Karnataka Weather: ಕರಾವಳಿ-ಮಲೆನಾಡಿನಲ್ಲಿ ಮೂರು ದಿನ ಮುಂಗಾರು ಅಬ್ಬರ, ಉಡುಪಿ ಜಿಲ್ಲೆಯಲ್ಲಿ 20 ಸೆಂಮೀ ಮಳೆ ಸಾಧ್ಯತೆ

Karnataka Monsoon updates: ಪ್ರಸಕ್ತ ಸಾಲಿನ ಮುಂಗಾರು ಅಬ್ಬರ ಜೋರಾಗಿದ್ದು ಇನ್ನೂ ಮೂರು ದಿನ ಮಳೆಯಾಗಲಿದೆ. ಹಾಗಾಗಿ ಕರಾವಳಿ ಜಿಲ್ಲೆಗಳು ಮತ್ತು ಮಲೆನಾಡು ಘಟ್ಟಗಳಲ್ಲಿ ಆರೆಂಜ್ ಅಲರ್ಟ್​​ ಘೋಷಿಸಿಲಾಗಿದೆ. ದಕ್ಷಿಣ ಕನ್ನಡದ ಮುಲ್ಕಿಯಲ್ಲಿ ಮಳೆಯ ಅಬ್ಬರದಿಂದ ಮುರಿದ ರೆಂಬೆ ಕಡಿಯಲು ಹೋದ ವ್ಯಕ್ತಿಗೆ ಕರೆಂಟ್ ತಗುಲಿ, ಸಾವನ್ನಪ್ಪಿರುವ ಘಟನೆಯೂ ನಡೆದಿದೆ.

Karnataka Weather: ಕರಾವಳಿ-ಮಲೆನಾಡಿನಲ್ಲಿ ಮೂರು ದಿನ ಮುಂಗಾರು ಅಬ್ಬರ, ಉಡುಪಿ ಜಿಲ್ಲೆಯಲ್ಲಿ 20 ಸೆಂಮೀ ಮಳೆ ಸಾಧ್ಯತೆ
Karnataka Weather: ಕರಾವಳಿ ಜಿಲ್ಲೆಗಳು ಮತ್ತು ಮಲೆನಾಡು ಘಟ್ಟಗಳಲ್ಲಿ ಇನ್ನೂ ಮೂರು ದಿನ ಮುಂಗಾರು ಅಬ್ಬರ, ಆರೆಂಜ್ ಅಲರ್ಟ್​​
Follow us
TV9 Web
| Updated By: ಸಾಧು ಶ್ರೀನಾಥ್​

Updated on:Jun 15, 2021 | 10:39 AM

ಮಂಗಳೂರು: ಕರ್ನಾಟಕದಲ್ಲಿ ಪ್ರಸಕ್ತ ಸಾಲಿನ ಮುಂಗಾರು ಹಂಗಾಮು ಭರ್ಜರಿಯಾಗಿದೆ, ಮಳೆಯ ಅಬ್ಬರ ಜೋರಾಗಿದೆ. ರಾಜ್ಯಕ್ಕೆ ದಟ್ಟ ಮಳೆಗಾಲ ಕಾಲಿಟ್ಟಿದ್ದು, ಇನ್ನು 3 ದಿನಗಳ ಕಾಲ ಭಾರೀ ಮಳೆ ಸುರಿಯಲಿದೆ. ಕರಾವಳಿ ಪ್ರದೇಶ ಮತ್ತು ಮಲೆನಾಡಿನಲ್ಲಿ ಎರಡು-ಮೂರು ದಿನಗಳಿಂದ ಎಡೆಬಿಡದಂತೆ ಮಳೆ ಸುರಿಯುತ್ತಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಹೆಚ್ಚಾಗಿದೆ. ಬೆಂಗಳೂರಿನಲ್ಲಿಯೂ ಮಳೆ ಹೆಚ್ಚಾಗಿದೆ.

ಇಂದಿನಿಂದ ಜೂನ್ 17ರವರೆಗೆ ಆರೆಂಜ್ ಅಲರ್ಟ್​ನಲ್ಲಿ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಭಾರೀ ಮಳೆಯಾಗುವ ನಿರೀಕ್ಷೆ ಇರುವುದರಿಂದ ಈ ಭಾಗಗಳಲ್ಲಿ ಹೈ ಅಲರ್ಟ್​ ಘೋಷಿಸಲಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಮುನ್ನೆಚ್ಚರಿಕೆ ನೀಡಲಾಗಿದೆ. ದಕ್ಷಿಣ ಕನ್ನಡ, ಉಡುಪಿಯಲ್ಲಿ ಮಳೆಯಿಂದ ಅನೇಕ ಮನೆ, ರಸ್ತೆಗಳು ಹಾನಿಯಾಗಿದ್ದು, ಹಲವೆಡೆ ವಿದ್ಯುತ್ ಸಂಪರ್ಕವೂ ಕಡಿತಗೊಂಡಿದೆ. ಕರ್ನಾಟಕದಲ್ಲಿ ಈಗಾಗಲೇ ಜಲಾಶಯಗಳಿಗೆ ನೀರು ಹರಿದುಬರುತ್ತಿದ್ದು, ನದಿಗಳು ತುಂಬಿಹರಿಯುತಿವೆ. ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕುಮಾರಧಾರಾ ನದಿ ತುಂಬಿ ಹರಿಯುತ್ತಿದೆ. ಬೆಳ್ತಂಗಡಿ, ಸುಳ್ಯ, ಮೂಡಿಗೆರೆ, ಕಾರ್ಕಳ, ಕೊಟ್ಟಿಗೆಹಾರ, ಬಾಳೆಹೊನ್ನೂರು ಮುಂತಾದ ಕಡೆ ಮಳೆ ಹೆಚ್ಚಾಗಿದ.

ಉಡುಪಿ ಜಿಲ್ಲೆಯಲ್ಲಿ 20 ಸೆಂ.ಮೀ. ಮಳೆಯಾಗುವ ಸಾಧ್ಯತೆ ಉಡುಪಿ ಜಿಲ್ಲೆಯಲ್ಲಿ ದಟ್ಟ ಮೋಡ ಮುಸುಕಿದ ವಾತಾವರಣವಿದ್ದು, ಇಂದು ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಇದೆ. 20 ಸೆಂ.ಮೀ. ವರೆಗೂ ಮಳೆಯಾಗುವ ಸಾಧ್ಯತೆಯಿದೆ. ನಿನ್ನೆ ರಾತ್ರಿಯಿಡೀ  ಸಾಧಾರಣ ಮಳೆ ಸುರಿದಿದೆ. ಪ್ರತಿಗಂಟೆಗೆ 45 ರಿಂದ 55 ಕಿ.ಮೀ. ಗಾಳಿ ಬೀಸುವ ಸಾಧ್ಯತೆಯಿದೆ. ಮೀನುಗಾರರಿಗೆ ಎಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತ ಸೂಚನೆ ನೀಡಿದೆ.

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಕರ್ನಾಟಕದಲ್ಲಿ ಮಳೆಯ ಅಬ್ಬರ ಹೆಚ್ಚಾಗಿದೆ. ಕರ್ನಾಟಕದ ಉಡುಪಿ, ಒಡಿಶಾ, ಕೇರಳದ ಕೋಯಿಕ್ಕೋಡ್, ವಯನಾಡಿನಲ್ಲಿ ಇಂದು ಅಧಿಕ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ. ಕರಾವಳಿ ರಾಜ್ಯಗಳಾದ ಮಹಾರಾಷ್ಟ್ರ, ಗೋವಾ, ಕರ್ನಾಟಕ ಮತ್ತು ಕೇರಳದಲ್ಲಿ ಇಂದು ಅಧಿಕ ಮಳೆಯಾಗಲಿದೆ. ಈ ವರ್ಷ ಜೂನ್ 3ಕ್ಕೆ ಕೇರಳವನ್ನು ಪ್ರವೇಶಿಸಿದ್ದ ನೈಋತ್ಯ ಮಾನ್ಸೂನ್​ ಜೂನ್ 6ರಂದು ಕರ್ನಾಟಕವನ್ನು ಪ್ರವೇಶಿಸಿತ್ತು.

ಇನ್ನು ರಾಜ್ಯದ ಉತ್ತರ ಭಾಗದ ಒಳನಾಡಿನ ಜಿಲ್ಲೆಗಳಾದ ವಿಜಯಪುರ, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಬಾಗಲಕೋಟೆಯಲ್ಲಿ ಹಳದಿ ಅಲರ್ಟ್​ ಹೊರಡಿಸಲಾಗಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಜೂನ್ 16 ಹಾಗೂ 17ರಂದು ಆರೆಂಜ್ ಅಲರ್ಟ್​ ಇದೆ. ಉಳಿದ ದಿನಗಳಲ್ಲಿ ಭಾರತೀಯ ಹವಾಮಾನ ಇಲಾಖೆಯು ಹಳದಿ ಅಲರ್ಟ್​ ಘೋಷಿಸಿದೆ. ಶಿವಮೊಗ್ಗದ ಹೊಸನಗರ, ಸಾಗರ, ತೀರ್ಥಹಳ್ಳಿ, ಚಿಕ್ಕಮಗಳೂರಿನ ಬಾಳೆಹೊನ್ನೂರು, ಕೊಪ್ಪ, ಕಳಸ, ಶೃಂಗೇರಿ ಭಾಗದಲ್ಲಿ ಮಳೆಯ ಅಬ್ಬರ ಹೆಚ್ಚಾಗಿದೆ.

ಕೊಡಗು ಜಿಲ್ಲೆಯಲ್ಲಿಯೂ ಮಳೆ ಪ್ರಮಾಣ ಹೆಚ್ಚಾಗಿದ್ದು, ಅನೇಕ ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ಮಲೆನಾಡಿನಲ್ಲಿ ಮಳೆ ಅಬ್ಬರಕ್ಕೆ ಅನೇಕ ಕಡೆಗಳಲ್ಲಿ ತೋಟಗಳು ಕೊಚ್ಚಿಹೋಗಿವೆ. ಉತ್ತರ ಒಳನಾಡಿನಲ್ಲಿಯೂ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ರಾಜ್ಯ ಹವಾಮಾನ ಇಲಾಖೆ ನಿರ್ದೇಶಕ ಪಾಟೀಲ್ ಮಾಹಿತಿ ನೀಡಿದ್ದಾರೆ. ಉತ್ತರ ಒಳನಾಡಿನಲ್ಲಿ ಇಂದು ಹಳದಿ ಅಲರ್ಟ್​ ಘೋಷಿಸಲಾಗಿದೆ. ಯಾದಗಿರಿ, ವಿಜಯಪುರ, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಹಳದಿ ಅಲರ್ಟ್​ ಘೋಷಿಸಲಾಗಿದೆ.

(Karnataka Monsoon 2021 updates as on june 15)

Monsoon 2021: ಈ ಬಾರಿ ಮುಂಗಾರು ಸೂಪರು; ಕೊರೊನಾದಿಂದ ನೆಲಕಚ್ಚಿರುವ ಆರ್ಥಿಕತೆಗೆ ಮುಂಗಾರು ಆಸರೆಯಾಗಬಲ್ಲದಾ?

Published On - 9:42 am, Tue, 15 June 21

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್