AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಲಗಾರನಿಗೆ ಕಿರುಕುಳ, ಹಿಂಸಾಚಾರ, ಬೆದರಿಕೆ ಹಾಕುವಂತಿಲ್ಲ -ಕರ್ನಾಟಕ ಲೇವಾದೇವಿದಾರರ ವಿಧೇಯಕ ಅಂಗೀಕಾರ

ವಿಧಾನಸಭೆಯಲ್ಲಿ ಕರ್ನಾಟಕ ಲೇವಾದೇವಿದಾರರ (ತಿದ್ದುಪಡಿ) ವಿಧೇಯಕ-2021 ಅಂಗೀಕಾರವಾಗಿದೆ. ತಿದ್ದುಪಡಿಯಾದ ವಿಧೇಯಕದ ಅಡಿಯಲ್ಲಿ ಕಾನೂನು ಪ್ರಕಾರ ಸಾಲಗಾರನಿಂದ ಸಾಲ ವಸೂಲಿ ಮಾಡಬೇಕು. ಸಾಲಗಾರನಿಗೆ ಕಿರುಕುಳ, ಹಿಂಸಾಚಾರ, ಬೆದರಿಕೆ ಹಾಕುವಂತಿಲ್ಲ. ಒಂದು ವೇಳೆ ಇಂತಹ ಕೃತ್ಯವನ್ನು ಎಸಗಿದರೆ ಕಾನೂನು ಕ್ರಮ ಜರುಗಿಸಲಾಗುವುದು.

ಸಾಲಗಾರನಿಗೆ ಕಿರುಕುಳ, ಹಿಂಸಾಚಾರ, ಬೆದರಿಕೆ ಹಾಕುವಂತಿಲ್ಲ -ಕರ್ನಾಟಕ ಲೇವಾದೇವಿದಾರರ ವಿಧೇಯಕ ಅಂಗೀಕಾರ
ವಿಧಾನ ಸಭೆ
Follow us
KUSHAL V
|

Updated on:Mar 15, 2021 | 6:09 PM

ಬೆಂಗಳೂರು: ವಿಧಾನಸಭೆಯಲ್ಲಿ ಕರ್ನಾಟಕ ಲೇವಾದೇವಿದಾರರ (ತಿದ್ದುಪಡಿ) ವಿಧೇಯಕ-2021 ಅಂಗೀಕಾರವಾಗಿದೆ. ತಿದ್ದುಪಡಿಯಾದ ವಿಧೇಯಕದ ಅಡಿಯಲ್ಲಿ ಕಾನೂನು ಪ್ರಕಾರ ಸಾಲಗಾರನಿಂದ ಸಾಲ ವಸೂಲಿ ಮಾಡಬೇಕು. ಸಾಲಗಾರನಿಗೆ ಕಿರುಕುಳ, ಹಿಂಸಾಚಾರ, ಬೆದರಿಕೆ ಹಾಕುವಂತಿಲ್ಲ. ಒಂದು ವೇಳೆ ಇಂತಹ ಕೃತ್ಯವನ್ನು ಎಸಗಿದರೆ ಕಾನೂನು ಕ್ರಮ ಜರುಗಿಸಲಾಗುವುದು. 6 ತಿಂಗಳವರೆಗೆ ವಿಸ್ತರಿಸಬಹುದಾದ ಕಾರಾಗೃಹವಾಸ ಅಥವಾ ಸುಮಾರು 5 ಸಾವಿರ ರೂಪಾಯಿವರೆಗೆ ದಂಡ ವಿಧಿಸಬಹುದಾಗಿದೆ. ಜೊತೆಗೆ, ದಂಡದ ಬದಲಿಗೆ 1 ವರ್ಷದವರೆಗೆ ಶಿಕ್ಷೆ ವಿಧಿಸಬಹುದು ಅಥವಾ 50 ಸಾವಿರ ರೂಪಾಯಿವರೆಗೆ ದಂಡ ವಿಧಿಸುವುದಕ್ಕೆ ತಿದ್ದುಪಡಿ ಮಾಡಲಾಗಿದೆ.

ಕರ್ನಾಟಕ ಪೌರಸಭೆಗಳ ತಿದ್ದುಪಡಿ ವಿಧೇಯಕ ಅಂಗೀಕಾರ ವಿಧಾನಸಭೆಯಲ್ಲಿ ಕರ್ನಾಟಕ ಪೌರಸಭೆಗಳ ತಿದ್ದುಪಡಿ ವಿಧೇಯಕ ಕೂಡ ಅಂಗೀಕಾರ ಆಗಿದೆ. ಇದೀಗ, ಕುಷ್ಠ ರೋಗದಿಂದ ನರಳುತ್ತಿರುವ ವ್ಯಕ್ತಿಗಳ ವಿರುದ್ಧ ತಾರತಮ್ಯವನ್ನು ತೊಡೆದು ಹಾಕುವ ತಿದ್ದುಪಡಿ ವಿಧೇಯಕ ಅಂಗೀಕಾರವಾಗಿದೆ.

ಯಾವುದೇ ಅಪಾಯಕಾರಿ ಕಾಯಿಲೆಯಿಂದ ಬಳಲುತ್ತಿರುವ ವ್ಯಕ್ತಿಯನ್ನು ಮಾರುಕಟ್ಟೆಗೆ ಪ್ರವೇಶಿಸಲು ತಡೆಯುವಂತಿಲ್ಲ. ಜೊತೆಗೆ, ಯಾವುದೇ ವ್ಯಕ್ತಿ ಗಲಭೆ ಮಾಡಿದ್ರೆ ಮಾರುಕಟ್ಟೆಯಿಂದ ಆತನನ್ನು ಹೊರದೂಡಲು ಅವಕಾಶ ಕಲ್ಪಿಸಲಾಗಿದೆ. ಗಲಭೆ ಮಾಡಿದ್ರೆ ಅಂತಹವರನ್ನ ಹೊರದೂಡಲು ಅವಕಾಶ ನೀಡಲಾಗಿದೆ.

ಮೈಸೂರು ರೇಸ್​ಕ್ಲಬ್​ಗೆ ಅಗ್ಗದ ದರಕ್ಕೆ ಜಮೀನು ಗುತ್ತಿಗೆ ಪ್ರಶ್ನಿಸಿ ಪಿಐಎಲ್ ಮೈಸೂರು ರೇಸ್​ಕ್ಲಬ್​ಗೆ ಜಮೀನು ಗುತ್ತಿಗೆ ವಿಚಾರವಾಗಿ ಅಗ್ಗದ ದರಕ್ಕೆ ಗುತ್ತಿಗೆ ಪ್ರಶ್ನಿಸಿ ಎಸ್.ಉಮಾಪತಿ ಎಂಬುವವರಿಂದ ಪಿಐಎಲ್ ಸಲ್ಲಿಸಲಾಗಿದೆ. ಇದೀಗ, ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ಸಹ ನಡೆಯಿತು.

ರೇಸ್​ಕ್ಲಬ್​ನ ಶೇ.2ರಷ್ಟು ಆದಾಯ ಮಾತ್ರ ಗುತ್ತಿಗೆಯ ಮೊತ್ತವಾಗಿ ನಿಗದಿಪಡಿಸಲಾಗಿದೆ. ಹಾಗಾಗಿ, ರಾಜ್ಯ ಸರ್ಕಾರದ ನೀತಿಗೆ ಹೈಕೋರ್ಟ್ ಅಚ್ಚರಿ ವ್ಯಕ್ತಪಡಿಸಿದೆ. ಕೇವಲ ಶೇ.2 ರಷ್ಟು ಆದಾಯಕ್ಕೆ 30 ವರ್ಷ ಗುತ್ತಿಗೆ ನೀಡಲಾಗಿದೆ. ಇದು ಸಾರ್ವಜನಿಕ ಆಸ್ತಿ ಸದ್ಬಳಕೆ ಮಾಡುವ ರೀತಿಯಲ್ಲ ಎಂದು ಹೈಕೋರ್ಟ್​ ಅಭಿಪ್ರಾಯ ವ್ಯಕ್ತಿಪಡಿಸಿದೆ.

ರೇಸ್​​​ಕ್ಲಬ್​ನಿಂದ ಪ್ರವಾಸೋದ್ಯಮ ಅಭಿವೃದ್ಧಿಗೆ ಆದಾಯ ದೊರೆಯುತ್ತದೆ ಎಂಬ ಪ್ರತಿವಾದಿಗಳ ಆಕ್ಷೇಪಣೆಗೆ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ಪ್ರವಾಸೋದ್ಯಮಕ್ಕೆ ಪ್ರಾಣಿ ಸಂಗ್ರಹಾಲಯ ಆಕರ್ಷಣೆಯೋ ಅಥವಾ ರೇಸ್​ಕ್ಲಬ್ ಮುಖ್ಯವೋ ಸರ್ಕಾರವೇ ಹೇಳಬೇಕು ಎಂದು ಕೋರ್ಟ್​ ಹೇಳಿದೆ. ಜೊತೆಗೆ, ಸಚಿವ ಸಂಪುಟ ತೀರ್ಮಾನದ ಪ್ರತಿ ಸಲ್ಲಿಸಲು ಸೂಚನೆ ನೀಡಿದೆ. ಗುತ್ತಿಗೆ ಸಂಬಂಧಿಸಿದ ಕಡತ ಸಲ್ಲಿಸಲು ಸರ್ಕಾರಕ್ಕೆ ಹೈಕೋರ್ಟ್​ ಸೂಚನೆ ಕೊಟ್ಟಿದೆ.

ಇದನ್ನೂ ಓದಿ: ಅವತ್ತೇ ಹೇಳಿದ್ದೇನೆ.. ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ಗೆ ನನ್ನ ಬಗ್ಗೆ ತುಂಬಾ ಪ್ರೀತಿ ಇದೆ -ಬಿ.ವೈ.ವಿಜಯೇಂದ್ರ

Published On - 6:08 pm, Mon, 15 March 21

ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ
ಆನೇಕಲ್​ನಲ್ಲಿ ನಿಗೂಢ ಸ್ಫೋಟ: ಕಾಂಕ್ರೀಟ್ ರಸ್ತೆ ಛಿದ್ರ
ಆನೇಕಲ್​ನಲ್ಲಿ ನಿಗೂಢ ಸ್ಫೋಟ: ಕಾಂಕ್ರೀಟ್ ರಸ್ತೆ ಛಿದ್ರ
ಹತ್ಯೆಯಾದ ಯುವಕನ ತಾಯಿಯಿಂದ ಅಸ್ಪಷ್ಟ ಮಾಹಿತಿ!
ಹತ್ಯೆಯಾದ ಯುವಕನ ತಾಯಿಯಿಂದ ಅಸ್ಪಷ್ಟ ಮಾಹಿತಿ!
ಪಾಕಿಸ್ತಾನಕ್ಕೆ ಭಾರತದಿಂದ ಚೆನಾಬ್ ನದಿ ನೀರು ಬಂದ್; ಒಣಗಿದ ಸಲಾಲ್ ಡ್ಯಾಂ
ಪಾಕಿಸ್ತಾನಕ್ಕೆ ಭಾರತದಿಂದ ಚೆನಾಬ್ ನದಿ ನೀರು ಬಂದ್; ಒಣಗಿದ ಸಲಾಲ್ ಡ್ಯಾಂ