Ganga Kalyan: ಗಂಗಾ ಕಲ್ಯಾಣ ಯೋಜನೆ ನೆರವು 3.5 ಲಕ್ಷ ರೂ.ಗೆ ಹೆಚ್ಚಳ; ಸಚಿವ ಶಿವರಾಜ ತಂಗಡಗಿ ಸೂಚನೆ

| Updated By: Ganapathi Sharma

Updated on: Jul 20, 2023 | 10:22 PM

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಇದುವರೆಗೂ ಗಂಗಾ ಕಲ್ಯಾಣ ಯೋಜನೆಯಡಿ ಪ್ರತಿ ಘಟಕಕ್ಕೆ 2.00 ಲಕ್ಷ ರೂ. ನೆರವು ನೀಡಲಾಗುತ್ತಿತ್ತು. ಆದರೆ, ಸಮಾಜ ಕಲ್ಯಾಣ ಇಲಾಖೆಯಲ್ಲಿ 3.5 ಲಕ್ಷ ರೂಪಾಯಿ ನೆರವು ನೀಡಲಾಗುತ್ತಿದೆ.

Ganga Kalyan: ಗಂಗಾ ಕಲ್ಯಾಣ ಯೋಜನೆ ನೆರವು 3.5 ಲಕ್ಷ ರೂ.ಗೆ ಹೆಚ್ಚಳ; ಸಚಿವ ಶಿವರಾಜ ತಂಗಡಗಿ ಸೂಚನೆ
ಶಿವರಾಜ ತಂಗಡಗಿ
Follow us on

ಬೆಂಗಳೂರು, ಜುಲೈ 20: ಗಂಗಾ ಕಲ್ಯಾಣ ಯೋಜನೆಯಡಿ (Ganga Kalyan scheme) ನೀಡಲಾಗುವ ನೆರವನ್ನು 3.5 ಲಕ್ಷ ರೂ.ಗೆ ಹೆಚ್ಚಿಸುವಂತೆ ಸಚಿವ ಶಿವರಾಜ ತಂಗಡಗಿ (Shivaraj Tangadagi) ಗುರುವಾರ ಸೂಚನೆ ನೀಡಿದ್ದಾರೆ. ಗಂಗಾ ಕಲ್ಯಾಣ ಯೋಜನೆಯಡಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆಗಳು ನೀಡುತ್ತಿರುವ ಘಟಕ ವೆಚ್ಚ ಹಾಗೂ ನೆರವಿನ ಮೊತ್ತದಲ್ಲಿ ವ್ಯತ್ಯಾಸ ಇರುವುದರಿಂದ ಸಚಿವರು ಒಂದೇ ರೀತಿಯ ನೆರವು ನೀಡುವಂತೆ ಸೂಚಿಸಿದ್ದಾರೆ.

ವಿಧಾನಸೌಧದ ತಮ್ಮ ಕೊಠಡಿಯಲ್ಲಿ ವಿವಿಧ ನಿಗಮ, ಮಂಡಳಿಗಳ ವ್ಯವಸ್ಥಾಪಕ ನಿರ್ದೇಶಕರು ಮತ್ತು ಉನ್ನತಾಧಿಕಾರಿಗಳ ಜತೆ ಸಭೆ ನಡೆಸಿದ ಸಚಿವರು, ಇಲಾಖೆಗೊಂದು ನೀತಿ ಅನುಸರಿಸುವುದು ಸೂಕ್ತವಲ್ಲ. ಹಾಗಾಗಿ ಇನ್ನು ಮುಂದೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ನೀಡುವ ನೆರವಿನ ಮೊತ್ತವನ್ನು ಸಮಾಜ ಕಲ್ಯಾಣ ಇಲಾಖೆಯಲ್ಲಿರುವಂತೆಯೇ 3.5 ಲಕ್ಷ ರೂಪಾಯಿಗಳಿಗೆ ಹೆಚ್ಚಿಸಬೇಕು ಎಂದು ನಿರ್ದೇಶನ ನೀಡಿದ್ದಾರೆ.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಇದುವರೆಗೂ ಗಂಗಾ ಕಲ್ಯಾಣ ಯೋಜನೆಯಡಿ ಪ್ರತಿ ಘಟಕಕ್ಕೆ 2.00 ಲಕ್ಷ ರೂ. ನೆರವು ನೀಡಲಾಗುತ್ತಿತ್ತು. ಆದರೆ, ಸಮಾಜ ಕಲ್ಯಾಣ ಇಲಾಖೆಯಲ್ಲಿ 3.5 ಲಕ್ಷ ರೂಪಾಯಿ ನೆರವು ನೀಡಲಾಗುತ್ತಿದೆ. ಒಂದೇ ಉದ್ದೇಶಕ್ಕಾಗಿ ನೀಡಲಾಗುವ ಈ ನೆರವಿನ ಮೊತ್ತದಲ್ಲಿ ಇಲಾಖೆಗೊಂದು ನೀತಿ ಅನುಸರಿಸುವುದು ಸೂಕ್ತವಲ್ಲವೆಂದು ಸಚಿವರು ಅಭಿಪ್ರಾಯಪಟ್ಟಿದ್ದಾರೆ.

ರಾಜ್ಯದ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:21 pm, Thu, 20 July 23