ಅಕ್ರಮ ಸ್ಫೋಟಕಗಳನ್ನು ಹಿಂದಿರುಗಿಸದಿದ್ದರೆ ಗಣಿ ಗುತ್ತಿಗೆ ಲೈಸೆನ್ಸ್ ರದ್ದು; ಮುರುಗೇಶ್ ನಿರಾಣಿ ಎಚ್ಚರಿಕೆ

ರಾಯಚೂರು ಜಿಲ್ಲೆಯ ಲಿಂಗಸೂರು ತಾಲ್ಲೂಕಿನ ಹಟ್ಟಿ ಚಿನ್ನದ ಗಣಿ ಪ್ರದೇಶಕ್ಕೆ ಇಂದು ಭೇಟಿ ನೀಡಿ ನಂತರ ಅಧಿಕಾರಿಗಳ ಜೊತೆ ಮುರುಗೇಶ್ ನಿರಾಣಿ ಪ್ರಗತಿ ಪರಿಶೀಲನ ಸಭೆ ನಡೆಸಿದರು.

ಅಕ್ರಮ ಸ್ಫೋಟಕಗಳನ್ನು ಹಿಂದಿರುಗಿಸದಿದ್ದರೆ ಗಣಿ ಗುತ್ತಿಗೆ ಲೈಸೆನ್ಸ್ ರದ್ದು; ಮುರುಗೇಶ್ ನಿರಾಣಿ ಎಚ್ಚರಿಕೆ
ಹಟ್ಟಿ ಚಿನ್ನದ ಗಣಿಯಲ್ಲಿ ಮುರುಗೇಶ್​ ನಿರಾಣಿ

Updated on: Feb 26, 2021 | 8:59 PM

ರಾಯಚೂರು: ಶಿವಮೊಗ್ಗದಲ್ಲಿ ನಡೆದ ಜಿಲೆಟಿನ್ ಸ್ಫೋಟ ದುರಂತ ಪ್ರಕರಣ ಮಾಸುವ ಮುನ್ನವೇ ಚಿಕ್ಕಬಳ್ಳಾಪುರ ತಾಲೂಕಿನ ಮಂಡಿಕಲ್‌ ಹೋಬಳಿಯ ಹಿರೇನಾಗವೇಲಿ ಗ್ರಾಮದ ಬಳಿ ಮತ್ತೊಂದು ಜಿಲೆಟಿನ್ ಸ್ಫೋಟ ಸಂಭವಿಸಿತ್ತು. ಅಕ್ರಮವಾಗಿ ಸ್ಫೋಟಕ ಸಂಗ್ರಹಿಸಿದ್ದೇ ಈ ಸ್ಫೋಟಕ್ಕೆ ಕಾರಣವಾಗಿತ್ತು. ಇದರ ನಿಯಂತ್ರಣಕ್ಕೆ ಈಗ ಸರ್ಕಾರ ಮುಂದಾಗಿದೆ. ಕಲ್ಲುಕ್ವಾರಿ ಮತ್ತು ಗಣಿಗಾರಿಕೆ ಪ್ರದೇಶಗಳಲ್ಲಿ ಯಾರಾದರೂ ಕಾನೂನುಬಾಹಿರವಾಗಿ ಸ್ಫೋಟಕ ವಸ್ತುಗಳನ್ನು ಸಂಗ್ರಹಿಸಿಟ್ಟುಕೊಂಡಿದ್ದರೆ,ನಾಲ್ಕು ವಾರದೊಳಗೆ ಹಿಂತಿರಿಗಿಸಬೇಕು. ಇಲ್ಲದಿದ್ದರೆ ಅಂತಹವರ ಪರವನಾಗಿಯನ್ನು ರದ್ದುಪಡಿಸುತ್ತೇವೆ ಎಂದು ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಎಚ್ಚರಿಕೆ ನೀಡಿದ್ದಾರೆ.

ರಾಯಚೂರು ಜಿಲ್ಲೆಯ ಲಿಂಗಸೂರು ತಾಲ್ಲೂಕಿನ ಹಟ್ಟಿ ಚಿನ್ನದ ಗಣಿ ಪ್ರದೇಶಕ್ಕೆ ಇಂದು ಭೇಟಿ ನೀಡಿ ನಂತರ ಅಧಿಕಾರಿಗಳ ಜೊತೆ ಮುರುಗೇಶ್ ನಿರಾಣಿ ಪ್ರಗತಿ ಪರಿಶೀಲನ ಸಭೆ ನಡೆಸಿದರು. ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಅಕ್ರಮ ಸ್ಫೋಟಕ ಸಂಗ್ರಹಿಸಿಟ್ಟಿದ್ದರೆ ನಾಲ್ಕು ವಾರದ ಒಳಗೆ ನೀಡಿ. ಇಲ್ಲದಿದ್ದರೆ ಸ್ಫೋಟಕಗಳನ್ನು ಇಲಾಖೆಗೆ ವಶಪಡಿಸಿಕೊಳ್ಳಲು ಸೂಚಿಸಲಾಗಿದೆ. ಜತೆಗೆ ಗಣಿ ಗುತ್ತಿಗೆ ರದ್ದು ಮಾಡಲಾಗುವುದು ಎಂದು ಹೇಳಿದರು.

ಹಟ್ಟಿ ಚಿನ್ನದ ಗಣಿಯಲ್ಲಿ 1700 ಕೆಜಿ ಚಿನ್ನ ಉತ್ಪಾದನೆಯಾಗಿದೆ. ಗಣಿಯನ್ನು ಆಧುನೀಕರಣವನ್ನುಗೊಳಿಸಲು ಚಿಂತನೆ ನಡೆಸಲಾಗಿದೆ. ಇದಕ್ಕೆ ವರದಿ ಕೂಡ ಸಿದ್ಧಪಡಿಸಲಾಗಿದೆ. ಕೊವಿಡ್ ಸಂದರ್ಭದಲ್ಲಿ ಚಿನ್ನ ಉತ್ಪಾದನೆಗೆ ನಿಂತಿತ್ತು. ಈಗ ಚಿನ್ನದ ಉತ್ಪಾದನೆ ಮತ್ತೆ ಹೆಚ್ಚಿದೆ ಎಂದು ಖುಷಿ ವ್ಯಕ್ತಪಡಿಸಿದರು.

ಅಕ್ರಮ ಗಣಿಗಾರಿಕೆಯಲ್ಲಿ ಅಧಿಕಾರಿಗಳ ಬೇಜವಾಬ್ದಾರಿತನ ಪದೇಪದೇ ಕೇಳಿ ಬರುತ್ತಿದೆ. ಮುಂದೆ ಇಂತಹ ದೂರುಗಳು ಕೇಳಿ ಬಂದರೆ, ಅಂತಹವರ ಮೇಲೆ ನಿರ್ದಾಕ್ಷಿಣ್ಯವಾಗಿ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಇದನ್ನೂ ಓದಿ:ಚಿಕ್ಕಬಳ್ಳಾಪುರ ಜಿಲೆಟಿನ್ ಸ್ಫೋಟ ಪ್ರಕರಣ ಸಿಐಡಿಗೆ ಹಸ್ತಾಂತರ

ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Loading...
Unable to load recommendations.
Follow Us