ಸಿಎಂ ಯಡಿಯೂರಪ್ಪ ನಾಯಕತ್ವದಲ್ಲಿ ಬದಲಾವಣೆ ಇಲ್ಲ; ಬಿಜೆಪಿ ಕೋರ್ ಕಮಿಟಿ ಸಭೆಯ ನಂತರ ಸ್ಪಷ್ಟಪಡಿಸಿದ ಸಚಿವ ಆರ್ ಅಶೋಕ್

Karnataka Leadership: ಮುಂದಿನ ದಿನಗಳಲ್ಲಿ ಪಕ್ಷ, ಸರ್ಕಾರದ ವಿರುದ್ಧ ಬಹಿರಂಗ ಹೇಳಿಕೆ ನೀಡಿದವರ ಮೇಲೆ ಮುಲಾಜಿಲ್ಲದೇ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಎರಡು ದಿನಗಳಲ್ಲಿ ಶಿಸ್ತು ಕ್ರಮ ಕೈಗೊಳ್ಳುವ ಬಗ್ಗೆ ಅರುಣ್ ಸಿಂಗ್ ಕೋರ್ ಕಮಿಟಿ ಸಭೆಯಲ್ಲಿ ಭರವಸೆ ನೀಡಿದ್ದಾರೆ: ಕಂದಾಯ ಸಚಿವ ಆರ್.ಅಶೋಕ್

ಸಿಎಂ ಯಡಿಯೂರಪ್ಪ ನಾಯಕತ್ವದಲ್ಲಿ ಬದಲಾವಣೆ ಇಲ್ಲ; ಬಿಜೆಪಿ ಕೋರ್ ಕಮಿಟಿ ಸಭೆಯ ನಂತರ ಸ್ಪಷ್ಟಪಡಿಸಿದ ಸಚಿವ ಆರ್ ಅಶೋಕ್
ಆರ್.ಅಶೋಕ್
Follow us
TV9 Web
| Updated By: guruganesh bhat

Updated on: Jun 18, 2021 | 6:49 PM

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಚರ್ಚೆಯಾಗಿಲ್ಲ. ಸಿಎಂ ಯಡಿಯೂರಪ್ಪನವರೇ ನಮ್ಮ ನಾಯಕರು. ಇದರಲ್ಲಿ ಯಾವುದೇ ಬದಲಾವಣೆ ಇಲ್ಲ. ಈ ಮಾತನ್ನು ಸ್ಪಷ್ಟಪಡಿಸಲೆಂದೇ ರಾಜ್ಯ ಬಿಜೆಪಿ ಉಸ್ತುವಾರಿಯಾದ ಅರುಣ್ ಸಿಂಗ್ ಆಗಮಿಸಿದ್ದಾರೆ ಎಂದು ಕಂದಾಯ ಸಚಿವ ಆರ್.ಅಶೋಕ್ ಬಿಜೆಪಿ ಕೋರ್ ಕಮಿಟಿ ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ತಿಳಿಸಿದರು.

ಮುಂದಿನ ದಿನಗಳಲ್ಲಿ ಪಕ್ಷ, ಸರ್ಕಾರದ ವಿರುದ್ಧ ಬಹಿರಂಗ ಹೇಳಿಕೆ ನೀಡಿದವರ ಮೇಲೆ ಮುಲಾಜಿಲ್ಲದೇ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಎರಡು ದಿನಗಳಲ್ಲಿ ಶಿಸ್ತು ಕ್ರಮ ಕೈಗೊಳ್ಳುವ ಬಗ್ಗೆ ಅರುಣ್ ಸಿಂಗ್ ಕೋರ್ ಕಮಿಟಿ ಸಭೆಯಲ್ಲಿ ಭರವಸೆ ನೀಡಿದ್ದಾರೆ. ಅವರ ಭೇಟಿಯಲ್ಲಿ ಸಂಪುಟ ಪುನಾರಚನೆ ಬಗ್ಗೆಯೂ ಯಾವುದೇ ಚರ್ಚೆ ಆಗಿಲ್ಲ. ಶಾಸಕ ಅರವಿಂದ್ ಬೆಲ್ಲದ್ ಮಾಡಿರುವ ಆರೋಪ ಬಗ್ಗೆಯೂ ಪಕ್ಷದ ಗಮನಹರಿಸಿದೆ ಎಂದು ಅವರು ನಾಯಕತ್ವ ಬದಲಾವಣೆಯ ಪ್ರಹಸನ ಸದ್ಯ ಮುಕ್ತಾಯಗೊಂಡಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ನೀಡಿದ ಸಂದೇಶವನ್ನು ತಿಳಿಸಿದರು.

ಕೋರ್ ಕಮಿಟಿ ಸಭೆಯಲ್ಲಿ ಸರ್ಕಾರದ ಇಮೇಜ್ ಹೆಚ್ಚಿಸಲು ಚರ್ಚಿಸಲಾಗಿದೆ. ಪಕ್ಷ ಮತ್ತು ಸರ್ಕಾರದ ನಡುವೆ ಹೊಂದಾಣಿಕೆ ಹೆಚ್ಚಿಸಲು ನಿರ್ಧರಿಸಲಾಗಿದೆ. ಕಾಂಗ್ರೆಸ್ ತುರ್ತು ಪರಿಸ್ಥಿತಿ ಹೇರಿದ್ದನ್ನು ಖಂಡಿಸಿ ಜೂನ್ 25ರಂದು ಕರಾಳ ದಿನ ಆಚರಿಸಲು ನಿರ್ಣಯ ಕೈಗೊಳ್ಳಲಾಗಿದೆ. ಕೊವಿಡ್ ನಿಯಮ ಪಾಲಿಸಿ ರಾಜ್ಯದ ಪ್ರತಿ ತಾಲೂಕಿನಲ್ಲೂ ಯೋಗ ದಿನ ಆಚರಿಸಲಾಗುತ್ತದೆ. ಜಿ.ಪಂ, ತಾ.ಪಂ ಚುನಾವಣೆಗಳಿಗೆ ಸಿದ್ಧತೆ ನಡೆಸಲು ಪಕ್ಷದ ಜಿಲ್ಲಾ ಘಟಕಗಳಿಗೆ ಸೂಚನೆ ನೀಡಲಾಗಿದೆ. ಜೂನ್ 26ರಂದು ಬೆಂಗಳೂರಿನಲ್ಲಿ ರಾಜ್ಯ ಕಾರ್ಯಕಾರಿಣಿ ನಡೆಯಲಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದರು.

ಇದನ್ನೂ ಓದಿ: ಸಿಎಂ ಯಡಿಯೂರಪ್ಪಗೆ ಅಖಿಲ ಭಾರತ ವೀರಶೈವ ಮಹಾಸಭಾದ ಬೆಂಬಲವಿದೆ: ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ

Ramesh Jarkiholi : ಯಡಿಯೂರಪ್ಪ, ಅಮಿತ್ ಶಾರನ್ನ ನಂಬಿ ಬಿಜೆಪಿಗೆ ಬಂದಿದ್ದೇವೆ

(Karnataka minister R Ashok says no change in the leadership of CM Yeddyurappa after BJP core committee meeting)

ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್