ಅಮಿತ್ ಶಾ ಯಾವ ಅರ್ಥದಲ್ಲಿ ಹೇಳಿದ್ದಾರೋ ಗೊತ್ತಿಲ್ಲ, ಸಾಮೂಹಿಕ ನಾಯಕತ್ವದಲ್ಲೇ ಚುನಾವಣೆ ನಡೆಯಲಿದೆ; ಸಚಿವ ಈಶ್ವರಪ್ಪ
ಅಮಿತ್ ಶಾ ಯಾವ ಅರ್ಥದಲ್ಲಿ ಅಮಿತ್ ಶಾ ನೇತೃತ್ವದಲ್ಲೇ ಚುನಾವಣೆ ನಡೆಯಲಿದೆ ಎಂದು ಹೇಳಿದ್ದಾರೋ ನಮಗೆ ಗೊತ್ತಿಲ್ಲ. ಆದರೆ, ಸಾಮೂಹಿಕ ನಾಯಕತ್ವದ ಬಗ್ಗೆ ರಾಜ್ಯ ನಾಯಕರ ಒಲವು ಇದೆ ಎಂದು ಶಿವಮೊಗ್ಗದಲ್ಲಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.
ಶಿವಮೊಗ್ಗ: ಸಿಎಂ ಬಸವರಾಜ ಬೊಮ್ಮಾಯಿ (CM Basavaraj Bommai) ನೇತೃತ್ವದಲ್ಲೇ ಕರ್ನಾಟಕದಲ್ಲಿ ಮುಂದಿನ ಚುನಾವಣೆ ನಡೆಯಲಿದೆ ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರ ಹೇಳಿಕೆಗೆ ಶಿವಮೊಗ್ಗದಲ್ಲಿ ಪ್ರತಿಕ್ರಿಯಿಸಿರುವ ಸಚಿವ ಕೆ.ಎಸ್. ಈಶ್ವರಪ್ಪ (KS Eshwarappa) ಸಾಮೂಹಿಕ ನಾಯಕತ್ವದಲ್ಲಿ ರಾಜ್ಯದ ಮುಂದಿನ ಚುನಾವಣೆ ನಡೆಯಲಿದೆ ಎಂದು ಹೇಳಿದ್ದಾರೆ. ಅಮಿತ್ ಶಾ ಯಾವ ಅರ್ಥದಲ್ಲಿ ಅಮಿತ್ ಶಾ ನೇತೃತ್ವದಲ್ಲೇ ಚುನಾವಣೆ ನಡೆಯಲಿದೆ (Karnataka Assembly Selection) ಎಂದು ಹೇಳಿದ್ದಾರೋ ನಮಗೆ ಗೊತ್ತಿಲ್ಲ. ಆದರೆ, ಸಾಮೂಹಿಕ ನಾಯಕತ್ವದ ಬಗ್ಗೆ ರಾಜ್ಯ ನಾಯಕರ ಒಲವು ಇದೆ ಎಂದು ಶಿವಮೊಗ್ಗದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.
ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಸವರಾಜ ಬೊಮ್ಮಾಯಿ ಅವರ ಪಾತ್ರವೂ ಇರುತ್ತದೆ. ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲು ಪಕ್ಷ ಸಂಘಟನೆ ಮಾಡುತ್ತಿದ್ದಾರೆ. ಎಲ್ಲರೂ ಒಟ್ಟಿಗೆ ಸೇರಿಕೊಂಡು ಪಕ್ಷ ಕಟ್ಟುವ ಕೆಲಸ ಮಾಡ್ತಿದ್ದೇವೆ. ಮುಂದಿನ ಚುನಾವಣೆ ಸಾಮೂಹಿಕ ನಾಯಕತ್ವದಲ್ಲೇ ಚುನಾವಣೆ ನಡೆಯುತ್ತದೆ ಎನ್ನುವ ಮೂಲಕ ಅಮಿತ್ ಶಾ ಅವರ ಹೇಳಿಕೆಯನ್ನು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ತಳ್ಳಿ ಹಾಕಿದ್ದಾರೆ.
ಹುಬ್ಬಳ್ಳಿ- ಧಾರವಾಡ, ಬೆಳಗಾವಿ, ಕಲಬುರಗಿಯಲ್ಲಿ ಚುನಾವಣೆ ನಡೆಯುತ್ತಿದೆ. ನಾನು ಕೂಡ ಆ ಭಾಗಕ್ಕೆ ಹೋಗಿ ಬಂದಿದ್ದೇನೆ. ಅಲ್ಲಿಯ ಜನತೆ ಬಿಜೆಪಿಯ ಜೊತೆಗೆ ಇದ್ದಾರೆ. ಕಾರ್ಯಕರ್ತರು ತುಂಬಾ ಉತ್ಸಾಹದಲ್ಲಿ ಕೆಲಸ ಮಾಡಿದ್ದಾರೆ. ಮೂರು ಮಹಾನಗರ ಪಾಲಿಕೆಯಲ್ಲಿ ಪೂರ್ಣ ಬಹುಮತವನ್ನು ಬಿಜೆಪಿ ಪಡೆಯಲಿದೆ ಎಂದು ಸಚಿವ ಈಶ್ವರಪ್ಪ ಭರವಸೆ ವ್ಯಕ್ತಪಡಿಸಿದ್ದಾರೆ.
ಕರ್ನಾಟಕದಲ್ಲಿ ಮತ್ತೆ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಬಿಜೆಪಿ ಬಹುಮತದೊಂದಿಗೆ ಸರ್ಕಾರ ರಚಿಸಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದರು. ಕರ್ನಾಟಕ ಸರ್ಕಾರವನ್ನು ಬಹಳ ಸೂಕ್ಷ್ಮವಾಗಿ ದೆಹಲಿಯಲ್ಲಿ ಗಮನಿಸಲಾಗುತ್ತಿದೆ. ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮುಂದೆ ಕರ್ನಾಟಕದಲ್ಲಿ ಸರ್ಕಾರ ಅಧಿಕಾರಕ್ಕೆ ಬರಲಿದೆ. ಮುಂದೆ ಕೊವಿಡ್ ಮಹಾಮಾರಿ ಬಂದರೂ ಭಾರತದಲ್ಲಿ ಆಕ್ಸಿಜನ್ ಸಮಸ್ಯೆಯಾಗುವುದಿಲ್ಲ. ಸರ್ಕಾರವನ್ನು ಬಹಳ ಸಮರ್ಥವಾಗಿ ನಿಭಾಯಿಸಿದ ಬಿ.ಎಸ್. ಯಡಿಯೂರಪ್ಪ ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಬಸವರಾಜ ಬೊಮ್ಮಾಯಿ ಅವರಿಗೆ ಮುಖ್ಯಮಂತ್ರಿ ಹುದ್ದೆ ನೀಡುವಂತೆ ಹೇಳಿದ್ದರು. ಇದಕ್ಕೆ ನಾವು ಒಪ್ಪಿಗೆ ಸೂಚಿಸಿ, ಬಸವರಾಜ ಬೊಮ್ಮಾಯಿ ಅವರನ್ನು ಹೊಸ ಸಿಎಂ ಆಗಿ ಆಯ್ಕೆ ಮಾಡಿತ್ತು.
ರಾಜ್ಯದಲ್ಲಿ ಗಣೇಶ ಹಬ್ಬದ ಆಚರಣೆ ವಿಚಾರವಾಗಿಯೂ ಪ್ರತಿಕ್ರಿಯೆ ನೀಡಿರುವ ಸಚಿವ ಕೆ.ಎಸ್. ಈಶ್ವರಪ್ಪ, ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಅಧಿಕಾರ ನಡೆಸುತ್ತಿದೆ. ನಾವು ಹಿಂದುತ್ವದ ಹೆಸರಿನಲ್ಲೇ ಅಧಿಕಾರಕ್ಕೆ ಬಂದವರು. ಇದರಲ್ಲಿ ಯಾವುದೇ ಅನುಮಾನವಿಲ್ಲ. ನಾವು ಸದಾ ಹಿಂದುತ್ವದ ಸಿದ್ಧಾಂತವನ್ನು ಒಪ್ಪುತ್ತೇವೆ. ಈ ಬಾರಿಯೂ ಗಣಪತಿ ಉತ್ಸವ ಯಶಸ್ವಿಯಾಗಿ ನಡೆಸಬೇಕು. ಈ ನಿರ್ಧಾರದಿಂದ ನಾವು ಯಾವ ಕಾರಣಕ್ಕೂ ಹಿಂದೆ ಸರಿಯಲ್ಲ. ಗಣಪತಿ ಉತ್ಸವವನ್ನು ನಡೆಸೇ ನಡೆಸುತ್ತೇವೆ. ಆದರೆ, ಕೋವಿಡ್ ಸಂದರ್ಭದಲ್ಲಿ ಹೇಗೆ ನಡೆಸಬೇಕು, ಎಷ್ಟು ಜನ ಸೇರಬೇಕು ಎಂಬುದನ್ನು ಗಮನಿಸಬೇಕು ಎಂದಿದ್ದಾರೆ.
ಗಣಪತಿ ಉತ್ಸವದ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ನೀತಿ- ನಿಯಮಗಳ ಮಾರ್ಗಸೂಚಿ ಪ್ರಕಟಿಸಲಿದ್ದಾರೆ. ನನಗೆ ಪೂರ್ಣ ನಂಬಿಕೆಯಿದೆ. ಗಣೇಶೋತ್ಸವ ಯಶಸ್ವಿಯಾಗಿ ನಡೆಯಲಿದೆ. ಸರ್ಕಾರ ಕೂಡ ಅದಕ್ಕೆ ಪೂರ್ಣ ಬೆಂಬಲ ಕೊಡುತ್ತದೆ. ರಾಜ್ಯದ ಜನ ಕೂಡ ಅದನ್ನ ಗಮನಿಸ್ತಾರೆ. ಜನಾಶೀರ್ವಾದ ಯಾತ್ರೆ ಸಂದರ್ಭದಲ್ಲಿ ಜನ ಸೇರಿದ್ದನ್ನು ನಾನು ಒಪ್ಪುವುದಿಲ್ಲ. ತುಂಬಾ ಸ್ಪಷ್ಟವಾಗಿ ಬಿಜೆಪಿಯ ಒಬ್ಬ ಮಂತ್ರಿಯಾಗಿ ಹೇಳೋಕೆ ಇಷ್ಟ ಪಡುತ್ತೇನೆ ಎಂದು ಕೆ.ಎಸ್. ಈಶ್ವರಪ್ಪ ಸ್ಪಷ್ಟಪಡಿಸಿದ್ದಾರೆ.
ಇದನ್ನೂ ಓದಿ: ಬೊಮ್ಮಾಯಿ ನೇತೃತ್ವದಲ್ಲೇ ಮುಂದಿನ ಚುನಾವಣೆ: ಗೃಹ ಸಚಿವ ಅಮಿತ್ ಶಾ ಘೋಷಣೆ
(Karnataka Minister KS Eshwarappa denied Amit Shah Statement on Basavaraj Bommai Leadership in 2023 Assembly Polls)
Published On - 3:44 pm, Fri, 3 September 21