Karnataka Weather: ಹವಾಮಾನ ವರದಿ – ಇಂದು ರಾಜ್ಯದ ಕೆಲವೆಡೆ ಆರೆಂಜ್​ ಅಲರ್ಟ್​, ಯಾವ ಯಾವ ಭಾಗಗಳಲ್ಲಿ ಮಳೆ ಸಾಧ್ಯತೆ?

Karnataka Monsoon 2021: ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಇಂದು ಹೆಚ್ಚಿನ ಪ್ರಮಾಣದಲ್ಲಿ ಮಳೆ ಸುರಿಯಲಿದೆ ಎಂದು ಅಂದಾಜಿಸಲಾಗಿದ್ದು ಮುಂಜಾಗ್ರತಾ ಕ್ರಮವಾಗಿ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ.

Karnataka Weather: ಹವಾಮಾನ ವರದಿ - ಇಂದು ರಾಜ್ಯದ ಕೆಲವೆಡೆ ಆರೆಂಜ್​ ಅಲರ್ಟ್​, ಯಾವ ಯಾವ ಭಾಗಗಳಲ್ಲಿ ಮಳೆ ಸಾಧ್ಯತೆ?
ಕರ್ನಾಟಕ ರಾಜ್ಯ ಹವಮಾನ ವರದಿ
Follow us
TV9 Web
| Updated By: Digi Tech Desk

Updated on:Jun 07, 2021 | 10:33 AM

ಬೆಂಗಳೂರು: ಕರ್ನಾಟಕದ ಕರಾವಳಿ ಹಾಗೂ ಉತ್ತರ ಒಳನಾಡನ್ನು ಪ್ರವೇಶಿಸಿರುವ ಮುಂಗಾರು ಉತ್ತಮ ಮಳೆಯನ್ನೇ ಹೊತ್ತು ತಂದಿದೆ. ಈಗಾಗಲೇ ಕೇರಳದಲ್ಲಿ ನೈರುತ್ಯ ಮಾರುತಗಳ ಅಬ್ಬರ ಶುರುವಾಗಿದ್ದು, ಇಂದು ಕರ್ನಾಟಕದ ಕೆಲ ಭಾಗಗಳಲ್ಲೂ ಭಾರೀ ಮಳೆ ಸುರಿಯುವ ನಿರೀಕ್ಷೆ ಇದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಇಂದು ಹೆಚ್ಚಿನ ಪ್ರಮಾಣದಲ್ಲಿ ಮಳೆ ಸುರಿಯಲಿದೆ ಎಂದು ಅಂದಾಜಿಸಲಾಗಿದ್ದು ಮುಂಜಾಗ್ರತಾ ಕ್ರಮವಾಗಿ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಇತ್ತ ಮಲೆನಾಡು ಭಾಗದಲ್ಲೂ ಮಳೆಯ ಮುನ್ಸೂಚನೆ ಸಿಕ್ಕಿದ್ದು ಕೃಷಿಕರು ಮುಂಗಾರು ವೇಳೆಯ ಕೃಷಿ ಚಟುವಟಿಕೆಗಳನ್ನು ಚುರುಕುಗೊಳಿಸಿದ್ದಾರೆ.

ಹವಾಮಾನ ಇಲಾಖೆಯ ವರದಿಯಂತೆ ಇಂದು ಕೂಡ ಕರ್ನಾಟಕದ ಮಲೆನಾಡು, ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಉತ್ತಮ ಮಳೆ ಸುರಿಯಲಿದೆ. ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಮಳೆಯನ್ನು ನಿರೀಕ್ಷಿಸಲಾಗಿದ್ದು, ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಬೀದರ್, ಗದಗ, ಕಲಬುರ್ಗಿ, ತುಮಕೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ಕೋಲಾರ, ಕೊಪ್ಪಳ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​ ಘೋಷಣೆ ಮಾಡಲಾಗಿದೆ.

ರಾಜಧಾನಿ ಬೆಂಗಳೂರಿನಲ್ಲಿ ಕಳೆದೆರಡು ದಿನಗಳಿಂದ ಮಳೆಯ ಸಿಂಚನವಾಗುತ್ತಿದ್ದು, ಮಲೆನಾಡು, ಕರಾವಳಿ ಭಾಗಗಳ ಜತೆಗೆ ವಿಜಯಪುರ, ಬೆಳಗಾವಿ, ಗದಗ ಭಾಗದಲ್ಲೂ ಮಳೆ ಸುರಿದಿದೆ. ಇಂದು ಸಹ ಈ ಎಲ್ಲಾ ಭಾಗಗಳಲ್ಲಿ ಮಳೆ ಮುಂದುವರೆಯುವ ಸಾಧ್ಯತೆಯಿದ್ದು ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಧಾರವಾಡ, ಬೆಳಗಾವಿ, ಗದಗ ಜಿಲ್ಲೆಗಳಲ್ಲಿ ಹೆಚ್ಚು ಮಳೆ ಹಾಗೂ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಚಾಮರಾಜನಗರ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರ್ಗಿ, ಕೊಡಗು, ಕೋಲಾರ, ಬೀದರ್​ ಮುಂತಾದ ಕಡೆಗಳಲ್ಲಿ ಗುಡುಗು ಸಹಿತ ಉತ್ತಮ ಮಳೆ ಆಗಲಿದೆ ಎಂದು ಅಂದಾಜಿಸಲಾಗಿದೆ.

ಜೂನ್ 3ರಂದು ಕೇರಳವನ್ನು ಪ್ರವೇಶಿಸಿದ ಮುಂಗಾರು ಜೂನ್​ 6 ಅಥವಾ 7ರಂದು ಕರ್ನಾಟಕಕ್ಕೆ ಕಾಲಿಡಲಿದೆ ಎಂದು ನಿರೀಕ್ಷಿಸಲಾಗಿತ್ತು. ಆದರೆ, ಒಂದೆರೆಡು ದಿನ ಮುಂಚಿತವಾಗಿ ಅಂದರೆ ಜೂನ್ 5ರಂದು ರಾಜ್ಯವನ್ನು ಪ್ರವೇಶಿಸಿರುವ ನೈರುತ್ಯ ಮಾರುತಗಳು ಮಳೆಗಾಲವನ್ನು ಹೊತ್ತು ತಂದಿವೆ. ಸದ್ಯ ಜೂನ್ ಮೂರನೇ ವಾರದ ಸುಮಾರಿಗೆ ರಾಜ್ಯಾದ್ಯಂತ ವರುಣನ ಅಬ್ಬರ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ವರದಿಗಳು ತಿಳಿಸಿವೆ.

ಈಗಾಗಲೇ ಕೇರಳ, ಆಂಧ್ರಪ್ರದೇಶದ ಕರಾವಳಿ ಪ್ರದೇಶ, ಅಸ್ಸಾಂ, ಮೇಘಾಲಯ, ಅರುಣಾಚಲ ಪ್ರದೇಶ ರಾಜ್ಯಗಳಲ್ಲಿ ಉತ್ತಮ ಮಳೆಯಾಗುತ್ತಿದೆ. ಜತೆಗೆ, ಇಂದಿನಿಂದ ಮಿಜೋರಾಂ, ತೆಲಂಗಾಣ, ರಾಯಲಸೀಮೆ, ಗೋವಾ, ಗುಜರಾತ್, ಮಹಾರಾಷ್ಟ್ರ ಮುಂತಾದ ಭಾಗಗಳಲ್ಲೂ ಮಳೆ ಅಬ್ಬರ ಹೆಚ್ಚುವ ಸಾಧ್ಯತೆ ಇದೆ. ಈ ವರ್ಷ ಒಟ್ಟಾರೆಯಾಗಿ ಉತ್ತಮ ಮಳೆ ನಿರೀಕ್ಷಿಸಲಾಗಿದ್ದು, ಜೂನ್​ನಿಂದ ಸೆಪ್ಟೆಂಬರ್​ತನಕ ಮಳೆಯ ಆರ್ಭಟವಿರಲಿದೆ ಎಂದು ತಜ್ಞರ ವರದಿಗಳು ತಿಳಿಸಿವೆ.

ಇದನ್ನೂ ಓದಿ: Karnataka Weather: ಬೆಂಗಳೂರಿನಲ್ಲಿ ಮುಂದಿನ ಎರಡು ದಿನ‌ ಭಾರಿ ಮಳೆ, ರಾಜ್ಯದ ಅನೇಕ ಕಡೆ ಯಲ್ಲೋ ಅಲರ್ಟ್ 

ಮಹಾರಾಷ್ಟ್ರ ,ದಕ್ಷಿಣ ಭಾರತದಲ್ಲಿ ಬಿರುಸುಗೊಳ್ಳಲಿದೆ ಮುಂಗಾರು; ಜೂನ್ 15ಕ್ಕೆ ಒಡಿಶಾ ಮತ್ತು ಬಂಗಾಳಕ್ಕೆ ಆಗಮನ

Published On - 10:16 am, Mon, 7 June 21

Daily Devotional: ದಿಕ್ಕುಗಳ ಮಹತ್ವ ಹಾಗೂ ವಿಶೇಷತೆ ತಿಳಿಯಿರಿ
Daily Devotional: ದಿಕ್ಕುಗಳ ಮಹತ್ವ ಹಾಗೂ ವಿಶೇಷತೆ ತಿಳಿಯಿರಿ
ವಾರ ಭವಿಷ್ಯ: ಡಿಸೆಂಬರ್ 16 ರಿಂದ 22ರ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ
ವಾರ ಭವಿಷ್ಯ: ಡಿಸೆಂಬರ್ 16 ರಿಂದ 22ರ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ
Daily Horoscope: ಈ ರಾಶಿಯವರಿಗೆ ಏಳು ಗ್ರಹಗಳ ಶುಭಫಲವಿದೆ
Daily Horoscope: ಈ ರಾಶಿಯವರಿಗೆ ಏಳು ಗ್ರಹಗಳ ಶುಭಫಲವಿದೆ
45 ವರ್ಷಗಳ ನಂತರ ತೆರೆದ ಸಂಭಾಲ್‌ನ ದೇವಾಲಯ; ವಿಡಿಯೋ ವೈರಲ್
45 ವರ್ಷಗಳ ನಂತರ ತೆರೆದ ಸಂಭಾಲ್‌ನ ದೇವಾಲಯ; ವಿಡಿಯೋ ವೈರಲ್
ಭಾರತವನ್ನು ವಿಶ್ವವು ಪ್ರಜಾಪ್ರಭುತ್ವದ ತಾಯಿಯೆಂದು ಆದರಿಸುತ್ತದೆ: ಪ್ರಧಾನಿ
ಭಾರತವನ್ನು ವಿಶ್ವವು ಪ್ರಜಾಪ್ರಭುತ್ವದ ತಾಯಿಯೆಂದು ಆದರಿಸುತ್ತದೆ: ಪ್ರಧಾನಿ
Bigg Boss: ರಜತ್ ಮಾಡಿದ ತಪ್ಪಿಗೆ ಶಿಕ್ಷೆ ವಿಧಿಸಿದ ಕಿಚ್ಚ ಸುದೀಪ್
Bigg Boss: ರಜತ್ ಮಾಡಿದ ತಪ್ಪಿಗೆ ಶಿಕ್ಷೆ ವಿಧಿಸಿದ ಕಿಚ್ಚ ಸುದೀಪ್
ಬ್ರ್ಯಾಂಡ್ ಬೆಂಗಳೂರು ಸಿಗುತ್ತಿಲ್ಲ, ರಸ್ತೆಗುಂಡಿಗಳಲ್ಲಿ ದಫನ್ ಆಯಿತೇ?
ಬ್ರ್ಯಾಂಡ್ ಬೆಂಗಳೂರು ಸಿಗುತ್ತಿಲ್ಲ, ರಸ್ತೆಗುಂಡಿಗಳಲ್ಲಿ ದಫನ್ ಆಯಿತೇ?
ಒಂದು ದೇಶ ಒಂದು ಚುನಾವಣೆ ಮಸೂದೆ ಪ್ರಜಾಪ್ರಭುತ್ವ ವ್ಯವಸ್ಥೆಗೆ ವಿರುದ್ಧ:ಶಾಸಕ
ಒಂದು ದೇಶ ಒಂದು ಚುನಾವಣೆ ಮಸೂದೆ ಪ್ರಜಾಪ್ರಭುತ್ವ ವ್ಯವಸ್ಥೆಗೆ ವಿರುದ್ಧ:ಶಾಸಕ
ಪರಭಾಷಾ ಚಿತ್ರಗಳ ಹಾವಳಿ ಹೆಚ್ಚುತ್ತಿದೆ, ಕಡಿಮೆಯಾಗುತ್ತಿಲ್ಲ: ಗೋವಿಂದು
ಪರಭಾಷಾ ಚಿತ್ರಗಳ ಹಾವಳಿ ಹೆಚ್ಚುತ್ತಿದೆ, ಕಡಿಮೆಯಾಗುತ್ತಿಲ್ಲ: ಗೋವಿಂದು
ಧರಣಿಯಲ್ಲಿ ಪಾಲ್ಗೊಂಡ ಸಚಿವೆಯನ್ನು ಸಿಎಂ ಸಸ್ಪೆಂಡ್ ಮಾಡಲಿ: ಸ್ವಾಮೀಜಿ
ಧರಣಿಯಲ್ಲಿ ಪಾಲ್ಗೊಂಡ ಸಚಿವೆಯನ್ನು ಸಿಎಂ ಸಸ್ಪೆಂಡ್ ಮಾಡಲಿ: ಸ್ವಾಮೀಜಿ