AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುರ್ಚಿ ಕಚ್ಚಾಟ ಮಧ್ಯೆ ಮತ್ತೆ ಸಚಿವರ ದೆಹಲಿಯಾತ್ರೆ: ಕೆಲವರಿಗೆ ಕಾಂಗ್ರೆಸ್​ ಹೈಕಮಾಂಡ್​ನಿಂದ ಬುಲಾವ್

ಕರ್ನಾಟಕ ಕಾಂಗ್ರೆಸ್ ಪಾಳಯದಲ್ಲಿ ಕುರ್ಚಿ ಕದನ ಮಳೆ ನಿಂತರೂ ಮರದ ಹನಿ ನಿಂತಿಲ್ಲ ಎನ್ನುವಂತಾಗಿದೆ. ಕುರ್ಚಿ ಫೈಟ್ ಅಖಾಡಕ್ಕೆ ಈಗ ಹೈಕಮಾಂಡ್ ನಾಯಕರು ಪ್ರವೇಶ ಮಾಡಿದ್ದು, ಕೆಲವು ಮಂದಿ ಸಚಿವರನ್ನು ಪ್ರತ್ಯೇಕವಾಗಿ ಭೇಟಿ ಮಾಡಿ ಅಭಿಪ್ರಾಯ ಸಂಗ್ರಹಕ್ಕೆ ಮುಂದಾಗಿದ್ದಾರೆ. ಸಚಿವರಿವೆ ಹೈಕಮಾಂಡ್​​ನಿಂದ ಬುಲಾವ್ ಹೋಗಿದೆ.

ಕುರ್ಚಿ ಕಚ್ಚಾಟ ಮಧ್ಯೆ ಮತ್ತೆ ಸಚಿವರ ದೆಹಲಿಯಾತ್ರೆ: ಕೆಲವರಿಗೆ ಕಾಂಗ್ರೆಸ್​ ಹೈಕಮಾಂಡ್​ನಿಂದ ಬುಲಾವ್
ಕುರ್ಚಿ ಕಚ್ಚಾಟ ಮಧ್ಯೆ ಮತ್ತೆ ಸಚಿವರ ದೆಹಲಿಯಾತ್ರೆ: ಕೆಲವರಿಗೆ ಕಾಂಗ್ರೆಸ್​ ಹೈಕಮಾಂಡ್​ನಿಂದ ಬುಲಾವ್
ಹರೀಶ್ ಜಿ.ಆರ್​. ನವದೆಹಲಿ
| Updated By: Ganapathi Sharma|

Updated on:Mar 13, 2025 | 11:19 AM

Share

ನವದೆಹಲಿ, ಮಾರ್ಚ್ 13: ಕರ್ನಾಟಕ ಕಾಂಗ್ರೆಸ್​ನಲ್ಲಿ (Karnataka Congress) ಕುರ್ಚಿ ಬದಲಾವಣೆ ಫೈಟ್ ಮತ್ತೊಂದು ರೂಪ ಪಡೆದಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಎಚ್ಚರಿಕೆ ನೀಡಿದ ಬಳಿಕ ಬಹಿರಂಗವಾಗಿ ಮಾತನಾಡುತ್ತಿದ್ದ ನಾಯಕರು ಮೌನವಾಗಿದ್ದರು.‌ ಇದೀಗ ಹೈಕಮಾಂಡ್ ನಾಯಕರೇ (Congress High Command) ಅಖಾಡಕ್ಕೆ ಇಳಿದು, ಸಚಿವರ ಅಭಿಪ್ರಾಯ ಸಂಗ್ರಹಕ್ಕೆ ಮುಂದಾಗಿದ್ದಾರೆ. ಕಳೆದ ಎರಡು ದಿನಗಳಿಂದ ಒಬ್ಬೊಬ್ಬರೇ ಸಚಿವರು ದೆಹಲಿಗೆ ತೆರಳಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡುತ್ತಿದ್ದಾರೆ. ರಾಜ್ಯ ವಿಧಾನಮಂಡಲ ಅಧಿವೇಶನದ ಮಧ್ಯೆಯೂ ಸಚಿವರು ದೆಹಲಿಯಲ್ಲಿ ಎಐಸಿಸಿ ರಾಷ್ಟ್ರೀಯ ಪ್ರಧಾನ ಸಂಘಟನಾ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ರನ್ನು ಭೇಟಿಯಾಗಿದ್ದಾರೆ‌.

ದೆಹಲಿಯಾತ್ರೆ ಮಾಡುತ್ತಿರುವ ಸಚಿವರೆಲ್ಲರೂ ಪ್ರತ್ಯೇಕವಾಗಿಯೇ ಹೈಕಮಾಂಡ್ ನಾಯಕರನ್ನು ಭೇಟಿಯಾಗುತ್ತಿರುವುದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. ಮಂಗಳವಾರವಷ್ಟೇ ಆರೋಗ್ಯ ಸಚಿವ ದಿನೇಶ್ ಗುಡೂರಾವ್​ಗೆ ಬುಲಾವ್ ನೀಡಿದ್ದ ಕೆಸಿ ವೇಣುಗೋಪಾಲ್, ಎಐಸಿಸಿ ಕಚೇರಿಯಲ್ಲಿ ಮಾತುಕತೆ ನಡೆಸಿದ್ದರು. ಅದಾದ ಬಳಿಕ ಕಂದಾಯ ಸಚಿವ ಕೃಷ್ಣ ಭೈರೇಗೌಡರಿಗೆ ಬುಲಾವ್ ನೀಡಿ ಮಾತುಕತೆ ಮಾಡಿದ್ದಾರೆ.

ಹಲವು ಮಂದಿ ಸಚಿವರು ದೆಹಲಿಗೆ: ಹೈಕಮಾಂಡ್ ಜತೆ ಮಾತುಕತೆ

ಸಚಿವರಾದ ಎಸ್ಎಸ್ ಮಲ್ಲಿಕಾರ್ಜುನ್, ಎಂಬಿ ಪಾಟೀಲ್‌ ಜೊತೆ ಬುಧವಾರ ಕೆಸಿ ವೇಣುಗೋಪಾಲ್ ಚರ್ಚೆ ನಡೆಸಿದ್ದಾರೆ. ಪಕ್ಷದಲ್ಲಿನ ಆಂತರಿಕ ಬೆಳವಣಿಗೆ ಬಗ್ಗೆ ಮಾಹಿತಿ ಪಡೆದಿದ್ದಾರೆ.

ಇದನ್ನೂ ಓದಿ
Image
ಶಾಸಕರಿಗೆ ಡಿಕೆಶಿ ಡಿನ್ನರ್ ಪಾರ್ಟಿ: ಶಾಸಕರ ವಿಶ್ವಾಸ ಗಳಿಸಲು ತಂತ್ರ
Image
ಕ್ಷೇತ್ರ ಮರುವಿಂಡಣೆ ವಿರುದ್ಧ ಬೆಂಬಲ ಕೋರಿ ಕರ್ನಾಟಕಕ್ಕೆ ತಮಿಳುನಾಡು ಪತ್ರ
Image
ಕೈ ಶಾಸಕಾಂಗ ಸಭೆಯಲ್ಲಿ ಪರಸ್ಪರ ಕಿತ್ತಾಡಿಕೊಂಡ ಸಚಿವದ್ವಯರು..!
Image
‘ಕೈ’ ಶಾಸಕಾಂಗ ಸಭೆಯಲ್ಲೇ ಅಸಮಾಧಾನದ ಹೊಗೆ: ಸತೀಶ್ ವಿರುದ್ಧ ಗಣಿಗ ಆಕ್ಷೇಪ

5 ವರ್ಷ ನಾನೇ ಸಿಎಂ ಎಂದ ಸಿಎಂ ಸಿದ್ದರಾಮಯ್ಯ

ಒಂದೆಡೆ ಹೈಕಮಾಂಡ್ ಜತೆ ಸಚಿವರು ಒಬ್ಬೊಬ್ಬರಾಗಿ ಮಾತುಕತೆ ನಡೆಸುತ್ತಿದ್ದರೆ, ಪದೇ ಪದೇ ಸಿಎಂ ಬದಲಾವಣೆ ಬಗ್ಗೆ ಕೂಗು ಎಬ್ಬಿಸುತ್ತಿರುವವರಿಗೆ ಸಿಎಂ ಸಿದ್ದರಾಮಯ್ಯ ವಿಧಾನಸಭೆಯಲ್ಲೇ ಉತ್ತರ ಕೊಟ್ಟಿದ್ದಾರೆ. ಐದು ವರ್ಷ ನಾನೇ ಸಿಎಂ ಆಗಿರುತ್ತೇನೆ ಎಂದು ಹೇಳಿದ್ದಾರೆ.

ಮತ್ತೊಂದೆಡೆ, ಕೆಪಿಸಿಸಿ ಅಧ್ಯಕ್ಷರಾಗಿ 5 ವರ್ಷ ಪೂರೈಸಿರುವ ನೆಪದಲ್ಲಿ ಶಾಸಕರಿಗೆ, ಪಕ್ಷದ ಪದಾಧಿಕಾರಿಗಳಿಗೆ ಡಿನ್ನರ್ ಪಾರ್ಟಿ ಆಯೋಜಿಸಲು ಡಿಸಿಎಂ ಡಿಕೆ ಶಿವಕುಮಾರ್ ಮುಂದಾಗಿದ್ದಾರೆ. ಇದೂ ಸಹ ಪಕ್ಷದ ಆಂತರಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ ಎನ್ನಲಾಗಿದೆ.

ಇದನ್ನೂ ಓದಿ: ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಚರ್ಚೆ ನಡುವೆ ಶಾಸಕರಿಗೆ ಡಿಕೆ ಶಿವಕುಮಾರ್ ಡಿನ್ನರ್ ಪಾರ್ಟಿ

ಒಟ್ಟಿನಲ್ಲಿ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ, ಸಿಎಂ ಬದಲಾವಣೆ ಚರ್ಚೆಯ ನಡುವೆ ಹೈಕಮಾಂಡ್ ನಾಯಕರು ಸಚಿವರನ್ನು ಕರೆದು ಪ್ರತ್ಯೇಕವಾಗಿ ಮಾತನಾಡಿಸುತ್ತಿರುವುದು ಕುತೂಹಲ ಮೂಡಿಸಿದೆ. ಕುರ್ಚಿ ಬದಲಾವಣೆ ಬಗ್ಗೆ ಸಚಿವರ ಅಭಿಪ್ರಾಯ ಸಂಗ್ರಹಕ್ಕೆ ಹೈಕಮಾಂಡ್ ಮುಂದಾಗಿದೆಯಾ ಎಂಬ ಅನುಮಾನ ಸೃಷ್ಟಿಯಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:18 am, Thu, 13 March 25

ಬಿಗ್ ಬಾಸ್​ಗೆ ಹೋಗೋಕೆ ಡಿ ಫ್ಯಾನ್ಸ್​ನ ಎದುರು ಹಾಕ್ಕೊಂಡ್ರಾ ಸೋನು ಶೆಟ್ಟಿ?
ಬಿಗ್ ಬಾಸ್​ಗೆ ಹೋಗೋಕೆ ಡಿ ಫ್ಯಾನ್ಸ್​ನ ಎದುರು ಹಾಕ್ಕೊಂಡ್ರಾ ಸೋನು ಶೆಟ್ಟಿ?
ಬಾಲ್ಯದಲ್ಲೇ ನಿಸ್ಸಾರ್ ಮನೆಯಲ್ಲಿ ಲಿಂಗ ತಂದಿಟ್ಟು ಪೂಜೆ ಮಾಡುತ್ತಿದ್ದನಂತೆ
ಬಾಲ್ಯದಲ್ಲೇ ನಿಸ್ಸಾರ್ ಮನೆಯಲ್ಲಿ ಲಿಂಗ ತಂದಿಟ್ಟು ಪೂಜೆ ಮಾಡುತ್ತಿದ್ದನಂತೆ
ಮೈಸೂರಿಗೆ ಹೊರಟಿದ್ದ ರೈಲಿನಿಂದ ಬೇರ್ಪಟ್ಟ 6 ಬೋಗಿಗಳು
ಮೈಸೂರಿಗೆ ಹೊರಟಿದ್ದ ರೈಲಿನಿಂದ ಬೇರ್ಪಟ್ಟ 6 ಬೋಗಿಗಳು
ಉತ್ತರಕಾಶಿಯ ಧರಾಲಿ ಪ್ರದೇಶವಿಡೀ ಕೆಸರಾವೃತ, ಸಿಎಂ ಧಾಮಿ ವೈಮಾನಿಕ ಸಮೀಕ್ಷೆ
ಉತ್ತರಕಾಶಿಯ ಧರಾಲಿ ಪ್ರದೇಶವಿಡೀ ಕೆಸರಾವೃತ, ಸಿಎಂ ಧಾಮಿ ವೈಮಾನಿಕ ಸಮೀಕ್ಷೆ
ಕೃತಜ್ಞ ಮಗ ಸರ್ಕಾರೀ ನೌಕರ, ಕೆಎಸ್​ಅರ್​ಟಿಸಿಯಲ್ಲಿ ಚಾಲಕ!
ಕೃತಜ್ಞ ಮಗ ಸರ್ಕಾರೀ ನೌಕರ, ಕೆಎಸ್​ಅರ್​ಟಿಸಿಯಲ್ಲಿ ಚಾಲಕ!
ವಾರಾಣಸಿಯಲ್ಲಿ ಪ್ರವಾಹ; ಮನೆ, ಅಂಗಡಿ, ಆಸ್ಪತ್ರೆಗೆ ನುಗ್ಗಿದ ಗಂಗಾ ನದಿ ನೀರು
ವಾರಾಣಸಿಯಲ್ಲಿ ಪ್ರವಾಹ; ಮನೆ, ಅಂಗಡಿ, ಆಸ್ಪತ್ರೆಗೆ ನುಗ್ಗಿದ ಗಂಗಾ ನದಿ ನೀರು
ದರ್ಶನ್ ಅಭಿಮಾನಿಗಳನ್ನು ಕೊಚ್ಚೆಗೆ ಹೋಲಿಸಿದ ಮಾಡೆಲ್ ಸೋನು
ದರ್ಶನ್ ಅಭಿಮಾನಿಗಳನ್ನು ಕೊಚ್ಚೆಗೆ ಹೋಲಿಸಿದ ಮಾಡೆಲ್ ಸೋನು
ವಿಕ್ಟೋರಿಯ ಆಸ್ಪತ್ರೆಯಲ್ಲಿ ರೋಗಿಗಳಿಗೆ ಬಿಸಿನೀರಲ್ಲ ತಣ್ಣೀರೂ ಸಿಗಲ್ಲ!
ವಿಕ್ಟೋರಿಯ ಆಸ್ಪತ್ರೆಯಲ್ಲಿ ರೋಗಿಗಳಿಗೆ ಬಿಸಿನೀರಲ್ಲ ತಣ್ಣೀರೂ ಸಿಗಲ್ಲ!
ಕೆ.ಆರ್ ಪುರ ಮೇಟ್ರೋ ಸ್ಟೇಷನ್ ಬಳಿ ಕೆಲಕಾಲ ಆತಂಕ ಸೃಷ್ಟಿದ ಸೂಟ್​​​ಕೇಸ್​
ಕೆ.ಆರ್ ಪುರ ಮೇಟ್ರೋ ಸ್ಟೇಷನ್ ಬಳಿ ಕೆಲಕಾಲ ಆತಂಕ ಸೃಷ್ಟಿದ ಸೂಟ್​​​ಕೇಸ್​
ಸೆಲ್ಫಿ, ಆಟೋಗ್ರಾಫ್​ಗಾಗಿ ಸಿರಾಜ್ ಹಿಂದೆ ಬಿದ್ದ ಫ್ಯಾನ್ಸ್
ಸೆಲ್ಫಿ, ಆಟೋಗ್ರಾಫ್​ಗಾಗಿ ಸಿರಾಜ್ ಹಿಂದೆ ಬಿದ್ದ ಫ್ಯಾನ್ಸ್