AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೈಗಾರಿಕಾ ಪ್ರದೇಶದಲ್ಲಿ ರೆಸಿಡೆನ್ಷಿಯಲ್ ಟೌನ್​ಶಿಪ್ ನಿರ್ಮಾಣ; ಸಚಿವ ಮುರುಗೇಶ್ ನಿರಾಣಿ ನಿರ್ಧಾರ

ಸಮಗ್ರ ಕೈಗಾರಿಕಾ ನಿವಾಸಿಗಳ ನಗರ ಪರಿಕಲ್ಪನೆಯಲ್ಲಿ ಕೈಗಾರಿಕಾ ಪ್ರದೇಶದಲ್ಲಿನ ಜಾಗವನ್ನು ಶೇ. 10ರಿಂದ 15ರಷ್ಟು ವಸತಿ ಬಡಾವಣೆಯ ಉದ್ದೇಶಕ್ಕಾಗಿ ಕಾಯ್ದಿರಿಸಬೇಕೆಂದು ಮುರುಗೇಶ್ ನಿರಾಣಿ ಸೂಚಿಸಿದ್ದಾರೆ.

ಕೈಗಾರಿಕಾ ಪ್ರದೇಶದಲ್ಲಿ ರೆಸಿಡೆನ್ಷಿಯಲ್ ಟೌನ್​ಶಿಪ್ ನಿರ್ಮಾಣ; ಸಚಿವ ಮುರುಗೇಶ್ ನಿರಾಣಿ ನಿರ್ಧಾರ
ಮುರುಗೇಶ್ ನಿರಾಣಿ ಸಭೆ
TV9 Web
| Edited By: |

Updated on: Aug 20, 2021 | 6:05 PM

Share

ಬೆಂಗಳೂರು: ಇನ್ನು ಮುಂದೆ ಕೈಗಾರಿಕಾ ಪ್ರದೇಶಗಳಲ್ಲಿ ಶೇ.10ರಿಂದ 15ರಷ್ಟು ಜಾಗವನ್ನು ವಸತಿ ಬಡಾವಣೆ (ರೆಸಿಡೆನ್ಸಿಯಲ್ ಟೌನ್‍ಶಿಪ್)ಗಳ ನಿರ್ಮಾಣದ ಉದ್ದೇಶಕ್ಕಾಗಿ ಮೀಸಲಿಡಲು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಇಲಾಖೆ ಸಚಿವ ಮುರುಗೇಶ್ ನಿರಾಣಿ ನಿರ್ಧರಿಸಿದ್ದಾರೆ. ಈ ಸಂಬಂಧ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಇ.ವಿ. ರಮಣ ರೆಡ್ಡಿ, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಆಯುಕ್ತೆ ಗುಂಜನ್ ಕೃಷ್ಣ, ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ(ಕೆಐಎಡಿಬಿ) ಮುಖ್ಯ ಕಾರ್ಯ ನಿರ್ವಹಣಾಕಾರಿ (ಸಿಇಒ) ಎನ್. ಶಿವಶಂಕರ ಸೇರಿದಂತೆ ಮತ್ತಿತರ ಅಧಿಕಾರಿಗಳ ಜೊತೆ ಗುರುವಾರ ನಡೆಸಿದ ಸಭೆಯಲ್ಲಿ ಈ ಮಹತ್ವದ ತೀರ್ಮಾನವನ್ನು ಕೈಗೊಂಡಿದ್ದಾರೆ.

ಮೀಸಲಿರಿಸಿದ ಜಾಗದಲ್ಲಿ ಶಾಲಾ-ಕಾಲೇಜುಗಳು, ಆರೋಗ್ಯ ಕೇಂದ್ರ, ವಾಣಿಜ್ಯ ಸಂಕೀರ್ಣಗಳು, ಉದ್ಯಾನವನ ಸೇರಿದಂತೆ ಸಾರ್ವಜನಿಕರಿಗೆ ಅನುಕೂಲವಾಗುವ ಎಲ್ಲಾ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿಕೊಡಲು ಯೋಜನೆ ರೂಪಿಸಬೇಕೆಂದು ಅಧಿಕಾರಿಗಳಿಗೆ ಸಲಹೆ ಮಾಡಿದ್ದಾರೆ. ಸಮಗ್ರ ಕೈಗಾರಿಕಾ ನಿವಾಸಿಗಳ ನಗರ (ಇಂಟಿಗ್ರೇಟೆಡ್ ಇಂಡಸ್ಟ್ರಿಯಲ್ ರೆಸಿಡೆನ್ಸಿಯಲ್ ಟೌನ್‍ಶಿಪ್) ಪರಿಕಲ್ಪನೆಯಲ್ಲಿ ಕೈಗಾರಿಕಾ ಪ್ರದೇಶದಲ್ಲಿನ ಜಾಗವನ್ನು ಶೇ. 10ರಿಂದ 15ರಷ್ಟು ವಸತಿ ಬಡಾವಣೆಯ ಉದ್ದೇಶಕ್ಕಾಗಿ ಕಾಯ್ದಿರಿಸಬೇಕೆಂದು ಮುರುಗೇಶ್ ನಿರಾಣಿ ಸೂಚಿಸಿದ್ದಾರೆ.

ವಾಕ್ -ಟು -ವರ್ಕ್ ಎಂಬ ಪರಿಕಲ್ಪನೆಯಡಿ ಕೈಗಾರಿಕಾ ಪ್ರದೇಶಗಳಲ್ಲಿ ವಾಸ ಮಾಡುವ ಜನರಿಗೆ ಅಗತ್ಯವಿರುವ ಎಲ್ಲ ರೀತಿಯ ಸೌಲಭ್ಯಗಳನ್ನು ಕಲ್ಪಿಸಿಕೊಡಬೇಕೆಂಬ ಯೋಜನೆ ಹಾಕಿಕೊಳ್ಳಲಾಗಿದೆ. ಕೈಗಾರಿಕೆಗಳಲ್ಲಿ ಕಾರ್ಯ ನಿರ್ವಹಿಸುವ ಸಿಬ್ಬಂದಿಗಳಿಗೆ ತಾವು ವಾಸಿಸುವ ಪ್ರದೇಶದಿಂದ ಬಂದು ಹೋಗಲು ಸಂಚಾರ ದಟ್ಟಣೆ, ವಾಹನಗಳ ಸಮಸ್ಯೆ, ಸಮಯದ ಅಭಾವ ಹೀಗೆ ನಾನಾ ರೀತಿಯ ಸಮಸ್ಯೆಗಳು ಎದುರಾಗುತ್ತಿವೆ. ಇದನ್ನು ತಪ್ಪಿಸುವ ನಿಟ್ಟಿನಲ್ಲಿ ಈ ವಿನೂತನ ಯೋಜನೆಯನ್ನು ಹಾಕಿಕೊಳ್ಳಲಾಗಿದೆ.

ಬೆಂಗಳೂರಿನಲ್ಲಿ ಕೈಗಾರಿಕೆಗಳಿದ್ದರೆ ದೇವನಹಳ್ಳಿ, ನೆಲಮಂಗಲ, ಹೊಸಕೋಟೆ ಸೇರಿದಂತೆ ದೂರದಿಂದ ಬರಲು ಸಿಬ್ಬಂದಿಗಳಿಗೆ ಅನಾನುಕೂಲವಾಗಲಿವೆ. ಕೈಗಾರಿಕಾ ಪ್ರದೇಶದಲ್ಲೇ ವಸತಿಗಳನ್ನು ನಿರ್ಮಿಸಿಕೊಟ್ಟರೆ ಸಮಯದ ಉಳಿತಾಯ ಹಾಗೂ ದಕ್ಷತೆಯಿಂದ ಕೆಲಸ ಮಾಡಲು ಅನುಕೂಲವಾಗುತ್ತದೆ ಎಂಬ ಅಭಿಪ್ರಾಯವೂ ವ್ಯಕ್ತವಾಗಿದೆ.

ಈ ಪ್ರದೇಶವನ್ನು ಸಂಪೂರ್ಣವಾಗಿ ಅಭಿವೃದ್ಧಿಪಡಿಸಿ ವಸತಿ ಸಮುಚ್ಛಯಗಳು, ಆಸ್ಪತ್ರೆ, ಮಾಲ್‍ಗಳು, ಶಾಲಾ-ಕಾಲೇಜುಗಳು, ನೀರಿನ ಸೌಲಭ್ಯ ಸೇರಿದಂತೆ ಎಲ್ಲ ರೀತಿಯ ಸೌಲಭ್ಯವು ಇದರಲ್ಲಿ ಸಿಗಲಿವೆ. ನಿನ್ನೆ ಸಂಜೆ ಬೆಂಗಳೂರಿನ ಚೇಂಬರ್ ಆಫ್ ಇಂಡಸ್ಟ್ರೀಸ್ ಮತ್ತು ಕಾಮರ್ಸ್ (ಬಿಸಿಐಸಿ) ಯ 44 ನೇ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಭಾಗವಹಿಸಿದ್ದ ಸಚಿವ ಮುರುಗೇಶ್ ನಿರಾಣಿ, ಶೀಘ್ರದಲ್ಲಿಯೇ ಉನ್ನತ ಕೈಗಾರಿಕೋದ್ಯಮಿಗಳಿಗೆ ಮತ್ತು ಅವರ ಸಂಘಗಳಿಗೆ ತಮ್ಮ ಅಭಿಪ್ರಾಯವನ್ನು ತಿಳಿಸಲು ಮೇಲ್ ಬರೆಯುವುದಾಗಿ ಹೇಳಿದರು.

ಶೀಘ್ರದಲ್ಲೇ ಉನ್ನತ ಕೈಗಾರಿಕೋದ್ಯಮಿಗಳೊಂದಿಗೆ ಸಭೆ ನಡೆಸಲಾಗುವುದು. ಕೈಗಾರಿಕಾ ಅಭಿವೃದ್ಧಿ ಮತ್ತು ಹೂಡಿಕೆಗಳನ್ನು ಆಕರ್ಷಿಸುವ ವಿಷಯಗಳ ಬಗ್ಗೆ ಚರ್ಚಿಸಲಾಗುವುದು. ಕೈಗಾರಿಕಾ ವಲಯ ಮತ್ತು ಹೂಡಿಕೆದಾರರ ಸ್ನೇಹಿ ವಾತಾವರಣದಲ್ಲಿ ರಾಜ್ಯವನ್ನು ಮುಂಚೂಣಿಯ ಸ್ಥಾನದಲ್ಲಿ ಕಾಯ್ದುಕೊಳ್ಳುವಲ್ಲಿ ಸರ್ಕಾರ ಬದ್ದವಾಗಿದೆ ಎಂದು ‌ಆಶ್ವಾಸನೆ ನೀಡಿದ್ದಾರೆ.

ಕೈಗಾರಿಕಾ ವಲಯಕ್ಕೆ ಹೆಚ್ಚಿನ ಉತ್ತೇಜನ ನೀಡುವುದಾಗಿ ಭರವಸೆ ನೀಡಿದ ನಿರಾಣಿ, ಕರ್ನಾಟಕವು ಹೂಡಿಕೆದಾರರಿಗೆ ಆದ್ಯತೆಯ ತಾಣವಾಗಿದೆ. ಮುಂದಿನ ದಿನಗಳಲ್ಲಿ ಹೂಡಿಕೆದಾರ ಸ್ನೇಹಿ ಮತ್ತು ವ್ಯಾಪಾರ ಸ್ನೇಹಿ ಹಂತಗಳೊಂದಿಗೆ ನಾವು ಮತ್ತಷ್ಟು ಪ್ರಗತಿಯನ್ನು ಖಚಿತ ಪಡಿಸುತ್ತೇವೆ ಎಂದು ಭರವಸೆ ಕೊಟ್ಟರು.

ಕೈಗಾರಿಕೆಗಳ ಉದ್ದೇಶಕ್ಕಾಗಿ ರಾಜ್ಯಾದ್ಯಂತ ಒಟ್ಟು 82 ಸಾವಿರಕ್ಕೂ ಅಧಿಕ ಎಕರೆ ಜಮೀನು ಇದೆ. ಇದರಲ್ಲಿ 188 ಕೈಗಾರಿಕಾ ಘಟಕಗಳಿದ್ದು, 20 ಸಾವಿರಕ್ಕೂ ಅಧಿಕ ಕೈಗಾರಿಕೆಗಳು ಕಾರ್ಯ ನಿರ್ವಹಿಸುತ್ತಿವೆ. ಮುಂದಿನ 2ರಿಂದ 3 ವರ್ಷಗಳಲ್ಲಿ 9 ಸಾವಿರ ಎಕರೆ ಜಮೀನನ್ನು ಅಭಿವೃದ್ಧಿಪಡಿಸಲು ನೀಲನಕ್ಷೆ ರೂಪಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಕಾರ್ಯಕ್ರಮದಲ್ಲಿ ಬಾಷ್ ಲಿಮಿಟೆಡ್ ವ್ಯವಸ್ಥಾಪಕ ನಿದೇರ್ಶಕ ಹಾಗೂ ಭಾರತದ ಬಾಷ್ ಸಮೂಹ ಸಂಸ್ಥೆಯ ಅಧ್ಯಕ್ಷ ಸೌಮಿತ್ರ ಭಟ್ಟಾಚಾರ್ಯ ಹಾಗೂ ಬ್ರಿಗೇಡ್ ಎಂಟರ್​​ಪ್ರೈಸಸ್​ನ ವ್ಯವಸ್ಥಾಪಕ ನಿರ್ದೇಶಕ ಮತ್ತು ಅಧ್ಯಕ್ಷ ಎಂ.ಆರ್. ಜೈಶಂಕರ್, ಬಿಸಿಐಸಿ ಅಧ್ಯಕ್ಷರಾದ ಟಿ.ಆರ್. ಪರಶುರಾಮನ್ ಉಪಸ್ಥಿತರಿದ್ದರು.

ಸ್ವಾಧೀನಪಡಿಸಿಕೊಂಡಿರುವ ಭೂಮಿಯ ವಿವರ ಒಟ್ಟು ಕೈಗಾರಿಕಾ ಪ್ರದೇಶಗಳು- 188 ಒಟ್ಟು ಎಕರೆ- 81,864 ಘಟಕಗಳು- 20,972

ಭವಿಷ್ಯದಲ್ಲಿ ಅಭಿವೃದ್ಧಿಪಡಿಸಲು ಉದ್ದೇಶಿಸಿರುವ ಭೂಮಿಯ ವಿವರ ಒಟ್ಟು ಭೂಮಿ- 9010 ಎಕರೆ ಕೋಲಾರ ಜಿಲ್ಲೆ – ವೇಮಗಲ್ 2ನೇ ಹಂತ- 511 ಎಕರೆ ರಾಮನಗರ – ಹಾರೋಹಳ್ಳಿ 5ನೇ ಹಂತ – 912 ಎಕರೆ ಹಾವೇರಿ- ಗಣಚೂರು- 407 ಎಕರೆ, ಮಂಡ್ಯ- ಕುದುರುಗುಂಡೆ- 109 ಎಕರೆ ವಿಜಯಪುರ- ಮುಲವಾಡ- 2500 ಎಕರೆ ತುಮಕೂರು- ಶಿರಾ 2ನೇ ಹಂತ- 1200

ಇದನ್ನೂ ಓದಿ: ತೃತೀಯ ಲಿಂಗಿಗಳಿಗೆ ಸರ್ಕಾರಿ ನಿಗಮಗಳಲ್ಲೂ ಶೇಕಡಾ 1ರಷ್ಟು ಮೀಸಲಾತಿ ಸೂಕ್ತ: ಕರ್ನಾಟಕ ಹೈಕೋರ್ಟ್

Karnataka Dams Water Level: ಕರಾವಳಿಯಲ್ಲಿ ಮಳೆ ಹೆಚ್ಚಳ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

(Karnataka Minister Murugesh Nirani orders to Build Residential Township in Industrial Areas)

ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಔಷಧಿ ಖರೀದಿಲಿ ಭಾರಿ ಭ್ರಷ್ಟಾಚಾರ: ಕಮಿಷನ್ ಬೇಡಿಕೆಯ ಸ್ಫೋಟಕ ಆಡಿಯೋ ಇಲ್ಲಿದೆ
ಔಷಧಿ ಖರೀದಿಲಿ ಭಾರಿ ಭ್ರಷ್ಟಾಚಾರ: ಕಮಿಷನ್ ಬೇಡಿಕೆಯ ಸ್ಫೋಟಕ ಆಡಿಯೋ ಇಲ್ಲಿದೆ
ಥಿಯೇಟರ್​​ಗೆ ತೆರಳಿ ‘ಡೆವಿಲ್’ ವೀಕ್ಷಿಸಿದ ದರ್ಶನ್ ತಾಯಿ ಮೀನಾ
ಥಿಯೇಟರ್​​ಗೆ ತೆರಳಿ ‘ಡೆವಿಲ್’ ವೀಕ್ಷಿಸಿದ ದರ್ಶನ್ ತಾಯಿ ಮೀನಾ
2026 ಮಿಥುನ ರಾಶಿಯವರಿಗೆ ನಿರ್ಣಾಯಕ ವರ್ಷ; ವಾರ್ಷಿಕ ಭವಿಷ್ಯ ಇಲ್ಲಿದೆ
2026 ಮಿಥುನ ರಾಶಿಯವರಿಗೆ ನಿರ್ಣಾಯಕ ವರ್ಷ; ವಾರ್ಷಿಕ ಭವಿಷ್ಯ ಇಲ್ಲಿದೆ
ಸಿದ್ದರಾಮಯ್ಯ ಪರ ಯತ್ನಾಳ್ ಬ್ಯಾಟಿಂಗ್, ಬಿಜೆಪಿ ನಾಯಕರ ಬಗ್ಗೆ ವ್ಯಂಗ್ಯ
ಸಿದ್ದರಾಮಯ್ಯ ಪರ ಯತ್ನಾಳ್ ಬ್ಯಾಟಿಂಗ್, ಬಿಜೆಪಿ ನಾಯಕರ ಬಗ್ಗೆ ವ್ಯಂಗ್ಯ