ವಿಧಾನ ಪರಿಷತ್​​ನ 6 ಸ್ಥಾನಗಳಿಗೆ ಇಂದು ಮತದಾನ; ಶಿಕ್ಷಕರ, ಪದವೀಧರ ಸ್ಥಾನಗಳಲ್ಲಿ ಯಾರಿಗೆ ಗೆಲುವು?

Karnataka MLC Elections: ಕಾಂಗ್ರೆಸ್ 6 ಕ್ಷೇತ್ರಗಳಲ್ಲೂ ಸ್ವತಂತ್ರವಾಗಿ ಸ್ಪರ್ಧಿಸಿದೆ. ಆದರೆ, ಬಿಜೆಪಿ 4, ಜೆಡಿಎಸ್ 2 ಕ್ಷೇತ್ರಗಳಲ್ಲಿ ಮೈತ್ರಿಯಾಗಿ ಅಖಾಡಕ್ಕಿಳಿದಿವೆ. 6 ಕ್ಷೇತ್ರಗಳಲ್ಲಿ ಒಟ್ಟು 78 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಕ್ಷೇತ್ರವಾರು ಅಭ್ಯರ್ಥಿಗಳ ವಿವರ ಇಲ್ಲಿದೆ.

ವಿಧಾನ ಪರಿಷತ್​​ನ 6 ಸ್ಥಾನಗಳಿಗೆ ಇಂದು ಮತದಾನ; ಶಿಕ್ಷಕರ, ಪದವೀಧರ ಸ್ಥಾನಗಳಲ್ಲಿ ಯಾರಿಗೆ ಗೆಲುವು?
ವಿಧಾನಸೌಧ
Follow us
ಪ್ರಸನ್ನ ಗಾಂವ್ಕರ್​
| Updated By: Ganapathi Sharma

Updated on:Jun 03, 2024 | 7:44 AM

ಬೆಂಗಳೂರು, ಜೂನ್ 3: ಲೋಕಸಭೆ ಚುನಾವಣೆ (Lok Sabha Elections) ಮುಗಿದಿದ್ದು, ನಾಳೆ ಫಲಿತಾಂಶ ಹೊರಬರಲಿದೆ. ಇದರ ಮಧ್ಯೆ ಇಂದು ವಿಧಾನ ಪರಿಷತ್​​ನ ಮೂರು ಶಿಕ್ಷಕರ ಹಾಗೂ ಮೂರು ಪದವೀಧರರ ಕ್ಷೇತ್ರದ ಮತದಾನ (MLC Voting) ನಡೆಯಲಿದೆ. ಕಾಂಗ್ರೆಸ್ 6 ಕ್ಷೇತ್ರಗಳಲ್ಲೂ ಸ್ವತಂತ್ರವಾಗಿ ಸ್ಪರ್ಧಿಸಿದೆ. ಆದರೆ, ಬಿಜೆಪಿ 4, ಜೆಡಿಎಸ್ 2 ಕ್ಷೇತ್ರಗಳಲ್ಲಿ ಮೈತ್ರಿಯಾಗಿ ಅಖಾಡಕ್ಕಿಳಿದಿವೆ. 6 ಕ್ಷೇತ್ರಗಳಲ್ಲಿ ಒಟ್ಟು 78 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಬೆಳಗ್ಗೆ 8ರಿಂದ ಸಂಜೆ 4ರವರೆಗೆ ಮತದಾನ ನಡೆಯಲಿದೆ.

ಈಶಾನ್ಯ ಪದವೀಧರರ ಕ್ಷೇತ್ರ

ಈಶಾನ್ಯ ಪದವೀಧರರ ಕ್ಷೇತ್ರದಲ್ಲಿ ಕಾಂಗ್ರೆಸ್​ನಿಂದ ಡಾ. ಚಂದ್ರಶೇಖರ ಪಾಟೀಲ ಹಾಗೂ ಬಿಜೆಪಿಯಿಂದ ಅಮರನಾಥ ಪಾಟೀಲ್ ಕಣದಲ್ಲಿದ್ದಾರೆ.

ನೈಋತ್ಯ ಪದವೀಧರರ ಕ್ಷೇತ್ರ

ನೈಋತ್ಯ ಪದವೀಧರರ ಕ್ಷೇತ್ರದಲ್ಲಿ ಕಾಂಗ್ರೆಸ್​ನಿಂದ ಆಯನೂರು ಮಂಜುನಾಥ್ ಹಾಗೂ ಭಾರತೀಯ ಜನತಾ ಪಕ್ಷದಿಂದ ಧನಂಜಯ ಸರ್ಜಿ ಸ್ಪರ್ಧಿಸಿದ್ದಾರೆ.

ಬೆಂಗಳೂರು ಪದವೀಧರರ ಕ್ಷೇತ್ರ

ಬೆಂಗಳೂರು ಪದವೀಧರರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಮೋಜಿಗೌಡ ಹಾಗೂ ಭಾರತೀಯ ಜನತಾ ಪಕ್ಷದಿಂದ ಅ.ದೇವೇಗೌಡ ಕಣದಲ್ಲಿದ್ದಾರೆ.

ಆಗ್ನೇಯ ಶಿಕ್ಷಕರ ಕ್ಷೇತ್ರ

ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ ಕಾಂಗ್ರೆಸ್​​​​​ನಿಂದ ಡಿಟಿ ಶ್ರೀನಿವಾಸ್ ಹಾಗೂ ಬಿಜೆಪಿಯಿಂದ ವೈಎ ನಾರಾಯಣಸ್ವಾಮಿ ಸ್ಪರ್ಧಿಸಿದ್ದಾರೆ.

ನೈಋತ್ಯ ಶಿಕ್ಷಕರ ಕ್ಷೇತ್ರ

ನೈಋತ್ಯ ಶಿಕ್ಷಕರ ಕ್ಷೇತ್ರದಲ್ಲಿ 8 ಅಭ್ಯರ್ಥಿಗಳ ಸ್ಪರ್ಧಿಸಿದ್ದು, ಕಾಂಗ್ರೆಸ್​​​​​ನಿಂದ ಕೆಕೆ ಮಂಜುನಾಥ್ ಹಾಗೂ ಜೆಡಿಎಸ್​ನಿಂದ ಎಸ್ಎಲ್ ಭೋಜೇಗೌಡ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ.

ದಕ್ಷಿಣ ಶಿಕ್ಷಕರ ಕ್ಷೇತ್ರ

ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಕಾಂಗ್ರೆಸ್​​​​​ನಿಂದ ಮರಿತಿಬ್ಬೇಗೌಡ ಹಾಗೂ JDS​ನಿಂದ ವಿವೇಕಾನಂದ ಸ್ಪರ್ಧಿಸಿದ್ದಾರೆ.

ಮೇಲ್ಮನೆಗೆ 7 ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಫೈನಲ್

ಇದೇ ಜೂನ್ 13ರಂದು ವಿಧಾನಸಭೆಯಿಂದ ಪರಿಷತ್‌ಗೆ ನಡೆಯುವ ಚುನಾವಣೆಗೆ ಕಾಂಗ್ರೆಸ್ ಹಾಗೂ ಬಿಜೆಪಿ ಅಭ್ಯರ್ಥಿಗಳನ್ನ ಘೋಷಿಸಿವೆ. ಕಾಂಗ್ರೆಸ್‌ಗೆ 7 ಸ್ಥಾನ ಗೆಲ್ಲುವ ಅವಕಾಶವಿದ್ದು, ಅಳೆದು ತೂಗಿ ಫೈನಲ್ ಪಟ್ಟಿ ಪ್ರಕಟಿಸಿದೆ.

ತಂದೆ ಸಿದ್ದರಾಮಯ್ಯಗೆ ವರುಣ ಕ್ಷೇತ್ರ ತ್ಯಾಗ ಮಾಡಿದ್ದ ಯತೀಂದ್ರಗೆ ಮೇಲ್ಮನೆ ಟಿಕೆಟ್ ಸಿಕ್ಕಿದೆ. ಹಾಗೆಯೇ ಸಚಿವರಾಗಿರೋ ಕಾರಣಕ್ಕೆ ಮತ್ತು ಹೈಕಮಾಂಡ್‌ಗೆ ಜೊತೆ ಉತ್ತಮ ಬಾಂಧವ್ಯ ಇಟ್ಟುಕೊಂಡಿರೋ ಎನ್.ಎಸ್.ಬೋಸರಾಜುಗೆ ಮಣೆ ಹಾಕಲಾಗಿದೆ. ರಾಯಚೂರು ನಾಯಕರ ವಿರೋಧದ ನಡುವೆ ಬೋಸರಾಜು ಮರು ಆಯ್ಕೆಯಾಗಲಿದ್ದಾರೆ. ಇನ್ನೂ ಮೂರನೇ ಬಾರಿಗೆ ಆಯ್ಕೆಯಾಗ್ತಿರೋ ಡಾ. ಕೆ ಗೋವಿಂದ ರಾಜುಗೆ ಟಿಕೆಟ್ ನೀಡಿದೆ. ಕೆಪಿಸಿಸಿ ಕಾರ್ಯಾಧ್ಯಕ್ಷ ವಸಂತ ಕುಮಾರ್, ಜಗದೇವ್ ಗುತ್ತೇದಾರ್, ಅಲ್ಪಸಂಖ್ಯಾತ ಕೋಟಾದಡಿ ಐವಾನ್ ಡಿಸೋಜಾ, ಶಿವಮೊಗ್ಗದ ಮಾಜಿ ಜಿಪಂ ಅಧ್ಯಕ್ಷೆ ಬಿಲ್ಕಿಸ್ ಬಾನೋಗೆ ಚಾನ್ಸ್ ಸಿಕ್ಕಿದೆ. ಇದರ ಜೊತೆಗೆ ಜಗದೀಶ್ ಶೆಟ್ಟರ್ ರಾಜೀನಾಮೆಯಿಂದ ತೆರವಾಗಿರೋ ಪರಿಷತ್ ಉಪ ಚುನಾವಣೆ ನಡೆಯಲಿದ್ದು, ಬಸನಗೌಡ ಬಾದರ್ಲಿಗೆ ಟಿಕೆಟ್ ನೀಡಲಾಗಿದೆ.

ಬಿಜೆಪಿ 3 ಸ್ಥಾನಕ್ಕೆ ಟಿಕೆಟ್ ಘೋಷಣೆ; ಸಿ.ಟಿ ರವಿಗೆ ಮಣೆ

ಪರಿಷತ್‌ನಲ್ಲಿ ಬಿಜೆಪಿಗೆ ಮೂರು ಸ್ಥಾನ ಗೆಲ್ಲೋ ಅವಕಾಶವಿದ್ದು, ಅಭ್ಯರ್ಥಿಗಳ ಹೆಸರು ಫೈನಲ್ ಮಾಡಿದೆ. ಒಕ್ಕಲಿಗ ಸಮುದಾಯದ ಸಿಟಿ ರವಿ ಮತ್ತು ಪರಿಷತ್ ಸದಸ್ಯರಾಗಿರೋ ಗಂಗಾ ಮತಸ್ಥ ಸಮುದಾಯದ ಎನ್ ರವಿಕುಮಾರ್‌ಗೆ ಮತ್ತೊಂದು ಅವಕಾಶ ನೀಡಲಾಗಿದೆ. ಹಾಗೆಯೇ ಮರಾಠಾ ಸಮುದಾಯದ ಎಂ.ಬಿ ಮುಳೆಗೆ ಟಿಕೆಟ್ ನೀಡಲಾಗಿದೆ.

ಇದನ್ನೂ ಓದಿ: ಲೋಕಸಭೆ ಚುನಾವಣೆ ಮತ ಎಣಿಕೆ: ಬೆಂಗಳೂರಿನ ಈ ರಸ್ತೆಗಳಲ್ಲಿ ನಾಳೆ ಸಂಚಾರ, ಪಾರ್ಕಿಂಗ್ ನಿಷೇಧ

ಇಂದು ಮತ್ತು ಜೂನ್ 13ರಂದು ನಡೆಯೋ ಪರಿಷತ್ ಚುನಾವಣೆಯಲ್ಲಿ ಗೆದ್ದು, ಮೇಲ್ಮನೆಯಲ್ಲಿ ಹಿಡಿತ ಸಾಧಿಸಲು ಮೂರು ಪಕ್ಷಗಳ ರಣತಂತ್ರ ಭರ್ಜರಿಯಾಗಿಯೇ ನಡೆಯುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:23 am, Mon, 3 June 24

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ