ವಿಧಾನ ಪರಿಷತ್ ಚುನಾವಣೆ: ದಕ್ಷಿಣ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಕಾಂಗ್ರೆಸ್ನಿಂದ ಮರಿತಿಬ್ಬೇಗೌಡ ಕಣಕ್ಕೆ
ಲೋಕಸಭೆ ಚುನಾವಣೆ ಮುಗಿಯುತ್ತಿದ್ದಂತೆ ರಾಜ್ಯದಲ್ಲಿ ವಿಧಾನ ಪರಿಷತ್ ಚುನಾವಣೆ ಕಾವು ಹೆಚ್ಚುತ್ತಿದೆ. ಬಿಜೆಪಿ-ಜೆಡಿಎಸ್ ಮೈತ್ರಿಯಾಗಿ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿದ್ದರೇ, ಇತ್ತ ಕಾಂಗ್ರೆಸ್ ಕೂಡ ಆರೂ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಿದೆ.
ಬೆಂಗಳೂರು, ಮೇ 12: ರಾಜ್ಯದಲ್ಲಿ ಲೋಕಸಭೆ ಚುನಾವಣೆ (Lok Sabha Election) ಮುಗಿಯುತ್ತಿದ್ದಂತೆ ವಿಧಾನ ಪರಿಷತ್ (Legislative Council) ಚುನಾವಣೆ ಕಾವು ತೀರ್ವತೆ ಪಡೆದುಕೊಂಡಿದೆ. ಕಾಂಗ್ರೆಸ್ (Congress) ಈ ಹಿಂದೆ ಐದು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಘೋಷಿಸಿ, ಒಂದು ಕ್ಷೇತ್ರವನ್ನು ಬಾಕಿ ಉಳಿಸಿಕೊಂಡಿತ್ತು. ಇದೀಗ ಬಾಕಿ ಉಳಿದಿದ್ದ ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಪಕ್ಷದ ಅಭ್ಯರ್ಥಿಯಾಗಿ ಮರಿತಿಬ್ಬೇಗೌಡ ಅವರನ್ನು ಆಯ್ಕೆ ಮಾಡುವ ಮೂಲಕ, ವಿಧಾನ ಪರಿಷತ್ನ ಆರೂ ಸ್ಥಾನಗಳಿಗೆ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ. ಈ ಬಗ್ಗೆ ಭಾನುವಾರ ಪತ್ರಿಕಾ ಪ್ರಕರಟಣೆ ಹೊರಡಿಸಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಅವರು ಮಾಹಿತಿ ನೀಡಿದ್ದಾರೆ. ಜೆಡಿಎಸ್‌ನಿಂದ ವಿಧಾನ ಪರಿಷತ್ ಸದಸ್ಯರಾಗಿದ್ದ ಮರಿತಿಬ್ಬೇಗೌಡ ಇತ್ತೀಚಿಗಷ್ಟೇ ಕಾಂಗ್ರೆಸ್ ಸೇರಿದ್ದರು.
ಮೇಲ್ಮನೆ ಚುನಾವಣೆಯನ್ನು ಕಾಂಗ್ರೆಸ್ ಗಂಭೀರವಾಗಿ ತೆಗೆದುಕೊಂಡಿದೆ. ಕಳೆದ ವರ್ಷ ಅಕ್ಟೋಬರ್‌ನಲ್ಲೇ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಐದು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಪ್ರಕಟಿಸಿದ್ದರು. ದಕ್ಷಿಣ ಶಿಕ್ಷಕರ ಕ್ಷೇತ್ರವನ್ನು ಪೆಂಡಿಂಗ್ನಲ್ಲಿ ಇಟ್ಟಿದ್ದರು.
ದಕ್ಷಿಣ ಶಿಕ್ಷಕರ ಕ್ಷೇತ್ರವು ಮೈಸೂರು, ಮಂಡ್ಯ, ಹಾಸನ, ಚಾಮರಾಜನಗರ ಲೋಕಸಭಾ ಕ್ಷೇತ್ರಗಳನ್ನು ಒಳಗೊಂಡಿದೆ. ಕಳೆದ ಬಾರಿ ಜೆಡಿಎಸ್‌ನಿಂದ ಪರಿಷತ್ಗೆ ಆಯ್ಕೆಯಾಗಿದ್ದ ಮರಿತಿಬ್ಬೇಗೌಡ, ಈ ಬಾರಿ ಕಾಂಗ್ರೆಸ್ನಿಂದ ಸ್ಪರ್ಧೆ ಮಾಡುತ್ತಿದ್ದಾರೆ. ಇತ್ತೀಚೆಗೆ ಜೆಡಿಎಸ್‌ನಿಂದ ಮುನಿಸಿಕೊಂಡಿದ್ದ ಅವರು, ಅವಧಿಗೂ ಮುನ್ನವೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ. ಕಳೆದ 24 ವರ್ಷಗಳಿಂದ ಪರಿಷತ್ ಸದಸ್ಯರಾಗಿ ಆಯ್ಕೆಯಾಗುತ್ತಿದ್ದಾರೆ. ಇದೀಗ ಕಾಂಗ್ರೆಸ್ನಿಂದ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ.
ಇದನ್ನೂ ಓದಿ: ವಿಧಾನಪರಿಷತ್ ಚುನಾವಣೆ: ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಬಿಜೆಪಿ
ಅಖಾಡದಲ್ಲಿ ಇರುವ ಕಾಂಗ್ರೆಸ್ ಅಭ್ಯರ್ಥಿಗಳು
- ನೈಋತ್ಯ ಶಿಕ್ಷಕರ ಕ್ಷೇತ್ರ – ಕೆ.ಕೆ ಮಂಜುನಾಥ್ದ
- ಕ್ಷಿಣ ಶಿಕ್ಷಕರ ಕ್ಷೇತ್ರ – ಮರತಿಬ್ಬೇಗೌಡ
- ಆಗ್ನೇಯ ಶಿಕ್ಷಕರ ಕ್ಷೇತ್ರ – ಡಿ.ಟಿ.ಶ್ರೀನಿವಾಸ್
- ಈಶಾನ್ಯ ಪದವೀಧರ ಕ್ಷೇತ್ರ – ಡಾ.ಚಂದ್ರಶೇಖರ ಪಾಟೀಲ
- ನೈಋತ್ಯ ಪದವೀಧರ ಕ್ಷೇತ್ರ – ಆಯನೂರು ಮಂಜುನಾಥ್ಬೆಂ
- ಗಳೂರು ಪದವೀಧರ ಕ್ಷೇತ್ರ – ರಾಮೋಜಿ ಗೌಡ
ಪದವೀಧರ ಮತ್ತು ಶಿಕ್ಷಕರ ಕ್ಷೇತ್ರ ಚುನಾವಣೆ ವೇಳಾಪಟ್ಟಿ
ನಾಮಪತ್ರ ಸಲ್ಲಿಕೆಗೆ ಕೊನೇ ದಿನಾಂಕ: ಮೇ 16, 2024
ನಾಮಪತ್ರ ಪರಿಶೀಲನೆ: ಮೇ 17, 2024
ನಾಮಪತ್ರ ಹಿಂಪಡೆಯಲು ಕೊನೇ ದಿನಾಂಕ: ಮೇ 20, 2024
ಮತದಾನ: ಜೂನ್ 03, 2024
ಮತ ಎಣಿಕೆ: ಜೂನ್ 06, 2024
ಕಾಂಗ್ರೆಸ್ ನಾಯಕರ ಸಭೆ
ಕೆಪಿಸಿಸಿ ಕಚೇರಿಯಲ್ಲಿ ಪರಿಷತ್ ಚುನಾವಣಾ ಸಿದ್ಧತೆ ನಡೆಯುತ್ತಿದೆ. ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ, ಕೆಎಚ್ ಮುನಿಯಪ್ಪ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಜಿಸಿ ಚಂದ್ರಶೇಖರ, ತನ್ವೀರ್ ಸೇಠ್, ಕಾಂಗ್ರೆಸ್ ಅಭ್ಯರ್ಥಿಗಳಾದ ಆಯನೂರು ಮಂಜುನಾಥ್, ಕೆಕೆ ಮಂಜುನಾಥ್, ಚಂದ್ರಶೇಖರ ಪಾಟೀಲ್, ಶ್ರೀನಿವಾಸ ಹಾಗೂ ರಾಮೋಜಿ ಭಾಗಿಯಾಗಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 1:56 pm, Sun, 12 May 24