R Ashok: ಸಚಿವ ಆರ್ ಅಶೋಕ್‌ಗೆ ಕೊರೊನಾ ಪಾಸಿಟಿವ್; ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ
R Ashok tests covid positive: ಕಂದಾಯ ಸಚಿವ ಆರ್.ಅಶೋಕ್‌ಗೆ ಕೊರೊನಾ ಪಾಸಿಟಿವ್ ಆಗಿದೆ. ಆಸ್ಪತ್ರೆಗೆ ದಾಖಲಾಗಿರುವ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಏರಿಕೆಯಾಗುತ್ತಿರುವ ಬೆನ್ನಲ್ಲೇ ಕಂದಾಯ ಸಚಿವ (Revenue Minister) ಆರ್.ಅಶೋಕ್‌ಗೆ (R Ashok) ಕೊರೊನಾ ಪಾಸಿಟಿವ್ ಆಗಿದೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಆರ್.ಅಶೋಕ್‌ಗೆ ಚಿಕಿತ್ಸೆ ನೀಡಲಾಗುತ್ತಿದೆ. ಕರ್ನಾಟಕದಲ್ಲಿ ಕೊರೊನಾ (Corona) ಹಾಗೂ ಒಮಿಕ್ರಾನ್ (Omicron) ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಗುರುವಾರ 5,031 ಕೊರೊನಾ ಪ್ರಕರಣಗಳು ದೃಢಪಟ್ಟಿತ್ತು. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಅತೀ ಹೆಚ್ಚು ಅಂದರೆ 4,324 ಪ್ರಕರಣ ವರದಿಯಾಗಿತ್ತು. ಹಾಗೆಯೇ 107 ಒಮಿಕ್ರಾನ್ ಪ್ರಕರಣಗಳು ದೃಢಪಟ್ಟಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 333 ಕ್ಕೆ ಏರಿಕೆಯಾಗಿದೆ.
ಮಹಾರಾಷ್ಟ್ರದ ಗೃಹ ಸಚಿವರ ಕಚೇರಿಯ ನಾಲ್ವರು ಸಿಬ್ಬಂದಿಗೆ ಕೊರೊನಾ: ಮಹಾರಾಷ್ಟ್ರದಲ್ಲೂ ಕೊರೊನಾ ಪ್ರಕರಣಗಳು ತೀವ್ರ ಏರಿಕೆ ಕಾನೂತ್ತಿವೆ. ಇತ್ತೀಚೆಗಷ್ಟೇ ಹಲವು ಸಚಿವರಿಗೆ ಕೊರೊನಾ ಪಾಸಿಟಿವ್ ಆಗಿತ್ತು. ಇದೀಗ ಸಚಿವರ ಕಚೇರಿ ಸಿಬ್ಬಂದಿಗೆ ಹಾಗೂ ವೈದ್ಯರಿಗೆ ಪಾಸಿಟಿವ್ ಆಗಿದೆ. ಮಹಾರಾಷ್ಟ್ರದ ಗೃಹ ಸಚಿವ ದಿಲೀಪ್ ವಾಲ್ಸೆ ಪಾಟೀಲ್ ಅವರ ಕಚೇರಿಯ ನಾಲ್ವರು ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ಆಗಿದೆ. ಈ ಕುರಿತು ಮಹಾರಾಷ್ಟ್ರ ಗೃಹ ಸಚಿವರ ಕಚೇರಿಯಿಂದ ಮಾಹಿತಿ ನೀಡಲಾಗಿದೆ. ಮಹಾರಾಷ್ಟ್ರದಲ್ಲಿ 338 ವೈದ್ಯರಿಗೂ ಕೊರೊನಾ ಪಾಸಿಟಿವ್ ಆಗಿದೆ. ಮಹಾರಾಷ್ಟ್ರ ಸ್ಥಾನಿಕ ವೈದ್ಯರ ಸಂಘದ ಅಧ್ಯಕ್ಷ ಡಾ.ಅವಿನಾಶ್ ಮಾಹಿತಿ ನೀಡಿದ್ದಾರೆ.
ಅಸ್ಸಾಂನ ಸಚಿವರೊಬ್ಬರಿಗೆ ಕೊರೊನಾ ಪಾಸಿಟಿವ್: ಅಸ್ಸಾಂ ಜಲಸಂಪನ್ಮೂಲ ಸಚಿವ ಪಿಜುಶ್ ಹಜಾರಿಕಾ (Pijush Hazarika) ಅವರು ಗುರುವಾರ ಕೋವಿಡ್ ಸೋಂಕಿಗೆ ತುತ್ತಾಗಿದ್ದಾರೆ. ಅವರಿಗೆ ಸಣ್ಣ ಪ್ರಮಾಣದ ಲಕ್ಷಣಗಳು ಕಾಣಿಸಿಕೊಂಡಿತ್ತು. ಇದೀಗ ಅವರು ಹೋಮ್ ಐಸೋಲೇಷನ್ನಲ್ಲಿದ್ದಾರೆ.
ಇತ್ತೀಚೆಗೆ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ಗೆ ಪಾಸಿಟಿವ್ ಆಗಿತ್ತು. 70 ವರ್ಷದ ಅವರಿಗೆ ಎರಡನೇ ಬಾರಿ ಸೋಂಕು ಕಾಣಿಸಿಕೊಂಡಿತ್ತು. ಈ ಪ್ರಕರಣಕ್ಕೂ ಮುನ್ನ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ಗೆ ಸೋಂಕು ಕಾಣಿಸಿಕೊಂಡಿತ್ತು ಎಂಬುದನ್ನು ಇಲ್ಲಿ ಸ್ಮರಿಸಬಹುದು. ಪ್ರಸ್ತುತ ದೇಶದಲ್ಲಿ ಪ್ರಕರಣಗಳು ಏರುತ್ತಿರುವ ನಡುವೆಯೇ ಜನನಾಯಕರಿಗೂ ಸೋಂಕು ಕಾಣಿಸಿಕೊಳ್ಳುತ್ತಿರುವುದು ವರದಿಯಾಗುತ್ತಿದೆ.
ಭಾರತದಲ್ಲಿ ಒಂದೇ ದಿನ 1 ಲಕ್ಷ ಗಡಿ ದಾಟಿದ ಒಟ್ಟು ಪ್ರಕರಣಗಳ ಸಂಖ್ಯೆ: ಭಾರತದಲ್ಲಿ 7 ತಿಂಗಳ ನಂತರ ಕೊರೊನಾ ಪ್ರಕರಣಗಳು 1 ಲಕ್ಷದ ಗಡಿ ದಾಟಿದೆ. ಕಳೆದ 24 ಗಂಟೆಗಳ ಅಂಕಿಅಂಶಗಳನ್ನು ಕೇಂದ್ರ ಆರೋಗ್ಯ ಮತ್ತು ಕುಟುಂಬ ವ್ಯವಹಾರಗಳ ಸಚಿವಾಲಯ ಬಿಡುಗಡೆ ಮಾಡಿದ್ದು, ಅದರ ಪ್ರಕಾರ ಭಾರತದಲ್ಲಿ ದಿನವೊಂದರಲ್ಲಿ 1,17,100 ಪ್ರಕರಣ ವರದಿಯಾಗಿದೆ. 302 ರೋಗಿಗಳು ಸಾವನ್ನಪ್ಪಿದ್ದಾರೆ. ಒಮಿಕ್ರಾನ್ ಪ್ರಕರಣಗಳ ಸಂಖ್ಯೆ 3,007ಕ್ಕೆ ತಲುಪಿದೆ.
ಇದನ್ನೂ ಓದಿ:
Omicron: 7 ತಿಂಗಳ ನಂತರ ಒಂದೇ ದಿನ 1 ಲಕ್ಷಕ್ಕೂ ಅಧಿಕ ಕೊರೊನಾ ಪ್ರಕರಣ ದಾಖಲು; 3,000 ಗಡಿ ದಾಟಿದ ಒಮಿಕ್ರಾನ್
ಗಾಂಧಿನಗರದಲ್ಲಿ ಮಾಯವಾಯ್ತು ಶುಕ್ರವಾರದ ಕಳೆ; ಸಿನಿಮಾ ರಿಲೀಸ್ ಇಲ್ಲದೇ ಚಿತ್ರಮಂದಿರಗಳು ಖಾಲಿ
Published On - 1:55 pm, Fri, 7 January 22