ರಾಜ್ಯದಲ್ಲಿ ಮುಂದುವರಿದ ಮಳೆಯ ಅಬ್ಬರ: ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ಅಲರ್ಟ್

ಕರ್ನಾಟಕದಲ್ಲಿ ನೈಋತ್ಯ ಮಾನ್ಸೂನ್ ಚುರುಕಾಗಿದ್ದು, ಕರಾವಳಿ, ಮಲೆನಾಡಿನಲ್ಲಿ ಭಾರಿ ಮಳೆಯ ನಿರೀಕ್ಷೆಯಿದೆ. IMD ಮುನ್ಸೂಚನೆ ಪ್ರಕಾರ, ಮಂಗಳೂರು, ಉಡುಪಿಯಲ್ಲಿ ಭಾರಿ ಮಳೆ, ಉತ್ತರ ಒಳನಾಡಿನಲ್ಲಿ ಸಾಧಾರಣ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಹಗುರ ಮಳೆಯ ಸಾಧ್ಯತೆಯಿದೆ. ಮೀನುಗಾರರಿಗೆ ಮತ್ತು ನದಿಗಳ ಬಳಿ ಇರುವವರಿಗೆ ಎಚ್ಚರಿಕೆ ನೀಡಲಾಗಿದೆ. ಆರೋಗ್ಯ ಕಾಪಾಡಿಕೊಳ್ಳಲು ಹಾಗೂ ಪ್ರವಾಹ ಪ್ರದೇಶಗಳಿಂದ ದೂರವಿರಲು ಸಲಹೆ ನೀಡಲಾಗಿದೆ.

ರಾಜ್ಯದಲ್ಲಿ ಮುಂದುವರಿದ ಮಳೆಯ ಅಬ್ಬರ: ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ಅಲರ್ಟ್
ಸಾಂದರ್ಭಿಕ ಚಿತ್ರ

Updated on: Aug 20, 2026 | 7:14 AM

ಬೆಂಗಳೂರು, ಆ.20: ರಾಜ್ಯಾದ್ಯಂತ ನೈಋತ್ಯ ಮಾನ್ಸೂನ್ (ಬೆಳೆ ಮಳೆ) ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಮುಂದುವರಿದಿದೆ. ಭಾರತೀಯ ಹವಾಮಾನ ಇಲಾಖೆ (IMD) ನೀಡಿದ ಮುನ್ಸೂಚನೆಯಂತೆ, ಕರಾವಳಿ ಭಾಗದಲ್ಲಿ ಇಂದೂ ಕೂಡ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಮಂಗಳೂರು, ಉಡುಪಿ ಸೇರಿದಂತೆ ಕರಾವಳಿಯ ಬಹುತೇಕ ಭಾಗಗಳಲ್ಲಿ ಮೋಡಕವಿದ ವಾತಾವರಣವಿದ್ದು, ಇಡೀ ದಿನ ಬಿಟ್ಟು ಬಿಟ್ಟು ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಕಡಲಿನಲ್ಲಿ ಗಾಳಿಯ ವೇಗ ಹೆಚ್ಚಿರುವುದರಿಂದ ಮೀನುಗಾರರು ಎಚ್ಚರಿಕೆಯಿಂದಿರಲು ಸೂಚಿಸಲಾಗಿದೆ. ಮಲೆನಾಡಿನ ಘಟ್ಟ ಪ್ರದೇಶಗಳಲ್ಲಿ ಉತ್ತಮ ಮಳೆಯಾಗುತ್ತಿದ್ದು, ನದಿ ಮತ್ತು ಹಳ್ಳ-ಕೊಳ್ಳಗಳಲ್ಲಿ ನೀರಿನ ಹರಿವು ಹೆಚ್ಚಾಗಿದೆ.

ಇಲ್ಲಿದೆ ನೋಡಿ ಪೋಸ್ಟ್:

ಉತ್ತರ ಒಳನಾಡುಗಳಾದ ಬೆಳಗಾವಿ, ಧಾರವಾಡ, ಹಾವೇರಿ, ಕಲಬುರಗಿ, ಯಾದಗಿರಿಯಲ್ಲಿ ಸಾಧಾರಣ ಮಳೆಯಾಗಲಿದ್ದು, ಉಳಿದಂತೆ ಮೋಡಕವಿದ ವಾತಾವರಣ ಇರಲಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಭಾಗಶಃ ಮೋಡಕವಿದ ವಾತಾವರಣ ಇರಲಿದ್ದು, ಸಂಜೆ ಅಥವಾ ರಾತ್ರಿಯ ವೇಳೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇನ್ನು ಈ ಸಮಯದಲ್ಲಿ ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ನೀಡುವಂತೆ ಹೇಳಲಾಗಿದೆ.

ಇದನ್ನೂ ಓದಿ: ತದಡಿ ಬಂದರಿನಲ್ಲಿ ಹೂಳಿನ ಕಂಟಕ: 2 ಬೋಟು ಮುಳುಗಡೆ, ಲಕ್ಷಾಂತರ ರೂ. ನಷ್ಟ; ಮೀನುಗಾರರ ಆಕ್ರೋಶ

ಪ್ರತಿ ಜಿಲ್ಲೆಗಳಿಗೂ ಈ ಬಗ್ಗೆ ಅಲರ್ಟ್​​​ ಮಾಡಲಾಗಿದೆ. ಮಳೆಗಾಲವಾದ ಕಾರಣ ಮಕ್ಕಳು ಹಾಗೂ ಹಿರಿಯರ ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ನೀಡಲು ಮನವಿ ಮಾಡಲಾಗಿದೆ. ಹೆಚ್ಚು ನೀರು ಹರಿಯುವ ಪ್ರದೇಶದಲ್ಲಿ ಎಚ್ಚರ ಇರುವಂತೆ ಎಚ್ಚರಿಯನ್ನು ಕೂಡ ನೀಡಲಾಗಿದೆ. ಅದರಲ್ಲೂ ಕರಾವಳಿ ಭಾಗಗಳಲ್ಲಿ ಸಮುದ್ರ, ನದಿಗಳಿಗೆ ಇಳಿಯದಂತೆ ಕಟ್ಟುನಿಟ್ಟಿನ ಆದೇಶ ನೀಡಲಾಗಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:12 am, Thu, 20 August 26

ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
Loading...
Unable to load recommendations.
Follow Us