AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೆಟ್ರೋಲ್​ನಲ್ಲಿ ಹೆಚ್ಚಿನ ಎಥೆನಾಲ್ ಮಿಶ್ರಣ ಆರೋಪ‌: ಕೇಂದ್ರ ಪೆಟ್ರೋಲಿಯಂ ಸಚಿವರಿಗೆ ರಿಜ್ವಾನ್ ಅರ್ಷದ್​​ ಪತ್ರ

ಪೆಟ್ರೋಲ್‌ನಲ್ಲಿ ನಿಗದಿಗಿಂತ ಹೆಚ್ಚಿನ ಎಥೆನಾಲ್ ಮಿಶ್ರಣವಾಗುತ್ತಿದ್ದು ವಾಹನಗಳಿಗೆ ಹಾನಿಯಾಗುತ್ತಿದೆ ಎಂದು ಆರೋಪಿಸಿ ಕರ್ನಾಟಕ ಸಚಿವ ರಿಜ್ವಾನ್ ಅರ್ಷದ್ ಅವರು ಕೇಂದ್ರ ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಪತ್ರ ಬರೆದಿದ್ದಾರೆ. ಶೇ.90ರಷ್ಟು ಬಂಕ್‌ಗಳ ನಳಿಕೆಗಳಲ್ಲಿ ವ್ಯತ್ಯಾಸ ಇರುವುದು ಪತ್ತೆಯಾಗಿದ್ದು, ಗ್ರಾಹಕರಿಗೆ ಕಡಿಮೆ ಇಂಧನ ಸಿಗುತ್ತಿರುವುದು ಸಾಬೀತಾಗಿದೆ ಎಂದೂ ಮಾಹಿತಿ ನೀಡಿದ್ದಾರೆ.

ಪೆಟ್ರೋಲ್​ನಲ್ಲಿ ಹೆಚ್ಚಿನ ಎಥೆನಾಲ್ ಮಿಶ್ರಣ ಆರೋಪ‌: ಕೇಂದ್ರ ಪೆಟ್ರೋಲಿಯಂ ಸಚಿವರಿಗೆ ರಿಜ್ವಾನ್ ಅರ್ಷದ್​​ ಪತ್ರ
ಕೇಂದ್ರ ಪೆಟ್ರೋಲಿಯಂ ಸಚಿವರಿಗೆ ರಿಜ್ವಾನ್ ಅರ್ಷದ್​​ ಪತ್ರ
ಹರೀಶ್ ಜಿ.ಆರ್​.
| Edited By: |

Updated on: Nov 18, 2026 | 12:42 PM

Share

ಬೆಂಗಳೂರು, ನವೆಂಬರ್​ 18: ಪೆಟ್ರೋಲ್​ನಲ್ಲಿ ಹೆಚ್ಚಿನ ಎಥೆನಾಲ್ ಮಿಶ್ರಣ ಆರೋಪ‌ ವಿಚಾರ ಸಂಬಂಧ ಕೇಂದ್ರ ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿಗೆ ಕರ್ನಾಟಕ ಸಚಿವ ರಿಜ್ವಾನ್ ಅರ್ಷದ್​​ ಪತ್ರ ಬರೆದಿದ್ದಾರೆ. ರಾಜ್ಯ ಸರ್ಕಾರ ಪರಿಶೀಲನೆ ನಡೆಸಿದ ವರದಿ ಬಗ್ಗೆ ಪತ್ರದಲ್ಲಿ ಅವರು ಉಲ್ಲೇಖಿಸಿದ್ದು, ಎಥೆನಾಲ್ ಮಿಶ್ರಣ ಕಾರ್ಯಕ್ರಮಕ್ಕೆ ನಮ್ಮ ವಿರೋಧವಿಲ್ಲ. ಆದರೆ ಅತಿಯಾದ ಎಥೆನಾಲ್ ಮಿಶ್ರಣದಿಂದ ವಾಹನಗಳಿಗೆ ಹಾನಿ ಆಗ್ತಿದೆ, ಮೈಲೇಜ್ ಕುಸಿಯುತ್ತಿದೆಯೆಂದು ಸಾರ್ವಜನಿಕರಿಂದ ದೂರುಗಳು ಬಂದಿವೆ ಎದು ತಿಳಿಸಿದ್ದಾರೆ.

‘ಎಥೆನಾಲ್ ಪ್ರಮಾಣ ಒಂದೇ ಸಮನಾಗಿಲ್ಲ’

ಸೆಪ್ಟೆಂಬರ್​ನಲ್ಲಿ ರಾಜ್ಯದ ವಿವಿಧ ಪೆಟ್ರೋಲ್ ಬಂಕ್‌ಗಳಿಂದ ಮಾದರಿ ಸಂಗ್ರಹಿಸಿ ಅವನ್ನು NABL-ಮಾನ್ಯತೆ ಪಡೆದ ಪ್ರಯೋಗಾಲಯಗಳಲ್ಲಿ ಪರೀಕ್ಷೆ ನಡೆಸಲಾಗಿದೆ. 14 ಮಾದರಿಗಳ ಪೈಕಿ 11 ಮಾದರಿಗಳು ಶೇ.20ಕ್ಕಿಂತ ಹೆಚ್ಚು ಎಥೆನಾಲ್ ಮಿಕ್ಸ್​ ಆಗಿರೋದು ಕಂಡುಬಂದಿದೆ. ಎಥೆನಾಲ್ ಪ್ರಮಾಣ ಒಂದೇ ಸಮನಾಗಿಲ್ಲದೆ ಶೇ.13.5ರಿಂದ 31.2ರವರೆಗೆ ಇದೆ ಎಂದು ತಿಳಿಸಿದ್ದಾರೆ. ಅಲ್ಲದೆ ಪೆಟ್ರೋಲ್ ಡಿಸ್ಪೆನ್ಸರ್‌ಗಳ ಪರಿಶೀಲನೆ 12 ತಿಂಗಳಿಂದ 24 ತಿಂಗಳಿಗೆ ಹೆಚ್ಚಳ ಸಂಬಂಧ ಕೇಂದ್ರದ ಅಧಿಸೂಚನೆಗೆ ರಾಜ್ಯ ಸರ್ಕಾರದ ವಿರೋಧವಿದೆ ಎಂದವರು ಹೇಳಿದ್ದಾರೆ.

ಇದನ್ನೂ ಓದಿ: ‘ಮೈಲೇಜ್ ಕುಸಿತಕ್ಕೆ ಗುಂಡಿ ಬಿದ್ದ ರಸ್ತೆಗಳೇ ಕಾರಣ’: ಎಥೆನಾಲ್ ಬಗ್ಗೆ ಕಾಂಗ್ರೆಸ್ ಆರೋಪಕ್ಕೆ ಅಶೋಕ್ ತಿರುಗೇಟು

‘ಶೇ.90ರಷ್ಟು ಬಂಕ್‌ಗಳ ನಳಿಕೆಗಳಲ್ಲಿ ವ್ಯತ್ಯಾಸ’

ಪೆಟ್ರೋಲ್ ಬಂಕ್‌ನಲ್ಲಿ ಎಥೆನಾಲ್ ಶೇಕಡಾವಾರು ಪ್ರಮಾಣ ಪ್ರದರ್ಶಿಸುವ ಜೊತೆಗೆ ಗ್ರಾಹಕರಿಗೆ ನೀಡುವ ಬಿಲ್‌ನಲ್ಲಿ ಎಥೆನಾಲ್ ಶೇಕಡಾವಾರು ನಮೂದಿಸಬೇಕು. ಎಥೆನಾಲ್ ಮಿಶ್ರಣದಿಂದ ವಾಹನ ಹಾನಿಗೊಳಗಾದರೆ ಪರಿಹಾರ ನೀಡಲು ಪ್ರತ್ಯೇಕ ನಿಧಿ ರಚಿಸಬೇಕು. ಎಂದು ಪತ್ರದ ಮೂಲಕ ರಿಜ್ವಾನ್​​ ಮನವಿ ಮಾಡಿದ್ದಾರೆ. ಶೇ.90ರಷ್ಟು ಬಂಕ್‌ಗಳ ನಳಿಕೆಗಳಲ್ಲಿ ವ್ಯತ್ಯಾಸ ಇರುವುದು ಪತ್ತೆಯಾಗಿದ್ದು, ಗ್ರಾಹಕರಿಗೆ ಕಡಿಮೆ ಇಂಧನ ಸಿಗುತ್ತಿರುವುದು ಸಾಬೀತಾಗಿದೆ ಎಂದೂ ಮಾಹಿತಿ ನೀಡಿದ್ದಾರೆ.

‘ರಿಜ್ವಾನ್​ ಅರ್ಷದ್ ವಿರುದ್ಧ ಮುರುಗೇಶ್​​ ನಿರಾಣಿ ಕಿಡಿ’

ಇನ್ನು, ಎಥೆನಾಲ್​ ಬಗ್ಗೆ ರಿಜ್ವಾನ್​ ಅರ್ಷದ್​ ಸುಳ್ಳು ಸುದ್ದಿ ಹಬ್ಬಿಸ್ತಿದ್ದಾರೆ ಎಂದು ಮಾಜಿ ಸಚಿವ ಮುರುಗೇಶ್ ನಿರಾಣಿ ಆರೋಪಿಸಿದ್ದಾರೆ. BJP ಸರ್ಕಾರ ಬಂದ ಮೇಲೆ ಎಥೆನಾಲ್ ಉತ್ಪಾದನೆ ಆರಂಭವಾಗಿಲ್ಲ. ಮೈಸೂರು ಮಹಾರಾಜರು ಎಥೆನಾಲ್ ಉತ್ಪಾದನೆ ಆರಂಭಿಸಿದ್ದರು. 500 ಎಥೆನಾಲ್ ಉತ್ಪಾದನಾ ಕೇಂದ್ರಗಳಿದ್ದು, ಪ್ರತಿವರ್ಷ 1,200 ಕೋಟಿ ಲೀಟರ್ ಎಥೆನಾಲ್​ ಮಿಕ್ಸ್ ಮಾಡ್ತಿದ್ದಾರೆ. ಬರೀ ಪೆಟ್ರೋಲ್​ನಲ್ಲಿ ಮಾತ್ರ ಎಥೆನಾಲ್​ ಮಿಕ್ಸ್ ಮಾಡುತ್ತಿದ್ದೇವೆ. ಇವರು ಯಾವ ಪೆಟ್ರೋಲಿಯಂ ಟರ್ಮಿನಲ್​ನಿಂದ ಸ್ಯಾಂಪಲ್‌ ತೆಗೆದಿದ್ದಾರೆ? ಸ್ಯಾಂಪಲ್‌ ತೆಗೆಯುವಾಗ ಯಾವ್ಯಾವ ಅಧಿಕಾರಿ ಇದ್ದರು ಹೇಳಿ? ಎಂದವರು ಪ್ರಶ್ನಿಸಿದ್ದಾರೆ. ಅಲ್ಲದೆ ಸ್ಯಾಂಪಲ್‌ ಟೆಸ್ಟ್​​ಗೆ ಸಚಿವ ರಿಜ್ವಾನ್ ಅರ್ಷದ್​ ಒಂದು ಸಮಿತಿ ರಚಿಸಲಿ. ಅದುಬಿಟ್ಟು ಸಚಿವರು​ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ನಿರಾಣಿ ದೂರಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಹರೀಶ್ ಜಿ.ಆರ್​.
ಹರೀಶ್ ಜಿ.ಆರ್​.

ಹರೀಶ್ ಜಿ.ಆರ್ ಮೂಲತಃ ಚಿಕ್ಕಮಗಳೂರಿನವರಾಗಿದ್ದು, ಪೌಢ ಶಿಕ್ಷಣವನ್ನು ಉಜಿರೆಯ ಎಸ್ ಡಿಎಂ ಸಂಸ್ಥೆಯಲ್ಲಿ ಹಾಗೂ ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ದಲ್ಲಿ ಬಿ.ಎ ಪದವಿಯನ್ನು, ಮಾನಸ ಗಂಗೋತ್ರಿಯ EMMRC ಸಂಸ್ಥೆಯ ಎಲೆಕ್ಟ್ರಾನಿಕ್ ಮೀಡಿಯಾ ವಿಷಯದಲ್ಲಿ ಎಂಎಸ್ಸಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಸಧ್ಯ ಪತ್ರಿಕೋದ್ಯಮದಲ್ಲಿ 14 ವರ್ಷದ ಅನುಭವ ಹೊಂದಿರುವ ಇವರು, ದೆಹಲಿಯಲ್ಲಿಯೇ 10 ವರ್ಷಗಳ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದಾರೆ. ರಾಜ್ಯ, ರಾಜಕೀಯ, ರಾಷ್ಟ್ರೀಯ, ಅಂತರರಾಷ್ಟ್ರೀಯ, ಸುಪ್ರೀಂಕೋರ್ಟ್ ವರದಿಗಾರಿಕೆಯಲ್ಲಿ ಅಪಾರ ಅನುಭವ ಹೊಂದಿದ್ದಾರೆ. ಅಯೋಧ್ಯೆ ರಾಮಮಂದಿರದ ತೀರ್ಪು ನಿಂದ ಹಿಡಿದು ಮಂದಿರ ಉದ್ಘಾಟನೆವರೆಗೂ ವರದಿ ಮಾಡಿದ ಅನುಭವ ಹೊಂದಿದ್ದಾರೆ. ಪುಲ್ವಾಮ ಉಗ್ರರ ದಾಳಿ, ಪಹಲ್ಗಾಂ ಉಗ್ರರ ದಾಳಿ, ಆದಾದ ನಂತರದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಗಳನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಗ್ರೌಂಡ್ ರಿಪೋರ್ಟ್ ಮಾಡಿರುವ ಅನುಭವ ಹೊಂದಿದ್ದಾರೆ.. ಉತ್ತರಖಂಡದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪಗಳನ್ನು ಗ್ರೌಂಡ್ ರಿಪೋರ್ಟ್ ಮಾಡಿದ್ದಾರೆ. 2019‌ ಹಾಗೂ 2024ರ ಲೋಕಸಭಾ ಚುನಾವಣೆಯಲ್ಲಿ ವಿವಿಧ ರಾಜ್ಯಗಳನ್ನು ಸುತ್ತಿ ಜನರ ರಾಜಕೀಯ ನಾಡಿಮಿಡಿತದ ವರದಿ ಮಾಡಿದ್ದಾರೆ.. ಸಧ್ಯ ಇವರು ಬೆಂಗಳೂರಿನಲ್ಲಿ ರಾಜಕೀಯ ವರದಿಗಾರರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.

Read More