Karnataka MLC Elections 2022 Live: ವಿಧಾನ ಪರಿಷತ್ ಚುನಾವಣೆ, ಜಿಲ್ಲೆಗಳಲ್ಲಿ ಬಿರುಸಿನ ಮತದಾನ
ಕರ್ನಾಟಕ ವಿಧಾನ ಪರಿಷತ್ ಚುನಾವಣೆ 2022 ಲೈವ್ : ಇಂದು ಪಶ್ಚಿಮ ಶಿಕ್ಷಕರ ಮತಕ್ಷೇತ್ರದ ಚುನಾವಣೆ ನಡೆಯಲಿದೆ. ಈಗಾಗಲ್ಲೇ ಮತದಾನದ ಮಾಡಲು ಆರಂಭವಾಗಿದ್ದು ಮತದಾನ ಬೆಳಿಗ್ಗೆ 8 ರಿಂದ ಸಂಜೆ 5 ರವರೆಗೆ ಮತದಾನ ನಡೆಯಲಿದೆ.
ಬೆಂಗಳೂರು: ವಿಧಾನಪರಿಷತ್ನ ನಾಲ್ಕು ಸ್ಥಾನಗಳಿಗೆ ಇಂದು ಬೆಳಗ್ಗೆ 8 ಗಂಟೆಯಿಂದ ಸಂಜೆ 5ರವರೆಗೆ ಮತದಾನ ನಡೆಯಲಿದೆ. ವಾಯವ್ಯ ಪದವೀಧರ, ವಾಯವ್ಯ ಶಿಕ್ಷಕರ ಕ್ಷೇತ್ರ, ದಕ್ಷಿಣ ಪದವೀಧರ, ಪಶ್ಚಿಮ ಶಿಕ್ಷಕರ ಕ್ಷೇತ್ರಕ್ಕೆ ಚುನಾವಣೆಗೆ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಸೇರಿ ಒಟ್ಟು 49 ಅಭ್ಯರ್ಥಿಗಳು ಸ್ಪರ್ಧೆ ಮಾಡಲಿದ್ದು, ಮೂರು ಪಕ್ಷಗಳ ಅಭ್ಯರ್ಥಿಗಳ ಭವಿಷ್ಯ ಇಂದು ನಿರ್ಧಾರವಾಗಲಿದೆ. ನಾಲ್ಕು ಕ್ಷೇತ್ರಗಳಲ್ಲಿ ಒಟ್ಟು 2,84,992 ಮತದಾರರು ಇದ್ದಾ ರೆ. ಜೂನ್ 15ರಂದು ಮತ ಎಣಿಕೆ ನಡೆಯಲಿದೆ.
ಇಂದು ಪಶ್ಚಿಮ ಶಿಕ್ಷಕರ ಮತಕ್ಷೇತ್ರದ ಚುನಾವಣೆ ನಡೆಯಲಿದೆ. ಈಗಾಗಲ್ಲೇ ಮತದಾನದ ಮಾಡಲು ಆರಂಭವಾಗಿದ್ದು ಮತದಾನ ಬೆಳಿಗ್ಗೆ 8 ರಿಂದ ಸಂಜೆ 5 ರವರೆಗೆ ಮತದಾನ ನಡೆಯಲಿದೆ. ಒಟ್ಟು 7 ಜನ ಅಭ್ಯರ್ಥಿಗಳು ಕಣದಲ್ಲಿದ್ದರೆ ಬಿಜೆಪಿಯಿಂದ ಬಸವರಾಜ ಹೊರಟ್ಟಿ, ಕಾಂಗ್ರೆಸ್‌ನಿಂದ ಬಸವರಾಜ ಗುರಿಕಾರ, ಜೆಡಿಎಸ್‌ನಿಂದ ಶ್ರೀಶೈಲ ಗಡದಿನ್ನಿ ಸ್ಪರ್ಧೆ ಮಾಡಲಿದ್ದು, ಪಕ್ಷೇತರರಾಗಿ ಕರಿಬಸಪ್ಪ ಮಧ್ಯಾನ್ನದ, ಕೃಷ್ಣವಾಣಿ ಶ್ರೀನಿವಾಸಗೌಡ, ಫಕೀರಗೌಡ ಕಲ್ಲನಗೌಡರ, ವೆಂಕನಗೌಡ ಗೋವಿಂದಗೌಡರ ಸ್ಪರ್ಧೆ ಮಾಡಲಿದ್ದಾರೆ
ಧಾರವಾಡ, ಗದಗ, ಹಾವೇರಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಮಾತದಾನ ನಡೆಯಲಿದೆ. ಒಟ್ಟು ಮತದಾರರ ಸಂಖ್ಯೆ – 17,973, ಪುರುಷ ಮತದಾರರು 10,983, ಮಹಿಳಾ ಮತದಾರರು 6990, ಧಾರವಾಡ ಜಿಲ್ಲೆಯಲ್ಲಿ ಒಟ್ಟು 21 ಮತಗಟ್ಟೆಗಳಿದ್ದು 8 ನೇ ಬಾರಿ ಸ್ಪರ್ಧಿಸುತ್ತಿರುವ ಹೊರಟ್ಟಿ ಸ್ಪರ್ಧೆ ಈ ಬಾರಿ ಗೆದ್ದರೆ ದಾಖಲೆಯ ವಿಜಯ ಸಾಧಿಸಿದಂತೆ.
ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 9:28 am, Mon, 13 June 22