ವೈದ್ಯಕೀಯ ವಿದ್ಯಾರ್ಥಿಗಳ ಪ್ರತಿಭಾ ಪಲಾಯನ ತಡೆಯಲು ಸಚಿವ ಎಸ್.ಟಿ. ಸೋಮಶೇಖರ್ ಮನವಿ
ಸರ್ಕಾರ ವೈದ್ಯಕೀಯ ವಿದ್ಯಾರ್ಥಿಗಳಿಗೆ 50 ಲಕ್ಷದವರೆಗೆ ಹಣ ವ್ಯಯ ಮಾಡಲಿದೆ. ಆದರೆ ವೈದ್ಯಕೀಯ ಕೋರ್ಸ್ ಮುಗಿಸಿದ ವಿದ್ಯಾರ್ಥಿಗಳು ವಿದೇಶಕ್ಕೆ ತೆರಳುತ್ತಿದ್ದಾರೆ. ಹೀಗಾಗಿ ಕೋರ್ಸ್ ಮುಗಿದ ಬಳಿಕ 5 ವರ್ಷದವರೆಗೆ ಕರಾರು ಮಾಡಿಸಲು ಮನವಿ ಮಾಡಿದ್ದಾರೆ.

ಬೆಂಗಳೂರು: ಸರ್ಕಾರ ವೈದ್ಯಕೀಯ ವಿದ್ಯಾರ್ಥಿಗಳಿಗೆ ₹50 ಲಕ್ಷ ವ್ಯಯಿಸುತ್ತದೆ. ಆದರೆ ಅವರು ಕೋರ್ಸ್ ಮುಗಿಸಿ ವಿದೇಶಕ್ಕೆ ತೆರಳುತ್ತಿದ್ದಾರೆ. ಹೀಗಾಗಿ ಕೋರ್ಸ್ ಮುಗಿದ ಬಳಿಕ 5 ವರ್ಷವಾದರೂ ವೈದ್ಯರ ಪ್ರತಿಭಾ ಪಲಾಯನ ತಡೆಯುವಂತಹ ಕರಾರು ಮಾಡಿಸಬೇಕು ಎಂದು ಸಚಿವ ಎಸ್.ಟಿ. ಸೋಮಶೇಖರ್ ಸಿಎಂ ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ. ಸರ್ಕಾರ ವೈದ್ಯಕೀಯ ವಿದ್ಯಾರ್ಥಿಗಳಿಗೆ 50 ಲಕ್ಷದವರೆಗೆ ಹಣ ವ್ಯಯ ಮಾಡಲಿದೆ. ಆದರೆ ವೈದ್ಯಕೀಯ ಕೋರ್ಸ್ ಮುಗಿಸಿದ ವಿದ್ಯಾರ್ಥಿಗಳು ವಿದೇಶಕ್ಕೆ ತೆರಳುತ್ತಿದ್ದಾರೆ. ಹೀಗಾಗಿ ಕೋರ್ಸ್ ಮುಗಿದ ಬಳಿಕ 5 ವರ್ಷದವರೆಗೆ ಕರಾರು ಮಾಡಿಸಲು ಮನವಿ ಮಾಡಿದ್ದಾರೆ. ರಾಜ್ಯದಲ್ಲಿ ಕೆಲಸ ಮಾಡುವ ವೈದ್ಯರಿಗೆ ಹೆಚ್ಚನ ಸಂಬಳ ಭತ್ಯೆ ನೀಡುವಂತೆ ಕೋರಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಇದೇ ವೇಳೆ ರಾಜ್ಯದ ಆರೋಗ್ಯ ಕ್ಷೇತ್ರದ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ಕೊವಿಡ್ ನಂತರ ಕರ್ನಾಟಕ ರಾಜ್ಯದ ಆರೋಗ್ಯ ಕ್ಷೇತ್ರದಲ್ಲಿ ಸುಧಾರಣೆಯಾಗಿದೆ. ಕಳೆದ 1 ವರ್ಷದಲ್ಲಿ ಆರೋಗ್ಯ ಮೂಲಸೌಕರ್ಯ ಚುರುಕುಗೊಂಡಿದೆ ಎಂದು ತಿಳಿಸಿದ್ದಾರೆ. ರಾಜ್ಯಾದ್ಯಂತ ಆಸ್ಪತ್ರೆಗಳ ಹಾಸಿಗೆ ಸಾಮರ್ಥ್ಯ ದುಪ್ಪಟ್ಟಾಗಿದ್ದು, ಕೊವಿಡ್ ಸಂಕಷ್ಟದ ಬೆನ್ನಲ್ಲೇ ಆಕ್ಸಿಜನ್ ಉತ್ಪಾದನೆಗೆ ಆದ್ಯತೆ ನೀಡಲಾಗಿದೆ. ನಿತ್ಯ ಸುಮಾರು 2 ಲಕ್ಷ ಕೊವಿಡ್ ಟೆಸ್ಟ್ ಮಾಡುವ ಸಾಮರ್ಥ್ಯ ಅಭಿವೃದ್ಧಿಪಡಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
1,015 ಮೆಟ್ರಿಕ್ ಟನ್ ಆಕ್ಸಿಜನ್ ಲಭ್ಯವಿದ್ದು, 22ಸಾವಿರಕ್ಕೂ ಹೆಚ್ಚು ಬೆಡ್ಗಳನ್ನು ಅಭಿವೃದ್ಧಿಪಡಿಸಲಾಗಿದೆ. ಕೊವಿಡ್ ಸಾಂಕ್ರಾಮಿಕ ರೋಗ ನಿರ್ವಹಣೆಗೆ ಸಮರ್ಪಕ ಔಷಧಗಳನ್ನು ಪೂರೈಸಲಾಗುತ್ತಿದೆ. ಆರೋಗ್ಯ ಮೂಲಸೌಕರ್ಯ ವೃದ್ಧಿಗೆ ರಾಜ್ಯ ಸರ್ಕಾರದ ಕ್ರಮ ಕೈಗೊಂಡಿದೆ ಎಂದು ಮಾಧ್ಯಮ ಪ್ರಕಟಣೆ ಮೂಲಕ ಸಚಿವ ಡಾ.ಸುಧಾಕರ್ ಮಾಹಿತಿ ನೀಡಿದ್ದಾರೆ.
ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಗಳ ಒಗ್ಗಟ್ಟಿನ ಕಾರ್ಯನಿರ್ವಹಣೆಯಿಂದ ಫಲದಿಂದ ಕೊವಿಡ್ 2ನೇ ಅಲೆಯ ತೀವ್ರತೆ ಮಧ್ಯೆ ಸೂಕ್ತ ಚಿಕಿತ್ಸೆ ಒದಗಿಸಲಾಗುತ್ತಿದೆ. ಮೇ 22ರವರೆಗೆ 2 ಕೋಟಿ 38 ಜನರಿಗೆ ಕೊರೊನಾ ಟೆಸ್ಟ್ ಮಾಡಲಾಗಿದ್ದು, ರಾಜ್ಯದಲ್ಲಿ ಶೇ.80ಕ್ಕಿಂತ ಹೆಚ್ಚು RTPCR ಪರೀಕ್ಷೆ ಮಾಡಿದ್ದೇವೆ. ರಾಜ್ಯಾದ್ಯಂತ ಆಸ್ಪತ್ರೆಗಳ ಹಾಸಿಗೆ ಸಾಮರ್ಥ್ಯ ದುಪ್ಪಟ್ಟಾಗಿದೆ. ಕೊವಿಡ್ ಸಂಕಷ್ಟದ ಬೆನ್ನಲ್ಲೇ ಆಕ್ಸಿಜನ್ ಉತ್ಪಾದನೆಗೆ ಆದ್ಯತೆ ನೀಡಲಾಗಿದೆ. ಪ್ರತಿ ದಿನ ಸುಮಾರು 2 ಲಕ್ಷ ಕೊವಿಡ್ ಟೆಸ್ಟ್ ಮಾಡುವ ಸಾಮರ್ಥ್ಯ ಹೊಂದಿದೆ. 2020 ಫೆಬ್ರವರಿಯಲ್ಲಿ 2 ಲ್ಯಾಬ್ ಇತ್ತು. ಆದರೆ ಈಗ 241 ಲ್ಯಾಬ್ ಇವೆ. ಮೇ 22ರವರೆಗೆ 1 ಕೋಟಿ 20 ಲಕ್ಷ 14 ಸಾವಿರ 15 ಜನರಿಗೆ ಲಸಿಕೆ ನೀಡಲಾಗಿದೆ. ಆರ್ಥಿಕ ಸಂಕಷ್ಟದ ಮಧ್ಯೆಯೂ ಆರೋಗ್ಯ ಕ್ಷೇತ್ರದ ಅಭಿವೃದ್ಧಿಯನ್ನು ಸರ್ಕಾರ ಕೈಗೊಂಡಿದೆ ಎಂದು ಮಾಧ್ಯಮ ಪ್ರಕಟಣೆಯಲ್ಲಿ ಸಚಿವ ಡಾ.ಕೆ.ಸುಧಾಕರ್ ಮಾಹಿತಿ ನೀಡಿದ್ದಾರೆ.
ಆಕ್ಸಿಜನ್ ಮಟ್ಟ ಅಳೆಯಲು ಆಕ್ಸಿಮೀಟರ್ ಬೇಕಿಲ್ಲ, ಮೊಬೈಲ್ನಲ್ಲಿ ಈ ಆ್ಯಪ್ ಇದ್ದರೆ ಸಾಕು! (Karnataka Minister ST Somashekar appeals stop medical students serving in foreign instead of India)



