Weather Report : ಕರಾವಳಿ ಮತ್ತು ಮಲೆನಾಡಿನಲ್ಲಿ ಭಾರೀ ಮಳೆ; ‘ರೆಡ್ ಅಲರ್ಟ್’ ಘೋಷಣೆ

ರಾಜ್ಯದಲ್ಲಿ ನೈಋತ್ಯ ಮುಂಗಾರು ತೀವ್ರಗೊಂಡಿದ್ದು, ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಿಗೆ ಮುಂದಿನ 24 ಗಂಟೆಗಳಲ್ಲಿ ಅತಿ ಭಾರಿ ಮಳೆ ಮುನ್ಸೂಚನೆ. ಬೆಂಗಳೂರಿನಲ್ಲಿ ಮೋಡ ಕವಿದು ಸಂಜೆ ಲಘು ಮಳೆಯಾಗುವ ಸಾಧ್ಯತೆ ಇದೆ. ಗುಡ್ಡ ಕುಸಿತ, ಸಮುದ್ರ ಅಲೆಗಳ ಏರಿಕೆ ಬಗ್ಗೆ ಸಾರ್ವಜನಿಕರು ಮತ್ತು ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ.

Weather Report : ಕರಾವಳಿ ಮತ್ತು ಮಲೆನಾಡಿನಲ್ಲಿ ಭಾರೀ ಮಳೆ; ‘ರೆಡ್ ಅಲರ್ಟ್’ ಘೋಷಣೆ
ಸಾಂದರ್ಭಿಕ ಚಿತ್ರ

Updated on: Jul 09, 2026 | 7:26 AM

ಮುಖ್ಯಾಂಶಗಳು

  • ಕರಾವಳಿ ಜಿಲ್ಲೆಗಳು ಹಾಗೂ ಮಲೆನಾಡು ಭಾಗದಲ್ಲಿ ವರುಣನ ಆರ್ಭಟ ಜೋರಾಗಿದೆ
  • ಬೆಂಗಳೂರಿನ ಹಲವು ಕಡೆ ಇಂದು ಗಾಳಿ- ಮಳೆ ಇರಲಿದೆ
  • ಜಿಲ್ಲೆಗಳಲ್ಲಿ ಇಂದು ಮೋಡಕವಿದ ವಾತಾವರಣ ಇರಲಿದೆ

ಬೆಂಗಳೂರು, ಜು.9: ರಾಜ್ಯದಲ್ಲಿ ನೈಋತ್ಯ ಮುಂಗಾರು ಮಾರುತಗಳು ಭಾರಿ ಚುರುಕಾಗಿದ್ದು, ಕರಾವಳಿ ಜಿಲ್ಲೆಗಳು ಹಾಗೂ ಮಲೆನಾಡು ಭಾಗದಲ್ಲಿ ವರುಣನ ಆರ್ಭಟ ಜೋರಾಗಿದೆ ಎಂದು ಹವಮಾನಾ ಇಲಾಖೆ ಎಚ್ಚರಿಕೆಯನ್ನು ನೀಡಿದೆ. ಬೆಂಗಳೂರಿನ ಹಲವು ಕಡೆ ಇಂದು ಗಾಳಿ- ಮಳೆ ಇರಲಿದೆ ಎಂದು ಹೇಳಲಾಗಿದೆ. ಕರಾವಳಿ ಭಾಗದಲ್ಲೂ ಹೆಚ್ಚು ಮಳೆಯಾಗಿದೆ ಎಂದು ಹೇಳಿದೆ. ಆದರೆ ಯಾವ ಜಿಲ್ಲೆಗಳಿಗೂ ಶಾಲೆ ರಜೆಯನ್ನು ಘೋಷಣೆ ಮಾಡಿಲ್ಲ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಮಲೆನಾಡು ಭಾಗದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರಿ ಇಂದ ಅತಿ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಘಾಟ್ ಪ್ರದೇಶಗಳಲ್ಲಿ ಗುಡ್ಡ ಕುಸಿತದ ಭೀತಿ ಇರುವುದರಿಂದ ಸಾರ್ವಜನಿಕರು ಹಾಗೂ ಪ್ರವಾಸಿಗರು ಜಾಗರೂಕರಾಗಿರಲು ಇಲಾಖೆ ಸೂಚಿಸಿದೆ. ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಿರುವುದರಿಂದ ಮೀನುಗಾರರು ಕಡಲಿಗೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

ರಾಜಧಾನಿ ಬೆಂಗಳೂರು ಹಾಗೂ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಇಂದು ಮೋಡಕವಿದ ವಾತಾವರಣ ಮುಂದುವರಿಯಲಿದ್ದು, ನಗರದಾದ್ಯಂತ ತಂಪು ಗಾಳಿ ಬೀಸಲಿದೆ. ಸಂಜೆ ಅಥವಾ ರಾತ್ರಿಯ ವೇಳೆಗೆ ನಗರದ ಹಲವು ಭಾಗಗಳಲ್ಲಿ ಸಾಧಾರಣದಿಂದ ಜಿಟಿ ಜಿಟಿ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ಆಸುಪಾಸಿನಲ್ಲಿರಲಿದೆ.

ಇದನ್ನೂ ಓದಿ: ಮಳೆಯಲ್ಲಿ ನೆನೆಯಲು ಇಷ್ಟವಿದ್ದರೆ ಈ ವಿಷಯಗಳನ್ನು ತಿಳಿದುಕೊಂಡು ಆರೋಗ್ಯ ಕಾಪಾಡಿಕೊಳ್ಳಿ

ಉತ್ತರ ಕರ್ನಾಟಕದ ಬೆಳಗಾವಿ, ಧಾರವಾಡ, ಹಾವೇರಿ ಹಾಗೂ ಬೀದರ್ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಇನ್ನು ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ಚಾಮರಾಜನಗರ ಮತ್ತು ತುಮಕೂರು ಜಿಲ್ಲೆಗಳ ಕೆಲವು ಭಾಗಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
Loading...
Unable to load recommendations.
Follow Us