ಕಾಲ್ತುಳಿತ ಪ್ರಕರಣ, ರಾಜಣ್ಣ ರಾಜೀನಾಮೆ ಗುದ್ದಾಟ ನಡುವೆ ಬರೋಬ್ಬರಿ 15 ವಿಧೇಯಕ ಮಂಡನೆ, ಯಾವುವು?
ಮುಂಗಾರು ಮಳೆ, ಚುಮು ಚುಮು ಚಳಿ, ತಣ್ಣನೆಯ ವಾತಾವರಣದಲ್ಲಿ ಕೆಲದಿನಗಳಿಂದ ತಣ್ಣಗಿದ್ದ ರಾಜ್ಯ ರಾಜಕೀಯ ಮತ್ತೆ ಕಾವೇರಿದೆ. ಮತಗಳ್ಳತನ ಹಾಗೂ ಸಚಿವ ಕೆಎನ್ ರಾಜಣ್ಣ ಅವರ ವಜಾ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ. ಈ ಸಂಬಂಧ ಮುಂಗಾರು ವಿಧಾಮಂಡಲ ಅಧಿವೇಶನದಲ್ಲಿ ಭಾರೀ ಚರ್ಚೆಯಾಗುತ್ತಿದೆ. ಈ ನಡುವೆ ಎರಡನೇ ದಿನದ ಅಧಿವೇಶದಲ್ಲಿಂದು (ಆಗಸ್ಟ್ 12) ಬರೋಬ್ಬರಿ 15 ವಿಧೇಯಕಗಳು ಮಂಡನೆಯಾಗಿವೆ.

ಬೆಂಗಳೂರು, (ಆಗಸ್ಟ್ 12): ಕರ್ನಾಟಕ ವಿಧಾನಮಂಡಲ ಮುಂಗಾರು ಅಧಿವೇಶನದ (Karnataka Assembly Session) ಎರಡನೇ ದಿನದ ಕಲಾಪ ನಡೆಯುತ್ತಿದೆ. ಸಚಿವ ಕೆಎನ್ ರಾಜಣ್ಣ (KN Rajanna) ತಲೆದಂಡ, ಆರ್ ಸಿಬಿ ವಿಜಯೋತ್ಸವದ ವೇಳೆ ಕಾಲ್ತುಳಿತ ಪ್ರಕರಣ (Bengaluru stampede Case) ಸೇರಿದಂತೆ ವಿವಿಧ ವಿಷಯಗಳನ್ನು ಮುಂದಿಟ್ಟುಕೊಂಡು ಪ್ರತಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ ಆಡಳಿತಾರೂಢ ಕಾಂಗ್ರೆಸ್ (Congress) ವಿರುದ್ಧ ಮುಗಿಬಿದ್ದಿವೆ. ಇದರ ನಡುವೆ ಇಂದು(ಆಗಸ್ಟ್ 12) ಬರೋಬ್ಬರಿ 15 ವಿಧೇಯಕಗಳು (Bills) ಮಂಡನೆಯಾಗಿವೆ. ಸಚಿವರದ ಡಾ. ಜಿ ಪರಮೇಶ್ವರ್, ದಿನೇಶ್ ಗುಂಡೂರಾವ್, ಕೃಷ್ಣ ಬೈರೇಗೌಡ, ಸಂತೋಷ್ ಲಾಡ್, ಸುಧಕಾರ್ ಹಾಗೂ ಬೋಸರಾಜ ಪರವಾಗಿ ಕಾನೂನು ಸಚಿವ ಎಚ್ ಕೆ ಪಾಟೀಲ್ (HK Patil) ವಿವಿಧ ಇಲಾಖೆಗೆ ಸಂಬಂಧಿಸಿದ 15 ವಿಧೇಯಕಗಳನ್ನ ಮಂಡನೆ ಮಾಡಿದ್ದಾರೆ.
ವಿಧಾನಸಭೆ ಅಧಿವೇಶದನ ಎರಡನೇ ದಿನವಾದ ಇಂದು ಒಂದೇ ದಿನ ಬರೋಬ್ಬರಿ 15 ವಿಧೇಯಕಗಳನ್ನು ಮಂಡಿಸಲಾಗಿದೆ. ಗೃಹ ಸಚಿವ ಪರಮೇಶ್ವರ್, ಆರೋಗ್ಯ ದಿನೇಶ್ ಗುಂಡೂರಾವ್, ಕಂದಾಯ ಸಚಿವ ಕೃಷ್ಣ ಬೈರೇಗೌಡ, ಕಾರ್ಮಿಕ ಸಚಿವ ಸಂತೋಷ್ ಲಾಡ್, ಉನ್ನತ ಶಿಕ್ಷಣ ಸಚಿವ ಸುಧಕಾರ್ ಹಾಗೂ ಬೋಸರಾಜ ಪರವಾಗಿ ಎಲ್ಲಾ 15 ವಿಧೇಯಕಗಳನ್ನ ಕಾನೂನು ಸಚಿವ ಎಚ್ ಕೆ ಪಾಟೀಲ್ ಅವರು ಮಂಡಿಸಿದರು.
ಇದನ್ನೂ ನೋಡಿ: Assembly Session Live: ಕರ್ನಾಟಕ ವಿಧಾನಸಭೆ ಅಧಿವೇಶನ, ಎರಡನೇ ದಿನದ ಕಲಾಪದ ನೇರ ಪ್ರಸಾರ
ಮಂಡನೆಯಾದ 15 ವಿಧೇಯಕಗಳಾವುವು?
- 2025ನೇ ಸಾಲಿನ ಕರ್ನಾಟಕ ಅಗ್ನಿಶಾಮಕದಳ (ತಿದ್ದುಪಡಿ) ವಿಧೇಯಕ ಮಂಡನೆ.
- 2025ನೇ ಸಾಲಿನ ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ (ವೈದ್ಯಾಧಿಕಾರಿಗಳ ಮತ್ತು ಇತರ ಸಿಬ್ಬಂದಿಯ ವರ್ಗಾವಣೆ ನಿಯಂತ್ರಣ) (ತಿದ್ದುಪಡಿ) ವಿಧೇಯಕ ಮಂಡನೆ.
- 2025ನೇ ಸಾಲಿನ ಕರ್ನಾಟಕ ವೈದ್ಯಕೀಯ ಕೋರ್ಸುಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳ ಕಡ್ಡಾಯ ಸೇವಾ (ತಿದ್ದುಪಡಿ) ವಿಧೇಯಕ ಮಂಡನೆ.
- 2025ನೇ ಸಾಲಿನ ಕರ್ನಾಟಕ ವೈದ್ಯಕೀಯ ನೋಂದಣಿ (ತಿದ್ದುಪಡಿ) ವಿಧೇಯಕ ಮಂಡನೆ.
- 2025ನೇ ಸಾಲಿನ ಬಸವ ಕಲ್ಯಾಣ ಅಭಿವೃದ್ಧಿ ಮಂಡಳಿ (ತಿದ್ದುಪಡಿ) ವಿಧೇಯಕ ಮಂಡನೆ.
- 2025ನೇ ಸಾಲಿನ ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರ (ತಿದ್ದುಪಡಿ) ವಿಧೇಯಕ ಮಂಡನೆ.
- 2025ನೇ ಸಾಲಿನ ನಾಡಪ್ರಭು ಕೆಂಪೇಗೌಡ ಪಾರಂಪರಿಕ ತಾಣದ ಅಭಿವೃದ್ಧಿ ಪ್ರಾಧಿಕಾರ (ತಿದ್ದುಪಡಿ) ವಿಧೇಯಕ ಮಂಡನೆ.
- 2025ನೇ ಸಾಲಿನ ಕಿತ್ತೂರು ಅಭಿವೃದ್ಧಿ ಪ್ರಾಧಿಕಾರ (ತಿದ್ದುಪಡಿ) ವಿಧೇಯಕ ಮಂಡನೆ.
- 2025ನೇ ಸಾಲಿನ ಕೂಡಲ ಸಂಗಮ ಅಭಿವೃದ್ಧಿ ಮಂಡಳಿ (ತಿದ್ದುಪಡಿ) ವಿಧೇಯಕ ಮಂಡನೆ.
- 2025ನೇ ಸಾಲಿನ ಬನವಾಸಿ ಅಭಿವೃದ್ಧಿ ಪ್ರಾಧಿಕಾರ (ತಿದ್ದುಪಡಿ) ವಿಧೇಯಕ ಮಂಡನೆ.
- 2025ನೇ ಸಾಲಿನ ಸರ್ವಜ್ಞ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ (ತಿದ್ದುಪಡಿ) ವಿಧೇಯಕ ಮಂಡನೆ.
- 2025ನೇ ಸಾಲಿನ ಕರ್ನಾಟಕ ರಾಜ್ಯ ವಿಶ್ವವಿದ್ಯಾನಿಲಯಗಳ (ತಿದ್ದುಪಡಿ) ವಿಧೇಯಕ ಮಂಡನೆ.
- 2025ನೇ ಸಾಲಿನ ಕರ್ನಾಟಕ ವೇದಿಕೆ ಆಧಾರಿತ ಗಿಗ್ ಕಾರ್ಮಿಕರ (ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿ) ವಿಧೇಯಕ ಮಂಡನೆ.
- 2025ನೇ ಸಾಲಿನ ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರ (ತಿದ್ದುಪಡಿ) ವಿಧೇಯಕ ಮಂಡನೆ.
- ಸಚಿವೆ ಲಕ್ಷ್ಮಿ ಹೆಬ್ಬಾಳ್ಳರ್ ಅವರಿಂದ ಒಂದು ವಿಧೇಯಕ ಮಂಡನೆ.
- 2025ನೇ ಸಾಲಿನ ಬಾಲ್ಯ ವಿವಾಹ ನಿಷೇಧ (ಕರ್ನಾಟಕ ತಿದ್ದುಪಡಿ) ವಿಧೇಯಕ ಮಂಡನೆ.




