Karnataka Rains: ಕರ್ನಾಟಕದ ಕರಾವಳಿ, ಶಿವಮೊಗ್ಗ, ಕೊಡಗು ಸೇರಿ 7 ಜಿಲ್ಲೆಗಳಲ್ಲಿ ಇಂದು ಹೆಚ್ಚು ಮಳೆ ಸಾಧ್ಯತೆ

ಇಂದು ಕರ್ನಾಟಕದ ಬಹುತೇಕ ಕಡೆಗಳಲ್ಲಿ ಭಾರಿ ಮಳೆಯಾಗಲಿದೆ. ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಇಂದು ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಮೈಸೂರು, ಮಂಡ್ಯ, ಚಾಮರಾಜನಗರ, ಯಾದಗಿರಿ, ರಾಯಚೂರು, ಕಲಬುರಗಿ, ಹಾವೇರಿ, ಧಾರವಾಡ, ಬೀದರ್, ಬೆಳಗಾವಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ತುಮಕೂರು, ರಾಮನಗರ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೊಪ್ಪಳದಲ್ಲಿ ಸಾಧಾರಣ ಮಳೆಯಾಗಲಿದೆ.

Karnataka Rains: ಕರ್ನಾಟಕದ ಕರಾವಳಿ, ಶಿವಮೊಗ್ಗ, ಕೊಡಗು ಸೇರಿ 7 ಜಿಲ್ಲೆಗಳಲ್ಲಿ ಇಂದು ಹೆಚ್ಚು ಮಳೆ ಸಾಧ್ಯತೆ
ಮಳೆ
Image Credit source: PTI

Updated on: Jul 22, 2025 | 7:24 AM

ಬೆಂಗಳೂರು, ಜುಲೈ 22: ಬೆಂಗಳೂರು ಸೇರಿ ರಾಜ್ಯದ ಬಹುತೇಕ ಕಡೆ ಮಳೆ(Rain)ಯಾಗುತ್ತಿದೆ. ಅದರಲ್ಲೂ ಕರಾವಳಿ ಹಾಗೂ ಮಲೆನಾಡಿನಲ್ಲಿ ವಿಪರೀತ ಮಳೆ ಸುರಿಯುತ್ತಿದೆ. ಇಂದು ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಮೈಸೂರು, ಮಂಡ್ಯ, ಚಾಮರಾಜನಗರ, ಯಾದಗಿರಿ, ರಾಯಚೂರು, ಕಲಬುರಗಿ, ಹಾವೇರಿ, ಧಾರವಾಡ, ಬೀದರ್, ಬೆಳಗಾವಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ತುಮಕೂರು, ರಾಮನಗರ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೊಪ್ಪಳದಲ್ಲಿ ಸಾಧಾರಣ ಮಳೆಯಾಗಲಿದೆ.

ರಾಯಚೂರು, ಥೊಂಡೇಬಾವಿ, ಹೊನ್ನಾವರ, ಗೇರುಸೊಪ್ಪ, ಕುಂದಾಪುರ, ಭಾಗಮಂಡಲ, ನಾಪೋಕ್ಲು, ಆಗುಂಬೆ, ಮಂಗಳೂರು, ಬಾದಾಮಿ, ವಿಜಯಪುರ, ಮಂಕಿ, ಶಕ್ತಿನಗರ, ಕೋಟಾ, ಕಾರವಾರ, ಮಂಗಳೂರು, ಸಿದ್ದಾಪುರ, ಗೋಕರ್ಣ, ಬಂಟವಾಳ, ಮಾಣಿ, ಕುಮಟಾ, ಸುಳ್ಯ, ಶಿರಾಲಿ, ಬೆಳ್ತಂಗಡಿ, ಉಡುಪಿ, ಮುದ್ದೇಬಿಹಾಳ, ಮಾನ್ವಿ, ರೋಣ, ಹಾವೇರಿ, ಪೊನ್ನಂಪೇಟೆ, ಕದ್ರಾ, ಯಲ್ಲಾಪುರ, ಧರ್ಮಸ್ಥಳ, ಜೋಯ್ಡಾ, ಗುರುಮಿಟ್ಕಲ್, ನರಗುಂದ, ಗೋಕಾಕ್, ಹುಕ್ಕೇರಿ, ಮುಂಡಗೋಡು, ಗುರುಮಿಟ್ಕಲ್, ಹಿಡಕಲ್, ತಿಪಟೂರು, ಪಾವಗಡ, ಕೊಪ್ಪ, ಸೇಡಬಾಳ, ರಾಯಲ್ಪಾಡು, ಕೊಪ್ಪ, ಕಮ್ಮರಡಿ, ಮಧುಗಿರಿ, ಕೋಲಾರ, ಹೊನ್ನಾಳಿ, ಶೃಂಗೇರಿ, ಹರಪನಹಳ್ಳಿ, ಪರಶುರಾಂಪುರ, ಸೋಮವಾರಪೇಟೆ, ಬೆಳ್ಳೂರು, ತ್ಯಾಗರ್ತಿ, ಎಚ್​ಡಿ ಕೋಟೆಯಲ್ಲಿ ಮಳೆಯಾಗಿದೆ.

ಬೆಂಗಳೂರಿನಲ್ಲಿ ಸೋಮವಾರ ಭಾರಿ ಮಳೆಯಾಗಿದೆ. ಇಂದು ಕೂಡ ಮೋಡಕವಿದ ವಾತಾವರಣವಿದೆ. ಎಚ್​​ಎಎಲ್​ನಲ್ಲಿ 27.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ,19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 26.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 28.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 27.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 26.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 26.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್​​ಪೋರ್ಟ್​​ನಲ್ಲಿ 27.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಕ್ತಿನಗರದಲ್ಲಿ 26.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ,22.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Rains: ಕೊಡಗು ಸೇರಿ ಕರ್ನಾಟಕದ ಈ ಜಿಲ್ಲೆಗಳಿಗೆ ರೆಡ್ ಅಲರ್ಟ್​, ಜು.24ರವರೆಗೂ ಹುಚ್ಚು ಮಳೆ

 

ಬೆಳಗಾವಿ ಏರ್​​ಪೋರ್ಟ್​​ನಲ್ಲಿ 27.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್​​ನಲ್ಲಿ 32.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಧಾರವಾಡದಲ್ಲಿ27.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 29.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕಲಬುರಗಿಯಲ್ಲಿ 33.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 23.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 30.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 35.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

 

Loading...
Unable to load recommendations.
Follow Us