎಂದು ಬೆಂಗಳೂರಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿಕೆ ನೀಡಿದ್ದಾರೆ.

73 ಜಾತಿಗಳನ್ನು ಗುರುತಿಸಿ ಕೇಂದ್ರಕ್ಕೆ ಶಿಫಾರಸು ಮಾಡುತ್ತೇನೆ. ದೇವರಾಜು‌ ಅರಸು ಪೀಠಕ್ಕೆ ಅನುದಾನ ಕೊಡುತ್ತೇವೆ. ಅತಿ ಹಿಂದುಳಿದ ವೇದಿಕೆಗಳ ಪ್ರಸ್ತಾಪ ನನಗೆ ಸಿಕ್ಕಿದೆ. ಬಲಾಢ್ಯ ಸಮುದಾಯಕ್ಕೆ ಅಹವಾಲನ್ನು ಕೊಡಲು ಅವಕಾಶವಿದೆ. ಯಾರಿಗೂ ಅನ್ಯಾಯವಾಗದಂತೆ ಸರ್ಕಾರ ತೀರ್ಮಾನ ಮಾಡುತ್ತದೆ. ಹಿಂದುಳಿದ ಆಯೋಗದ ಅಧ್ಯಕ್ಷರು ಹಲವು ಸಮುದಾಯದ ಪ್ರಸ್ತಾಪವನ್ನು ಪರಿಶೀಲಿಸುತ್ತಿದ್ದಾರೆ. ಹಲವು ಸಮುದಾಯದ ಬದುಕು ದಾರುಣವಾಗಿದೆ. ಸಮಾಜದ ಕಟ್ಟಕಡೆಯ ಸಮುದಾಯದ ಸ್ಥಳೀಯ ಸಂಸ್ಥೆಗಳಲ್ಲಿ ಹಿಂದುಳಿದ ವರ್ಗಕ್ಕೆ ಮೀಸಲಾತಿ ವಿಚಾರವಾಗಿ 15 ದಿನದಲ್ಲಿ ಸಭೆ ಕರೆದು ಚರ್ಚೆ ಮಾಡುತ್ತೇವೆ ಎಂದಿದ್ದಾರೆ.

ಶಾಸಕರ ಭವನದಲ್ಲಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ಅಧ್ಯಕ್ಷ ಎಂ.ಸಿ ವೇಣುಗೋಪಾಲ್, ವಿಧಾನ ಪರಿಷತ್ ಸದಸ್ಯ ಪಿ.ಆರ್ ರಮೇಶ್ ಹಾಗೂ ಮಾಜಿ ಶಾಸಕ ನೆ.ಲ ನರೇಂದ್ರ ಬಾಬು ಸೇರಿದಂತೆ ಹಿಂದುಳಿದ ನಾಯಕರಿಂದ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಅವರನ್ನು ಸನ್ಮಾನ ಮಾಡಲಾಗಿದೆ. ಈ ವೇಳೆ ಪಂಚಮಸಾಲಿ ಸಮುದಾಯವನ್ನು ಪ್ರವರ್ಗ 2ಎಗೆ ಸೇರಿಸಬಾರದೆಂದು ಒಕ್ಕೂರಲಿನಿಂದ ಮನವಿ ಮಾಡಲಾಗಿದೆ.

ಇದನ್ನೂ ಓದಿ: ಇಂದು ಸಂಜೆ ಸಚಿವ ಸಂಪುಟ ಪಟ್ಟಿ ಅಂತಿಮ; ಲಕ್ಷ್ಮಣ ಸವದಿ, ಶಶಿಕಲಾ ಜೊಲ್ಲೆ, ಕೋಟ ಶ್ರೀನಿವಾಸ್ ಪೂಜಾರಿಗೆ ನಿರಾಸೆ?

‘ಒಂದು ರೂಪಾಯಿಯೂ ಹಂಚದ ಏಕೈಕ ಆಭ್ಯರ್ಥಿ’ ಎಂಬ ಹೆಗ್ಗಳಿಕೆಯ ಕೋಟ ಶ್ರೀನಿವಾಸ ಪೂಜಾರಿಗೆ ಭರ್ಜರಿ ಜಯ

Follow us on

Related Stories

Most Read Stories

Click on your DTH Provider to Add TV9 Kannada