Karnataka Rain: ಕೊಡಗು ಹಾಗೂ ಕರಾವಳಿಯ 3 ಜಿಲ್ಲೆಗಳಲ್ಲಿ ಇಂದು ಭಾರಿ ಮಳೆ ಸಾಧ್ಯತೆ, ಯೆಲ್ಲೋ ಅಲರ್ಟ್​ ಘೋಷಣೆ

ಕೊಡಗು ಹಾಗೂ ಕರಾವಳಿಯ ಮೂರು ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೊಡಗು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 21ರವರೆಗೂ ಮಳೆ ಮುಂದುವರೆಯಲಿದೆ. ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 18ರಂದು ಮಳೆ ಹೆಚ್ಚಾಗುವ ಸಾಧ್ಯತೆ ಇದೆ.

Karnataka Rain: ಕೊಡಗು ಹಾಗೂ ಕರಾವಳಿಯ 3 ಜಿಲ್ಲೆಗಳಲ್ಲಿ ಇಂದು ಭಾರಿ ಮಳೆ ಸಾಧ್ಯತೆ, ಯೆಲ್ಲೋ ಅಲರ್ಟ್​ ಘೋಷಣೆ
ಮಳೆ
Image Credit source: The New Indian Express

Updated on: Sep 15, 2023 | 7:27 AM

ಕೊಡಗು ಹಾಗೂ ಕರಾವಳಿಯ ಮೂರು ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೊಡಗು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 21ರವರೆಗೂ ಮಳೆ ಮುಂದುವರೆಯಲಿದೆ. ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 18ರಂದು ಮಳೆ ಹೆಚ್ಚಾಗುವ ಸಾಧ್ಯತೆ ಇದೆ.

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

ಉಡುಪಿ, ಮಂಗಳೂರು, ಕಾರ್ಕಳ, ಕೊಲ್ಲೂರು, ಗೋಕರ್ಣ, ಕೊಪ್ಪ, ಸಕಲೇಶಪುರ, ಬೆಳ್ಳೂರು, ಬೆಂಗಳೂರು ನಗರ, ಪಣಂಬೂರು, ಧರ್ಮಸ್ಥಳ, ಪುತ್ತೂರು, ಸುಳ್ಯ, ಗೇರುಸೊಪ್ಪ, ಕುಮಟಾ, ಮುರಗೋಡು, ಮುದಗಲ್, ಸೋಮವಾರಪೇಟೆ, ಮಂಡಗದ್ದೆ, ಬೆಂಗಳೂರು ಎಚ್​ಎಎಲ್​, ಆನೇಕಲ್, ಹೆಬ್ಬೂರು, ಕನಕಪುರದಲ್ಲಿ ಮಳೆಯಾಗಿದೆ.

ಮತ್ತಷ್ಟು ಓದಿ: Karnataka Weather: ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮುಂಗಾರು ಚುರುಕು, ಸೆಪ್ಟೆಂಬರ್ 20ರವರೆಗೂ ಮಳೆ

ಕರಾವಳಿಯ ಬಹುತೇಕ ಕಡೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ, ಉತ್ತರ ಒಳನಾಡಿನಲ್ಲೂ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ರಾತ್ರಿ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ. ಎಚ್​ಎಎಲ್​ನಲ್ಲಿ 29.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 30.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us