ನಾನು 35 ಮಾಕ್ಸ್ ಕೆಟಗೆರಿಯವನು ಅದಕ್ಕೆ ಕೈಗಾರಿಕಾ ಸಚಿವನಾದೆ; ಸಚಿವ ಮುರುಗೇಶ್ ನಿರಾಣಿ

| Updated By: ಸುಷ್ಮಾ ಚಕ್ರೆ

Updated on: Sep 27, 2021 | 7:05 PM

ನಾನು ಇಂಜಿನಿಯರಿಂಗ್‍ನಲ್ಲಿ ಹೆಚ್ಚು ಅಂಕಗಳನ್ನು ತೆಗೆದುಕೊಂಡಿದ್ದರೆ ಪ್ರೊಫೆಸರ್ ಅಥವಾ ಹೆಚ್ಚೆಂದರೆ ಎಇಇ ಆಗುತ್ತಿದ್ದೆ. ಆದರೆ ನಾನು 35 ಮಾಕ್ಸ್ ಕೆಟಗೆರಿಯವನು. ಅದಕ್ಕೆ ಕೈಗಾರಿಕಾ ಸಚಿವನಾದೆ ಎಂದು ಹೇಳುತ್ತಿದ್ದಂತೆ ಸಭಿಕರಿಂದ ಜೋರಾದ ಚಪ್ಪಾಳೆಯ ಸುರಿಮಳೆಯೇ ಸುರಿಯಿತು.

ನಾನು 35 ಮಾಕ್ಸ್ ಕೆಟಗೆರಿಯವನು ಅದಕ್ಕೆ ಕೈಗಾರಿಕಾ ಸಚಿವನಾದೆ; ಸಚಿವ ಮುರುಗೇಶ್ ನಿರಾಣಿ
ಕೆಎಲ್​ಇ ಕಾಲೇಜಿನಲ್ಲಿ ಬಸವರಾಜ ಬೊಮ್ಮಾಯಿ, ಮುರುಗೇಶ್ ನಿರಾಣಿ
Follow us on

ಹುಬ್ಬಳ್ಳಿ: ಅದೊಂದು ಅಪರೂಪದ ಕ್ಷಣ. ಅಲ್ಲಿ ಅಧಿಕಾರದ ಹಮ್ಮು- ಬಿಮ್ಮು, ದೊಡ್ಡವರು, ಚಿಕ್ಕವರು ಯಾವುದೂ ಇರಲಿಲ್ಲ. ಬದಲಿಗೆ ವಿಧೇಯಕ ವಿದ್ಯಾರ್ಥಿಗಳಂತೆ ಅವರೆಲ್ಲರೂ ಬೆರೆತರು. ಹಳೆಯ ನೆನಪುಗಳನ್ನು ಮೆಲುಕು ಹಾಕಿದರು. ಇಂತಹ ಅಪರೂಪದ ಘಟನೆಗೆ ಸಾಕ್ಷಿಯಾಗಿದ್ದು ಹುಬ್ಬಳ್ಳಿ ಪ್ರತಿಷ್ಠಿತ ಬಿವಿಬಿ ಎಂಜಿನಿಯರಿಂಗ್ ಕಾಲೇಜು.

ಕೆಎಲ್‍ಇ ತಾಂತ್ರಿಕ ವಿಶ್ವವಿದ್ಯಾಲಯದ ಬಿ.ವಿ.ಭೂಮರಡ್ಡಿ ಇಂಜಿನಿಯರಿಂಗ್ ಕಾಲೇಜಿನ 75ನೇ ವರ್ಷಾಚರಣೆ ಹಾಗೂ ಕೆಎಲ್‍ಇ ಟೆಕ್ ಪಾರ್ಕ್ ಉದ್ಘಾಟನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮಕ್ಕೆ ಸಾಕ್ಷಿಯಾಗಿದ್ದು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ.

ಇದರಲ್ಲಿ ವಿಶೇಷತೆ ಎಂದರೆ ಈ ಇಬ್ಬರೂ ಇದೇ ಕಾಲೇಜಿನ ಸಹಪಾಠಿಗಳು. ಹಾಗಾಗಿಯೇ ಇಂದು ಅವರು ಉನ್ನತ ಸ್ಥಾನಮಾನದಲ್ಲಿದ್ದರೂ ತಾವು ಕಾಲೇಜಿನ ವಿಧೇಯಕ ಹಳೆಯ ವಿದ್ಯಾರ್ಥಿಗಳು. ಸ್ನೇಹದ ಮುಂದೆ ಅಧಿಕಾರ ಗೌಣ ಎಂಬುದನ್ನು ಅಕ್ಷರಶಃ ತೋರಿಸಿಕೊಟ್ಟರು.

ಮೊದಲು ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ ಅವರು, ಕಾಲೇಜಿನ ಹಳೆಯ ನೆನಪುಗಳನ್ನು ಮೆಲುಕು ಹಾಕಿದರು. ಪ್ರಾಧ್ಯಾಪಕರು,ಹಿರಿಯ-ಕಿರಿಯ ಸಹಪಾಠಿಗಳನ್ನು, ಹಾಜರಾಗದ ಪ್ರಯೋಗಾಲಯಗಳು, ಪುಸ್ತಕ ಪಡೆಯದ ಗ್ರಂಥಾಲಯಗಳು, ಹಾಸ್ಟೆಲು, ಕ್ಯಾಂಪಸ್, ಕ್ಯಾಂಟೀನ್ ಎಲ್ಲವನ್ನೂ ವಿನೋದವಾಗಿ ನೆನಪಿಸಿಕೊಂಡರು. ಹಿಂದೆ ನಾನು ವಿದ್ಯಾರ್ಥಿಯಾಗಿದ್ದಾಗ ಕರ್ನಾಟಕ ವಿಶ್ವವಿದ್ಯಾಲಯದ ಕುಲಪತಿಗಳಾಗಿದ್ದ ಡಾ. ಡಿ.ಎಂ. ನಂಜುಂಡಪ್ಪ ಅವರ ಕಾಠಿಣ್ಯ, ಶಿಸ್ತು, ಬದ್ಧತೆಯಿಂದ ನಮ್ಮ ವ್ಯಾಸಂಗ ಪೂರ್ಣವಾಗಲು ಸಾಧ್ಯವಾಯಿತು ಎಂದು ಸ್ಮರಿಸಿಕೊಂಡರು.

ಕಾರ್ಯಕ್ರಮಕ್ಕೆ ಮತ್ತಷ್ಟು ಸೊಬಗು ತಂದವರು ಸಚಿವ ಮುರುಗೇಶ್ ಆರ್. ನಿರಾಣಿ. ಇದೇ ಕಾಲೇಜಿನ ವಿದ್ಯಾರ್ಥಿಯಾಗಿ ಇಂದು ದೇಶದ ಹೆಮ್ಮೆಯ ಕೈಗಾರಿಕೋದ್ಯಮಿಯಾಗಿರುವ ಬೃಹತ್, ಮಧ್ಯಮ ಕೈಗಾರಿಕೆ ಸಚಿವರಾಗಿರುವ ಮುರುಗೇಶ್ ನಿರಾಣಿ ತಮ್ಮ ಕಾಲೇಜಿನ ಹಳೆಯ ದಿನಗಳನ್ನು ಮೆಲುಕು ಹಾಕಿದರು.

ನಾನು ಇಂಜಿನಿಯರಿಂಗ್‍ನಲ್ಲಿ ಹೆಚ್ಚು ಅಂಕಗಳನ್ನು ತೆಗೆದುಕೊಂಡಿದ್ದರೆ ಪ್ರೊಫೆಸರ್ ಅಥವಾ ಹೆಚ್ಚೆಂದರೆ ಎಇಇ ಆಗುತ್ತಿದ್ದೆ. ಆದರೆ ನಾನು 35 ಮಾಕ್ಸ್ ಕೆಟಗೆರಿಯವನು. ಅದಕ್ಕೆ ಕೈಗಾರಿಕಾ ಸಚಿವನಾದೆ ಎಂದು ಹೇಳುತ್ತಿದ್ದಂತೆ ಸಭಿಕರಿಂದ ಜೋರಾದ ಚಪ್ಪಾಳೆಯ ಸುರಿಮಳೆಯೇ ಸುರಿಯಿತು.

ಇದಕ್ಕೆ ಅಷ್ಟೇ ಹಾಸ್ಯಭರಿತವಾಗಿ ಪ್ರತಿಕ್ರಿಯಿಸಿದ ಸಚಿವ ಮುರುಗೇಶ್ ನಿರಾಣಿ, ನಿಮ್ಮ ಚಪ್ಪಾಳೆ ನೋಡಿದರೆ ಇಲ್ಲಿ ನನ್ನ ಕೆಟಗರಿಯವರೇ ಬಹಳ ಜನ ಇದ್ದಾರೆಂದು ತಿಳಿಯುತ್ತದೆ ಎಂದು ತಮಾಷೆ ಮಾಡಿದರು.

ನಾನು ಈ ಕಾಲೇಜಿನ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವುದು ಬಹಳ ಖಯಷಿಯಾಗುತ್ತದೆ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ‌ಅಮಿತ್ ಶಾ ಸೇರಿದಂತೆ ‌ಅನೇಕರ ಕಾರ್ಯಕ್ರಮದಲ್ಲೂ ಭಾಗಿಯಾಗಿದ್ದೆನೆ. ಅದಕ್ಕಿಂದ ಖುಷಿ ಈ ಕಾರ್ಯಕ್ರಮ ನೀಡುತ್ತಿದೆ ಎಂದು ಸಂತಸ ವ್ಯಕ್ತಪಡಿಸಿದರು. ಬಿವಿಬಿ ಕಾಲೇಜು ಸಾಕಷ್ಟು ಜನ ಮೇಧಾವಿಗಳನ್ನು ನೀಡಿದೆ. ವಿಶ್ವದಲ್ಲೇ ಶ್ರೇಷ್ಠ ಐಟಿ ಕಂಪನಿಯಾದ ಇನ್ಫೋಸಿಸ್‍ನ ನಾರಾಯಣಮೂರ್ತಿ ಅವರ ಪತ್ನಿ ಸುಧಾ ಮೂರ್ತಿ, ಬಿಜೆಪಿಯ ಕೇಂದ್ರದ ಮಾಜಿ ಸಚಿವ ದಿ. ಅನಂತಕುಮಾರ ಕೂಡ ಈ ಕಾಲೇಜಿನ ವಿದ್ಯಾರ್ಥಿಗಳು ಎಂದು ಹೆಮ್ಮೆಯಿಂದ ಹೇಳಿದರು.

ಇದನ್ನೂ ಓದಿ: 2022ರ ನವೆಂಬರ್ 2ರಿಂದ ಬೆಂಗಳೂರಿನಲ್ಲಿ ಹೂಡಿಕೆದಾರರ ಸಮಾವೇಶ; ಸಚಿವ ಮುರುಗೇಶ್ ನಿರಾಣಿ ಘೋಷಣೆ

Bangalore: ನಿಮಗಿದು ಗೊತ್ತೇ?; 55 ವರ್ಷದ ಹಿಂದೆ ಸಂಚಾರ ಶುರು ಮಾಡಿದ ಕರ್ನಾಟಕದ ಮೊದಲ ಸ್ಲೀಪರ್ ಬಸ್ ಹೀಗಿತ್ತು

(Karnataka Minister Murugesh Nirani CM Basavaraj Bommai Speech in Hubli KLE Engineering College)