ಅಕ್ರಮ ಸ್ಫೋಟಕಗಳನ್ನು ಹಿಂದಿರುಗಿಸದಿದ್ದರೆ ಗಣಿ ಗುತ್ತಿಗೆ ಲೈಸೆನ್ಸ್ ರದ್ದು; ಮುರುಗೇಶ್ ನಿರಾಣಿ ಎಚ್ಚರಿಕೆ

ರಾಯಚೂರು ಜಿಲ್ಲೆಯ ಲಿಂಗಸೂರು ತಾಲ್ಲೂಕಿನ ಹಟ್ಟಿ ಚಿನ್ನದ ಗಣಿ ಪ್ರದೇಶಕ್ಕೆ ಇಂದು ಭೇಟಿ ನೀಡಿ ನಂತರ ಅಧಿಕಾರಿಗಳ ಜೊತೆ ಮುರುಗೇಶ್ ನಿರಾಣಿ ಪ್ರಗತಿ ಪರಿಶೀಲನ ಸಭೆ ನಡೆಸಿದರು.

ಅಕ್ರಮ ಸ್ಫೋಟಕಗಳನ್ನು ಹಿಂದಿರುಗಿಸದಿದ್ದರೆ ಗಣಿ ಗುತ್ತಿಗೆ ಲೈಸೆನ್ಸ್ ರದ್ದು; ಮುರುಗೇಶ್ ನಿರಾಣಿ ಎಚ್ಚರಿಕೆ
ಹಟ್ಟಿ ಚಿನ್ನದ ಗಣಿಯಲ್ಲಿ ಮುರುಗೇಶ್​ ನಿರಾಣಿ
Follow us
ರಾಜೇಶ್ ದುಗ್ಗುಮನೆ
|

Updated on: Feb 26, 2021 | 8:59 PM

ರಾಯಚೂರು: ಶಿವಮೊಗ್ಗದಲ್ಲಿ ನಡೆದ ಜಿಲೆಟಿನ್ ಸ್ಫೋಟ ದುರಂತ ಪ್ರಕರಣ ಮಾಸುವ ಮುನ್ನವೇ ಚಿಕ್ಕಬಳ್ಳಾಪುರ ತಾಲೂಕಿನ ಮಂಡಿಕಲ್‌ ಹೋಬಳಿಯ ಹಿರೇನಾಗವೇಲಿ ಗ್ರಾಮದ ಬಳಿ ಮತ್ತೊಂದು ಜಿಲೆಟಿನ್ ಸ್ಫೋಟ ಸಂಭವಿಸಿತ್ತು. ಅಕ್ರಮವಾಗಿ ಸ್ಫೋಟಕ ಸಂಗ್ರಹಿಸಿದ್ದೇ ಈ ಸ್ಫೋಟಕ್ಕೆ ಕಾರಣವಾಗಿತ್ತು. ಇದರ ನಿಯಂತ್ರಣಕ್ಕೆ ಈಗ ಸರ್ಕಾರ ಮುಂದಾಗಿದೆ. ಕಲ್ಲುಕ್ವಾರಿ ಮತ್ತು ಗಣಿಗಾರಿಕೆ ಪ್ರದೇಶಗಳಲ್ಲಿ ಯಾರಾದರೂ ಕಾನೂನುಬಾಹಿರವಾಗಿ ಸ್ಫೋಟಕ ವಸ್ತುಗಳನ್ನು ಸಂಗ್ರಹಿಸಿಟ್ಟುಕೊಂಡಿದ್ದರೆ,ನಾಲ್ಕು ವಾರದೊಳಗೆ ಹಿಂತಿರಿಗಿಸಬೇಕು. ಇಲ್ಲದಿದ್ದರೆ ಅಂತಹವರ ಪರವನಾಗಿಯನ್ನು ರದ್ದುಪಡಿಸುತ್ತೇವೆ ಎಂದು ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಎಚ್ಚರಿಕೆ ನೀಡಿದ್ದಾರೆ. ರಾಯಚೂರು ಜಿಲ್ಲೆಯ ಲಿಂಗಸೂರು ತಾಲ್ಲೂಕಿನ ಹಟ್ಟಿ ಚಿನ್ನದ ಗಣಿ ಪ್ರದೇಶಕ್ಕೆ ಇಂದು ಭೇಟಿ ನೀಡಿ ನಂತರ ಅಧಿಕಾರಿಗಳ ಜೊತೆ ಮುರುಗೇಶ್ ನಿರಾಣಿ ಪ್ರಗತಿ ಪರಿಶೀಲನ ಸಭೆ ನಡೆಸಿದರು. ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಅಕ್ರಮ ಸ್ಫೋಟಕ ಸಂಗ್ರಹಿಸಿಟ್ಟಿದ್ದರೆ ನಾಲ್ಕು ವಾರದ ಒಳಗೆ ನೀಡಿ. ಇಲ್ಲದಿದ್ದರೆ ಸ್ಫೋಟಕಗಳನ್ನು ಇಲಾಖೆಗೆ ವಶಪಡಿಸಿಕೊಳ್ಳಲು ಸೂಚಿಸಲಾಗಿದೆ. ಜತೆಗೆ ಗಣಿ ಗುತ್ತಿಗೆ ರದ್ದು ಮಾಡಲಾಗುವುದು ಎಂದು ಹೇಳಿದರು.

ಹಟ್ಟಿ ಚಿನ್ನದ ಗಣಿಯಲ್ಲಿ 1700 ಕೆಜಿ ಚಿನ್ನ ಉತ್ಪಾದನೆಯಾಗಿದೆ. ಗಣಿಯನ್ನು ಆಧುನೀಕರಣವನ್ನುಗೊಳಿಸಲು ಚಿಂತನೆ ನಡೆಸಲಾಗಿದೆ. ಇದಕ್ಕೆ ವರದಿ ಕೂಡ ಸಿದ್ಧಪಡಿಸಲಾಗಿದೆ. ಕೊವಿಡ್ ಸಂದರ್ಭದಲ್ಲಿ ಚಿನ್ನ ಉತ್ಪಾದನೆಗೆ ನಿಂತಿತ್ತು. ಈಗ ಚಿನ್ನದ ಉತ್ಪಾದನೆ ಮತ್ತೆ ಹೆಚ್ಚಿದೆ ಎಂದು ಖುಷಿ ವ್ಯಕ್ತಪಡಿಸಿದರು.

ಅಕ್ರಮ ಗಣಿಗಾರಿಕೆಯಲ್ಲಿ ಅಧಿಕಾರಿಗಳ ಬೇಜವಾಬ್ದಾರಿತನ ಪದೇಪದೇ ಕೇಳಿ ಬರುತ್ತಿದೆ. ಮುಂದೆ ಇಂತಹ ದೂರುಗಳು ಕೇಳಿ ಬಂದರೆ, ಅಂತಹವರ ಮೇಲೆ ನಿರ್ದಾಕ್ಷಿಣ್ಯವಾಗಿ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಇದನ್ನೂ ಓದಿ:ಚಿಕ್ಕಬಳ್ಳಾಪುರ ಜಿಲೆಟಿನ್ ಸ್ಫೋಟ ಪ್ರಕರಣ ಸಿಐಡಿಗೆ ಹಸ್ತಾಂತರ

‘ಬುರುಡೆ ಒಡೆಯುತ್ತೀನಿ’ ಎಂದ ರಜತ್​ಗೆ ಉಗ್ರಂ ಮಂಜು ಪ್ರತ್ಯುತ್ತರ
‘ಬುರುಡೆ ಒಡೆಯುತ್ತೀನಿ’ ಎಂದ ರಜತ್​ಗೆ ಉಗ್ರಂ ಮಂಜು ಪ್ರತ್ಯುತ್ತರ
ಊಟ ಮಾಡುವಾಗ ಮಾತನಾಡಬಾರದು ಯಾಕೆ? ಇಲ್ಲಿದೆ ಆಧ್ಯಾತ್ಮಿಕ ಹಿನ್ನೆಲೆ
ಊಟ ಮಾಡುವಾಗ ಮಾತನಾಡಬಾರದು ಯಾಕೆ? ಇಲ್ಲಿದೆ ಆಧ್ಯಾತ್ಮಿಕ ಹಿನ್ನೆಲೆ
ದಿನ ಭವಿಷ್ಯ: ಗುರು ಅನುಗ್ರಹದ ಈ ದಿನ ಯಾವ ರಾಶಿವರಿಗೆಲ್ಲ ಶುಭ ಫಲ ನೋಡಿ
ದಿನ ಭವಿಷ್ಯ: ಗುರು ಅನುಗ್ರಹದ ಈ ದಿನ ಯಾವ ರಾಶಿವರಿಗೆಲ್ಲ ಶುಭ ಫಲ ನೋಡಿ
ಬಾಗಲಕೋಟೆಯಲ್ಲಿ ರಸ್ತೆ ಮೇಲೆ ಅಡುಗೆ ಮಾಡಿ ನೇಕಾರರಿಂದ ಪ್ರತಿಭಟನೆ
ಬಾಗಲಕೋಟೆಯಲ್ಲಿ ರಸ್ತೆ ಮೇಲೆ ಅಡುಗೆ ಮಾಡಿ ನೇಕಾರರಿಂದ ಪ್ರತಿಭಟನೆ
ನನಗೆ ಎಲ್ಲ ಧರ್ಮವೂ ಒಂದೇ, ಓಲೈಕೆ ಮಾಡುವವನಲ್ಲ; ಸಿಎಂ ಸಿದ್ದರಾಮಯ್ಯ
ನನಗೆ ಎಲ್ಲ ಧರ್ಮವೂ ಒಂದೇ, ಓಲೈಕೆ ಮಾಡುವವನಲ್ಲ; ಸಿಎಂ ಸಿದ್ದರಾಮಯ್ಯ
ಮೋಕ್ಷಿತಾ ಅಸಲಿ ಆಟ ಶುರು ಮಾಡಿದ್ದಕ್ಕೆ ಉಗ್ರಂ ಮಂಜು ಬ್ಯಾಟರಿ ಡೌನ್?
ಮೋಕ್ಷಿತಾ ಅಸಲಿ ಆಟ ಶುರು ಮಾಡಿದ್ದಕ್ಕೆ ಉಗ್ರಂ ಮಂಜು ಬ್ಯಾಟರಿ ಡೌನ್?
6,6,6,6,4... ಒಂದೇ ಓವರ್​ನಲ್ಲಿ 30 ರನ್ ಚಚ್ಚಿದ ಹಾರ್ದಿಕ್
6,6,6,6,4... ಒಂದೇ ಓವರ್​ನಲ್ಲಿ 30 ರನ್ ಚಚ್ಚಿದ ಹಾರ್ದಿಕ್
ಇನ್ಮೇಲೆ ಸೆಂಟಿಮೆಂಟ್ ಇಲ್ಲ: ಉಗ್ರಂ ಮಂಜು ವಿರುದ್ಧ ತಿರುಗಿ ಬಿದ್ದ ಮೋಕ್ಷಿತಾ
ಇನ್ಮೇಲೆ ಸೆಂಟಿಮೆಂಟ್ ಇಲ್ಲ: ಉಗ್ರಂ ಮಂಜು ವಿರುದ್ಧ ತಿರುಗಿ ಬಿದ್ದ ಮೋಕ್ಷಿತಾ
ವಾಲ್ಮೀಕಿ ನಿಗಮ ಹಗರಣದಲ್ಲಿ ಕ್ಲೀನ್ ಚಿಟ್; ನಾಗೇಂದ್ರ ಪುನಃ ಆಗುವರೇ ಮಂತ್ರಿ?
ವಾಲ್ಮೀಕಿ ನಿಗಮ ಹಗರಣದಲ್ಲಿ ಕ್ಲೀನ್ ಚಿಟ್; ನಾಗೇಂದ್ರ ಪುನಃ ಆಗುವರೇ ಮಂತ್ರಿ?
ವಾಲ್ಮೀಕಿ ಹಗರಣ ವಿರುದ್ಧ ಪಾದಾಯಾತ್ರೆಗೆ ಅನುಮತಿ ಸಿಗಲಿಲ್ಲ: ಯತ್ನಾಳ್
ವಾಲ್ಮೀಕಿ ಹಗರಣ ವಿರುದ್ಧ ಪಾದಾಯಾತ್ರೆಗೆ ಅನುಮತಿ ಸಿಗಲಿಲ್ಲ: ಯತ್ನಾಳ್