Karnataka Rain: ಮುಂದಿನ ಒಂದು ವಾರ ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಉತ್ತರ ಒಳನಾಡು, ದಕ್ಷಿಣ ಒಳನಾಡಿನ ಬಹುತೇಕ ಕಡೆ ಸೆಪ್ಟೆಂಬರ್ 18ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ,ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

Karnataka Rain: ಮುಂದಿನ ಒಂದು ವಾರ ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ
ಮಳೆ
Image Credit source: NDTV

Updated on: Sep 12, 2023 | 7:25 AM

ಕರ್ನಾಟಕದ ಕರಾವಳಿ, ಉತ್ತರ ಒಳನಾಡು, ದಕ್ಷಿಣ ಒಳನಾಡಿನ ಬಹುತೇಕ ಕಡೆ ಸೆಪ್ಟೆಂಬರ್ 18ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ,ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಕಾರ್ಕಳ, ಧರ್ಮಸ್ಥಳ, ಉಡುಪಿ, ಮಾಣಿ, ಪುತ್ತೂರು, ಕುಂದಾಪುರ, ಕೋಟ, ಕುಮಟಾ, ಕ್ಯಾಸಲ್​ರಾಕ್, ಔರಾದ್, ಮಂಗಳೂರು, ಬೆಳ್ತಂಗಡಿ, ಗೇರುಸೊಪ್ಪ, ಮಂಕಿ, ಗೋಕರ್ಣ, ಫರ್ಹತಾಬಾದ್, ಲಿಂಗನಮಕ್ಕಿ, ತಾಳಗುಪ್ಪ, ಶೃಂಗೇರಿ, ಮಂಗಳೂರು ವಿಮಾನ ನಿಲ್ದಾಣ, ಪಣಂಬೂರು, ಮುಲ್ಕಿ, ಉಪ್ಪಿನಂಗಡಿ, ಸುಳ್ಯ, ಸಿದ್ದಾಪುರ, ಶಿರಾಲಿ, ಹೊನ್ನಾವರ, ಕದ್ರಾ, ಸಿದ್ದಾಪುರ, ಬೇಲಿಕೇರಿ, ಬೀದರ್, ಚಿತ್ತಾಪುರ, ಅಡಕಿ, ತ್ಯಾಗರ್ತಿ, ಕೊಟ್ಟಿಗೆಹಾರ, ಜಯಪುರ, ಕಮ್ಮರಡಿ, ಕೊಪ್ಪ, ಮಡಿಕೇರಿ, ಗೋಣಿಕೊಪ್ಪಲು ಕೆವಿಕೆಯಲ್ಲಿ ಮಳೆಯಾಗಿದೆ.

ಕರಾವಳಿಯ ಬಹುತೇಕ ಕಡೆಗಳಲ್ಲಿ ಹಾಗೂ ಒಳನಾಡಿನ ಕೆಲವು ಕಡೆಗಳಲ್ಲಿ ಬಹಳಷ್ಟು ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಿಂಚು, ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಮತ್ತಷ್ಟು ಓದಿ: Karnataka Rain: ರಾಜ್ಯದ ಕರಾವಳಿ, ದಕ್ಷಿಣ, ಉತ್ತರ ಒಳನಾಡಿನಲ್ಲಿ ಸೆಪ್ಟೆಂಬರ್ 17ರವರೆಗೂ ಮಳೆ

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಎಚ್​ಎಎಲ್​ನಲ್ಲಿ 29.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 29.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.7 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us