AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ಲಾಕ್​ಡೌನ್​ ಮುಂದುವರೆಸುವಂತೆ ಮುಖ್ಯಮಂತ್ರಿಗೆ ಸಲಹೆ ನೀಡಿದ ಸಚಿವರು

ಮತ್ತಷ್ಟು ದಿನ ಮುಂದುವರಿಸುವುದಾದರೆ ಮೂರು ದಿನ ಮೊದಲೇ ಕುಳಿತುಕೊಂಡು ಚರ್ಚೆ ಮಾಡೋಣ, ಚರ್ಚಿಸಿ ಎಲ್ಲರ ಅಭಿಪ್ರಾಯವನ್ನು ಪಡೆದೇ ತೀರ್ಮಾನ ಮಾಡೋಣ ಎಂದು ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ಅವರಿಗೆ ಸಚಿವರು ಸಲಹೆ ನೀಡಿದ್ದಾರೆ.

ರಾಜ್ಯದಲ್ಲಿ ಲಾಕ್​ಡೌನ್​ ಮುಂದುವರೆಸುವಂತೆ ಮುಖ್ಯಮಂತ್ರಿಗೆ ಸಲಹೆ ನೀಡಿದ ಸಚಿವರು
ಸಾಂದರ್ಭಿಕ ಚಿತ್ರ
preethi shettigar
|

Updated on:May 14, 2021 | 12:57 PM

Share

ಬೆಂಗಳೂರು: ದೇಶದಾದ್ಯಂತ ಕೊರೊನಾ ಎರಡನೇ ಅಲೆ ಅತಿ ಹೆಚ್ಚು ವೇಗವಾಗಿ ಹರಡುತ್ತಿದ್ದು, ಸೋಂಕಿತರ ಸಂಖ್ಯೆ ಹೆಚ್ಚಾಗಿದೆ ಮತ್ತು ಸಾವಿನ ಸಂಖ್ಯೆಯಲ್ಲಿ ಕೂಡ ಏರಿಕೆ ಕಂಡುಬಂದಿದೆ. ಹೀಗಾಗಿ ರಾಜ್ಯ ಸರ್ಕಾರ ಮೇ 10 ರಿಂದ ಮೇ 24ರವರೆಗೆ ಕರ್ನಾಟಕದಲ್ಲಿ ಲಾಕ್‌ಡೌನ್ ಘೋಷಣೆ ಮಾಡಿದೆ. ಆದರೆ ಕೊರೊನಾ ಹೆಚ್ಚಳದ ಹಿನ್ನೇಲೆಯಲ್ಲಿ ಮತ್ತಷ್ಟು ದಿನ ಲಾಕ್​ಡೌನ್ ಮುಂದುವರಿಸುವ ಬಗ್ಗೆ ಸಚಿವರು ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ಬಳಿ ಪ್ರಸ್ತಾಪ ಮಾಡಿದ್ದಾರೆ.

ಮೊನ್ನೆ ನಡೆದ ಸಚಿವರ ಸಭೆಯಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪಗೆ ಅಭಿಪ್ರಾಯ ತಿಳಿಸಿದ್ದು, ಲಾಕ್‌ಡೌನ್ ವಿಸ್ತರಿಸಿದರೆ ಜನರು ಮನೆಯಲ್ಲಿರುತ್ತಾರೆ. ಇಲ್ಲದಿದ್ದರೆ ಜನ ಹೊರಗೆ ಬರುತ್ತಾರೆ. ಇದರಿಂದ ಸಮಸ್ಯೆ ಆಗುತ್ತದೆ. ಮತ್ತೆ ಯಥಾ ಸ್ಥಿತಿ ನಿರ್ಮಾಣವಾಗುತ್ತದೆ ಎಂದು ಸಚಿವರು ತಿಳಿಸಿದ್ದಾರೆ.

ಮತ್ತಷ್ಟು ದಿನ ಮುಂದುವರಿಸುವುದಾದರೆ ಮೂರು ದಿನ ಮೊದಲೇ ಕುಳಿತುಕೊಂಡು ಚರ್ಚೆ ಮಾಡೋಣ, ಚರ್ಚಿಸಿ ಎಲ್ಲರ ಅಭಿಪ್ರಾಯವನ್ನು ಪಡೆದೇ ತೀರ್ಮಾನ ಮಾಡೋಣ ಎಂದು ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ಅವರಿಗೆ ಸಚಿವರು ಸಲಹೆ ನೀಡಿದ್ದಾರೆ.

ರಾಜ್ಯದಲ್ಲಿ ಲಾಕ್​ಡೌನ್ ಮುಂದುವರಿಸುವ ಅವಶ್ಯಕತೆ ಇದೆ: ಸಚಿವ ಆರ್​.ಅಶೋಕ್ ಬೆಂಗಳೂರಿನಲ್ಲಿ ಕಂದಾಯ ಸಚಿವ ಆರ್​.ಅಶೋಕ್ ಲಾಕ್​ಡೌನ್ ಮುಂದುವರಿಸುವ ವಿಚಾರವಾಗಿ ಮಾತನಾಡಿದ್ದು, ಈಗ ಕೋವಿಡ್ ಕೇಸ್​ಗಳ ಸಂಖ್ಯೆ ಕಡಿಮೆ ಆಗುತ್ತಿದೆ. ಹೀಗಾಗಿ ರಾಜ್ಯದಲ್ಲಿ ಲಾಕ್​ಡೌನ್ ವಿಸ್ತರಣೆ ಮಾಡುವುದು ಒಳಿತು. ಮೊದಲು ಲಾಕ್​ಡೌನ್ ಮಾಡಿದಾಗ ವಿಪಕ್ಷಗಳು ವ್ಯಂಗ್ಯ ಮಾಡುತ್ತಿದ್ದರು. ಆದರೆ ಈಗ ಸಿದ್ದರಾಮಯ್ಯ ಮನೆಯಲ್ಲಿ ಕುಳಿತು ಟ್ವೀಟ್ ಮಾಡುತ್ತಿದ್ದಾರೆ. ಲಾಕ್​ಡೌನ್ ವಿಸ್ತರಣೆ ಮಾಡಲು ನಾನು ಕೂಡ ಮುಖ್ಯಮಂತ್ರಿ ಬಿ.ಎಸ್​ಯಡಿಯೂರಪ್ಪಗೆ ಸಲಹೆ ನೀಡುತ್ತೇನೆ ಎಂದು ತಿಳಿಸಿದ್ದಾರೆ.

ಬಳಿಕ ಮಾತನಾಡಿದ ಅವರು ಮಕ್ಕಳಿಗಾಗಿ ವಿಶೇಷ‌ ಕೇಂದ್ರ ಪ್ರಾರಂಭ ಮಾಡುವ ವಿಚಾರದ ಬಗ್ಗೆ ವಿವರಿಸಿದ್ದಾರೆ. 50 ಮಕ್ಕಳ ಬೆಡ್ ಪ್ರಾರಂಭ ಮಾಡಲಾಗುತ್ತಿದೆ. ಪೋಷಕರಿಗೂ ಉಳಿಯಲು ಅವಕಾಶ ನೀಡಲಾಗುತ್ತದೆ. ಮಕ್ಕಳಿಗೆ ಆಗುವ ಸಮಸ್ಯೆ ತಡೆಯಲು ಈ ಕ್ರಮ ತೆಗೆದುಕೊಳ್ಳಲಾಗಿದೆ. ಕಳೆದ ಹತ್ತು ದಿನಗಳಿಂದ ನಮ್ಮ ಅಧಿಕಾರಿಗಳು ಡಾಕ್ಟರ್​ಗಳು ಶ್ರಮವಹಿಸಿ ಈ ಕೇಂದ್ರ ಮಾಡಿದ್ದಾರೆ. ಆಕ್ಸಿಜನ್ ಕಡಿಮೆ ಪ್ರಮಾಣದಲ್ಲಿ ಬೇಕಿರುವ ರೋಗಿಗಳಿಗೆ ಈ ಕೊವಿಡ್ ಆರೈಕೆ ಕೇಂದ್ರ ಉಪಯೋಗ ಆಗಲಿದೆ. ಡಾಕ್ಟರ್​ಗಳು, ಸ್ಪೆಷಲಿಸ್ಟ್​ಗಳು ಇಲ್ಲಿ ಇರಲಿದ್ದಾರೆ. ಮುಂದೆ ಮೂರನೇ ಅಲೆಗೂ ಕೂಡಾ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದೇವೆ. ನಮ್ಮ ಕ್ಷೇತ್ರದಲ್ಲಿ ಲಸಿಕೆ ಕೊರತೆ ಆಗಿಲ್ಲ. ನಲವತ್ತೈದು ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ ಎಂದು ಸಚಿವ ಆರ್​.ಅಶೋಕ್ ಹೇಳಿದ್ದಾರೆ.

ಇದ್ನನೂ ಓದಿ:

ಆಗಸ್ಟ್‌ನಲ್ಲೂ ಸಂಡೇ ಲಾಕ್‌ಡೌನ್ ಮುಂದುವರಿಯಲಿದೆ -ಸಚಿವ ಆರ್.ಅಶೋಕ್ ಸ್ಪಷ್ಟನೆ

ರಾಜ್ಯದ 28 ಜಿಲ್ಲೆಗಳಲ್ಲಿ ಶೇ.10ಕ್ಕಿಂತ ಹೆಚ್ಚು ಕೊರೊನಾ ಪಾಸಿಟಿವಿಟಿ ಪ್ರಮಾಣ; ಮೇ.24ಕ್ಕೆ ಲಾಕ್​ಡೌನ್​ ಮುಗಿಯುವುದು ಅನುಮಾನ

Published On - 12:09 pm, Fri, 14 May 21

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ