ಶೇ 100 ರಷ್ಟು ಹೆಚ್ಚಾಗಲಿದೆ ಕರ್ನಾಟಕ ಸಿಎಂ, ಸಚಿವರು, ಶಾಸಕರ ವೇತನ: ಇಲ್ಲಿದೆ ಸಂಬಳ ಏರಿಕೆ ವಿವರ

|

Updated on: Mar 21, 2025 | 9:50 AM

ಗ್ಯಾರಂಟಿ ಯೋಜನೆಗಳ ಹೊರೆ, ಸಾಲದ ಸುಳಿಯಿಂದ ಸಂಕಷ್ಟದಲ್ಲಿರುವ ಕರ್ನಾಟಕ ಸರ್ಕಾರವು ಮುಖ್ಯಮಂತ್ರಿ, ಸಚಿವರ ಹಾಗೂ ಶಾಸಕರ ವೇತನ ಹಾಗೂ ಭತ್ಯೆ ಹೆಚ್ಚಳ ಸಂಬಂಧ ತಿದ್ದುಪಡಿ ಮಸೂದೆ ಮಂಡಿಸಲು ರಾಜ್ಯಪಾಲರ ಅನುಮತಿ ಪಡೆಯುವಲ್ಲಿ ಯಶಸ್ವಿಯಾಗಿದೆ. ಇದರಿಂದಾಗಿ, ವೇತನ ಹೆಚ್ಚಳ ಸಂಬಂಧಿತ ತಿದ್ದುಪಡಿ ಮಸೂದೆ ವಿಧಾನಸಭೆಯಲ್ಲಿ ಮಂಡನೆಯಾಗಲಿದ್ದು, ಜನ ಪ್ರತಿನಿಧಿಗಳ ಸಂಬಳ ಹೆಚ್ಚಾಗಲಿದೆ. ಯಾರ ವೇತನ ಎಷ್ಟು ಹೆಚ್ಚಾಗಲಿದೆ ಎಂಬ ವಿವರ ಇಲ್ಲಿದೆ.

ಶೇ 100 ರಷ್ಟು ಹೆಚ್ಚಾಗಲಿದೆ ಕರ್ನಾಟಕ ಸಿಎಂ, ಸಚಿವರು, ಶಾಸಕರ ವೇತನ: ಇಲ್ಲಿದೆ ಸಂಬಳ ಏರಿಕೆ ವಿವರ
ಸಾಂದರ್ಭಿಕ ಚಿತ್ರ
Follow us on

ಬೆಂಗಳೂರು, ಮಾರ್ಚ್ 21: ಕರ್ನಾಟಕ ಸರ್ಕಾರವು (Karnataka Govt) ಮುಖ್ಯಮಂತ್ರಿ, ಸಚಿವರು ಮತ್ತು ಶಾಸಕರ (MLAs Salary) ವೇತನವನ್ನು ಶೇ 100 ರಷ್ಟು ಹೆಚ್ಚಿಸಲು ಮುಂದಾಗಿದ್ದು, ಈ ಪ್ರಸ್ತಾವಕ್ಕೆ ರಾಜ್ಯಪಾಲರಿಂದ (Karnataka Governor) ಅನುತಿಯೂ ದೊರೆತಿದೆ. ಕಲಾಪ ವ್ಯವಹಾರಗಳ ಸಲಹಾ ಸಮಿತಿಯ ನಿರ್ಣಯದಂತೆ ‘ಕರ್ನಾಟಕ ಸಚಿವರ ವೇತನ ಮತ್ತು ಭತ್ಯೆ (ತಿದ್ದುಪಡಿ) ಮಸೂದೆ 2025’ ಮತ್ತು ‘ಕರ್ನಾಟಕ ಶಾಸಕಾಂಗ ಸದಸ್ಯರ ವೇತನ, ಪಿಂಚಣಿ ಮತ್ತು ಭತ್ಯೆ (ತಿದ್ದುಪಡಿ) ಮಸೂದೆ 2025’ ಕ್ಕೆ ರಾಜ್ಯಪಾಲರ ಅನುಮತಿ ಪಡೆಯುವಲ್ಲಿ ಸರ್ಕಾರ ಯಶಸ್ವಿಯಾಗಿದೆ. ತಿದ್ದುಪಡಿ ಮಸೂದೆಯನ್ನು ವಿಧಾನಸಭೆ ಹಾಗೂ ಪರಿಷತ್​​ನಲ್ಲಿ ಸರ್ಕಾರ ಮಂಡಿಸಲಿದ್ದು ಅನುಮೋದನೆ ಪಡೆಯಲಿದೆ. ಪರಿಣಾಮವಾಗಿ ಮುಖ್ಯಮಂತ್ರಿಗಳು, ಸಚಿವರು ಹಾಗೂ ಶಾಸಕರ ವೇತನ ಮತ್ತು ಭತ್ಯೆಗಳಲ್ಲಿ ಹೆಚ್ಚಳವಾಗಲಿದೆ.

ಎಷ್ಟು ಹೆಚ್ಚಾಗಲಿದೆ ಸಿಎಂ, ಸಚಿವರ ವೇತನ?

ಸಿಎಂ ವೇತನ ತಿಂಗಳಿಗೆ 1.5 ಲಕ್ಷ ರೂ.ಗೆ ಏರಿಕೆಯಾಗಲಿದ್ದು, ಇದು ಶೇ 100 ರ ಹೆಚ್ಚಳವಾಗಿರಲಿದೆ. ಸಚಿವರ ವೇತನ 1.25 ಲಕ್ಷ ರೂ.ಗೆ ಏರಿಕೆಯಾಗಲಿದೆ. ಶಾಸಕರು ಹಾಗೂ ವಿಪಕ್ಷ ನಾಯಕರ ವೇತನ 80 ಸಾವಿರ ರೂ.ಗೆ ಏರಿಕೆಯಾಗಲಿದೆ. ಸಚಿವರ ಮನೆ ಬಾಡಿಗೆ ಭತ್ಯೆ 2.50 ಲಕ್ಷ ರೂ.ಗೆ ಹೆಚ್ಚಾಗಲಿದೆ.

ಶಾಸಕರು ಸೇರಿದಂತೆ ಯಾರ ವೇತನ ಎಷ್ಟು ಹೆಚ್ಚಳ?

ಶಾಸಕರ ವೇತನ 40 ಸಾವಿರ ರೂ.ನಿಂದ 80 ಸಾವಿರ ರೂ.ಗೆ ಹೆಚ್ಚಳವಾಗಲಿದೆ. ಅದರ ಜತೆಗೆ ವಿಧಾನಸಭಾಧ್ಯಕ್ಷ ಮತ್ತು ವಿಧಾನಪರಿಷತ್‌ ಸಭಾಪತಿ ವೇತನ 75 ಸಾವಿರ ರೂ.ನಿಂದ 1.25 ಲಕ್ಷ ರೂ, ಸಿಎಂ ವೇತನ 75 ಸಾವಿರ ರೂ.ನಿಂದ 1.50 ಲಕ್ಷ ರೂ., ಸಚಿವರ ವೇತನ 60 ಸಾವಿರ ರೂ.ನಿಂದ 1.25 ಲಕ್ಷ ರೂ. ವರೆಗೆ ಹೆಚ್ಚಳವಾಗಲಿದೆ.

ಇದನ್ನೂ ಓದಿ
ಬೆಂಗಳೂರಿನಲ್ಲಿ ತಡರಾತ್ರಿ 1 ಗಂಟೆ ವರೆಗೆ ಪಬ್ ತೆರೆಯಲು ಅವಕಾಶ: ಡಿಕೆಶಿ
ಬೆಂಗಳೂರಿನ ಸ್ಯಾಂಕಿ ಕೆರೆ ದಡದ ಮೇಲೆ ಸಾರ್ವಜನಿಕರ ವಾಕಿಂಗ್ ಬಂದ್: ಕಾರಣ?
ಹರಪನಹಳ್ಳಿಯಲ್ಲಿ ಆಲಿಕಲ್ಲು ಸಹಿತ ಮಳೆ: ವರ್ಷದ ಮೊದಲ ಮಳೆಗೆ ಜನರು ಖುಷ್
ಆಪರೇಷನ್ ವಿಕ್ರಾಂತ್ ಸಕ್ಸಸ್: ಕಾಡಾನೆ ಸೆರೆ ಹಿಡಿದಿದ್ದೆ ರೋಚಕ

ಸರ್ಕಾರಕ್ಕೆ 62 ಕೋಟಿ ರೂ. ಹೆಚ್ಚುವರಿ ಹೊರೆ

ಸಚಿವರು, ಶಾಸಕರ ವೇತನ ಹೆಚ್ಚಳದಿಂದ ಸರ್ಕಾರಕ್ಕೆ 62 ಕೋಟಿ ರೂ. ಹೆಚ್ಚುವರಿ ಹೊರೆ ಅಂದಾಜಿಸಲಾಗಿದೆ. ಬಿಜೆಪಿ ಸರ್ಕಾರ 2022ರಲ್ಲಿ ಶಾಸಕರ ವೇತನ ಮತ್ತು ಭತ್ಯೆಗಳ ಪರಿಷ್ಕರಣೆ ಮಾಡಿತ್ತು. ಆಗ ಮಂಡಿಸಲಾಗಿದ್ದ ತಿದ್ದುಪಡಿ ವಿಧೇಯಕದಲ್ಲಿ ಬೆಲೆ ಸೂಚ್ಯಂಕ ಆಧಾರದಲ್ಲಿ 2023ರ ಏಪ್ರಿಲ್ 1ರಿಂದ 5 ವ ವರ್ಷಕ್ಕೊಮ್ಮೆ ವೇತನ ವೇತನ ಹೆಚ್ಚಿಸುವ ಬಗ್ಗೆ ವಿಧೇಯಕದಲ್ಲಿ ಪ್ರಸ್ತಾಪಿಸಲಾಗಿತ್ತು. ಆದರೆ, ಇದೀಗ 2 ವರ್ಷ ಪೂರ್ಣವಾಗುವ ಮೊದಲೇ ಶಾಸಕರ ವೇತನ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ.

ಇದನ್ನೂ ಓದಿ: ರಾಜಣ್ಣ ಮಾತ್ರವಲ್ಲಇನ್ನೂ ಮೂರು ಮಂತ್ರಿಗಳಿಗೂ ಹನಿಟ್ರ್ಯಾಪ್​: ಗ್ಯಾಂಗ್​​ನ ಹಿಡಿದು ಬಾಯ್ಬಿಡಿಸಿದ ಸಚಿವ!

ಸಚಿವರು, ಶಾಸಕರ ವೇತನ ಹೆಚ್ಚಳವನ್ನು ಗೃಹ ಸಚಿವ ಡಾ. ಜಿ ಪರಮೇಶ್ವರ ಹಾಗೂ ಇತರ ಸಚಿವರು ಸಮರ್ಥಿಸಿಕೊಂಡಿದ್ದಾರೆ. ಇತರ ಜನರೊಂದಿಗೆ ಸಚಿವರು, ಶಾಸಕರ ಖರ್ಚು ಕೂಡ ಹೆಚ್ಚಾಗುತ್ತಿದೆ. ಸಾಮಾನ್ಯ ಮನುಷ್ಯ ಕೂಡ ಬೆಲೆ ಏರಿಕೆಯಿಂದ ಬಳಲುತ್ತಿದ್ದಾನೆ, ಮತ್ತು ಶಾಸಕರೂ ಇದಕ್ಕೆ ಹೊರತಲ್ಲ. ಆದ್ದರಿಂದ, ಶಾಸಕರು ಮತ್ತು ಇತರರಿಂದ ಶಿಫಾರಸುಗಳು ಬಂದಿವೆ, ಮತ್ತು ಅದಕ್ಕಾಗಿಯೇ ಮುಖ್ಯಮಂತ್ರಿ ಈ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ ಎಂದು ಪರಮೇಶ್ವರ್ ಹೇಳಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ