Karnataka Rains: ಕರ್ನಾಟಕದಲ್ಲಿ ಮುಂಗಾರು ಅಬ್ಬರ, 7 ಜಿಲ್ಲೆಗಳಿಗೆ ರೆಡ್ ಅಲರ್ಟ್
ಅರಬ್ಬಿ ಸಮುದ್ರ ಹಾಗೂ ಬಂಗಾಳಕೊಲ್ಲಿ ಉಂಟಾಗಿರುವ ವಾಯುಭಾರ ಕುಸಿತ, ಇತರ ವೈಪರೀತ್ಯದಿಂದಾಗಿ ಮುಂಗಾರು ಮಳೆ ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಆರಂಭದಲ್ಲೇ ಭಾರೀ ಸದ್ದು ಮಾಡುತ್ತಿದೆ. ಕರಾವಳಿ ಹಾಗೂ ಪಶ್ಚಿಮ ಘಟ್ಟಗಳು ಒಳಗೊಂಡಂತೆ ಒಳನಾಡು ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುತ್ತಿದೆ. ಕೆಲವೆಡೆ ಜಿಟಿ ಜಿಟಿ ಮಳೆ ಬಂದರೆ, ಇನ್ನೂ ಅನೇಕ ಕಡೆಗಳಲ್ಲಿ ಸಾಧಾರಣದಿಂದ ಭಾರೀ, ಭಾರೀಯಿಂದ ಅತ್ಯಧಿಕ ಭಾರೀ ಮಳೆ ಆಗುತ್ತಿದೆ. ಇನ್ನೂ ಕೆಲವು ದಿನಗಳ ಕಾಲ ಈ ವಾಯುಭಾರ ಕುಸಿತದ ಪ್ರಭಾವ ಮುಂದುವರೆಯಲಿದೆ. ಜೂನ್ 3ರ ಬಳಿಕ ಮಳೆ ಕೊಂಚ ತಗ್ಗಲಿದೆ ಎನ್ನಲಾಗಿದೆ.

ಬೆಂಗಳೂರು, ಮೇ 28: ಕರ್ನಾಟಕದಾದ್ಯಂತ ಮುಂಗಾರು(Monsoon) ಅಬ್ಬರ ತುಸು ಹೆಚ್ಚಾಗಿದೆ. 7 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಭಾರಿ ಮಳೆ(Rain)ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕೊಡಗು, ಹಾಸನ, ವಿಜಯಪುರಕ್ಕೆ ಆರೆಂಜ್ ಅಲರ್ಟ್, ಬೀದರ್, ಧಾರವಾಡ, ಕಲಬುರಗಿ, ರಾಯಚೂರು, ಯಾದಗಿರಿ, ಬಳ್ಳಾರಿ, ಚಾಮರಾಜನಗರ, ದಾವಣಗೆರೆ, ಮೈಸೂರು, ವಿಜಯನಗರಕ್ಕೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಜೂನ್ 3ರಿಂದ ಮಳೆಯ ಪ್ರಮಾಣ ಕೊಂಚ ಕಡಿಮೆಯಾಗಲಿದೆ.
ಮುಲ್ಕಿ, ಮಾಣಿ, ಉಪ್ಪಿನಂಗಡಿ, ಪಣಂಬೂರು, ಅಫ್ಝಲ್ಪುರ್, ಕಾರ್ಕಳ, ಕೋಟಾ, ಪುತ್ತೂರು, ಮಂಗಳೂರು, ಬೆಳ್ತಂಗಡಿಯಲ್ಲಿ ಭಾರಿ ಮಳೆಯಾಗಿದೆ. ಮಂಗಳೂರು, ಭಾಗಮಂಡಲ, ಆಗುಂಬೆ, ನಾಪೋಕ್ಲು, ಸೋಮವಾರಪೇಟೆ, ಸಿದ್ದಾಪುರ, ಗಂಗಾಪುರ, ಧರ್ಮಸ್ಥಳದಲ್ಲಿ ಕೂಡ ಹೆಚ್ಚಿನ ಮಳೆ ಸುರಿದಿದೆ. ಗೇರುಸೊಪ್ಪ, ಮಾನ್ವಿ, ಬುದ್ದೇಬಿಹಾಳ, ಕಾರವಾರ, ಹೊನ್ನಾವರ, ಕೊಪ್ಪ, ಶೃಂಗೇರಿ, ಕಮ್ಮರಡಿ, ಕೆಂಭಾವಿ, ಬಾಳೆಹೊನ್ನೂರು, ಗೋಕರ್ಣ, ಎಚ್ಡಿ ಕೋಟೆ, ಕುಮಟಾ, ಹಾರಂಗಿ, ಯಡ್ರಾಮಿ, ಬಸವನಬಾಗೇವಾಡಿ, ಕುಶಾಲನಗರ, ಬಂಡೀಪುರ, ತ್ಯಾಗರ್ತಿ, ಅಂಕೋಲಾ, ಅರಕಲಗೂಡು, ಸಿಂಧನೂರು, ಕೂಡಲಸಂಗಮ, ಕೃಷ್ಣರಾಜಪೇಟೆ, ಕುರ್ಡಿ, ಇಂಡಿ, ಅಥಣಿ, ಅಜ್ಜಂಪುರ, ಗುಂಡ್ಲುಪೇಟೆ, ಮೈಸೂರು, ಹುನಗುಂದ, ಗಂಗಾವತಿ, ದೇವರಹಿಪ್ಪರಗಿ, ಕುಣಿಗಲ್, ಸಂಕೇಶ್ವರ, ಇಳಕಲ್, ಮುನಿರಾಬಾದ್, ಚಿತ್ತಾಪುರ, ಮುನಿರಾಬಾದ್, ಯಲ್ಲಾಪುರದಲ್ಲಿ ಮಳೆಯಾಗಿದೆ.
ಬೀದರ್ನಲ್ಲಿ 32.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದೆ, ಮಂಗಳವಾರ ಸಾಧಾರಣ ಮಳೆಯಾಗಿದೆ. ಎಚ್ಎಎಲ್ನಲ್ಲಿ 27.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 26.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 27.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 26.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಮತ್ತಷ್ಟು ಓದಿ: Karnataka Rains: ಇಂದು ಕರ್ನಾಟಕದ ಕರಾವಳಿ, ಕೊಡಗು, ಶಿವಮೊಗ್ಗ ಸೇರಿ ಹಲವೆಡೆ ಭಾರಿ ಮಳೆ
ಹೊನ್ನಾವರದಲ್ಲಿ 29.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 28.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 28.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಬೆಳಗಾವಿ ನಗರದಲ್ಲಿ 24.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್ನಲ್ಲಿ 32.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 24.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 25.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಗದಗದಲ್ಲಿ 26.4ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 30.2ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 25.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 26.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 25.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ








