AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rains: ಕರ್ನಾಟಕದ ಕರಾವಳಿ ಸೇರಿ ಹಲವೆಡೆ 3 ದಿನ ಧಾರಾಕಾರ ಮಳೆ, 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ಕರ್ನಾಟಕದಲ್ಲಿ ಮುಂಗಾರು ಚುರುಕುಗೊಂಡಿದೆ. ಕರಾವಳಿ ಸೇರಿ ಹಲವು ಜಿಲ್ಲೆಗಳಲ್ಲಿ ಮೂರು ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಬೀದರ್, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

Karnataka Rains: ಕರ್ನಾಟಕದ ಕರಾವಳಿ ಸೇರಿ ಹಲವೆಡೆ 3 ದಿನ ಧಾರಾಕಾರ ಮಳೆ, 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್
ಮಳೆ
ನಯನಾ ರಾಜೀವ್
|

Updated on: Jun 25, 2025 | 7:18 AM

Share

ಬೆಂಗಳೂರು, ಜೂನ್ 25: ಕರ್ನಾಟಕದ ಕರಾವಳಿ ಸೇರಿ ಹಲವೆಡೆ ಧಾರಾಕಾರ ಮಳೆ(Rain)ಯಾಗುವ ಸಾಧ್ಯತೆ ಇದ್ದು, 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಹೆಚ್ಚು ಮಳೆಯಾಗಲಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ರಾಜ್ಯಾದ್ಯಂತ ಮುಂಗಾರು ಚುರುಕುಗೊಂಡಿದೆ.

ಕೊಡಗು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಧಾರವಾಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.ಬೀದರ್, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

ಸಿದ್ದಾಪುರ, ಕ್ಯಾಸಲ್​ರಾಕ್, ಖಾನಾಪುರ, ಆಗುಂಬೆ, ಸೋಮವಾರಪೇಟೆ, ಲೋಂಡಾ, ಕದ್ರಾ, ಬನವಾಸಿ, ಕೊಟ್ಟಿಗೆಹಾರದಲ್ಲಿ ಹೆಚ್ಚು ಮಳೆಯಾಗಿದೆ.ಧರ್ಮಸ್ಥಳ, ಯಲ್ಲಾಪುರ, ಕಳಸ, ಹುಂಚದಕಟ್ಟೆ, ಶೃಂಗೇರಿ, ಕಮ್ಮರಡಿ,ಬೆಳ್ತಂಗಡಿ, ಮೂಡುಬಿದಿರೆ, ಕಾರ್ಕಳ, ಜೋಯ್ಡಾ, ಉಪ್ಪಿನಂಗಡಿ, ಕುಂದಾಪುರ, ಅಂಕೋಲಾ, ಗೇರುಸೊಪ್ಪ, ಬಂಟವಾಳ, ನಾಪೋಕ್ಲು, ಭರಮಸಾಗರ, ಮಾಣಿ, ಮುಲ್ಕಿ, ಕುಮಟಾ, ಹೊನ್ನಾಳಿ, ಪುತ್ತೂರು, ಜಯಪುರ, ತ್ಯಾಗರ್ತಿ, ವಿರಾಜಪೇಟೆ, ಅರಕಲಗೂಡು, ಪೊನ್ನಂಪೇಟೆ, ಜಗಳೂರು, ಹಳಿಯಾಳ, ಮಂಕಿ, ಕೂಡಲಸಂಗಮ, ಹುಬ್ಬಳ್ಳಿ, ಕಿತ್ತೂರು, ಚಿಕ್ಕೋಡಿಯಲ್ಲಿ ಮಳೆಯಾಗಿದೆ.

ಮತ್ತಷ್ಟು ಓದಿ: ಇಂದಿನಿಂದ ಕರ್ನಾಟಕದಲ್ಲಿ ಮುಂಗಾರು ಚುರುಕು, 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಮಂಗಳವಾರ ಅಲ್ಲಲ್ಲಿ ತುಂತುರು ಮಳೆಯಾಗಿದೆ.ಎಚ್​ಎಎಲ್​ನಲ್ಲಿ 28.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 27.8ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 28.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 27.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 29.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 29.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್​​ಪೋರ್ಟ್​​ನಲ್ಲಿ 28.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಕ್ತಿನಗರದಲ್ಲಿ 29.6ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಳಗಾವಿ ನಗರದಲ್ಲಿ 24.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್​​ನಲ್ಲಿ 31.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 29.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 31.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಧಾರವಾಡದಲ್ಲಿ 25.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 28.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 33.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 21.8ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 29.8ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ