Basavaraj Bommai: ಕೊವಿಡ್ ನಿಯಂತ್ರಿಸಲು ಹಗಲಿರುಳು ಶ್ರಮಿಸುವೆ: ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Karnataka New Chief Minister: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಹೆಸರನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಿಸಿದರು. ಗೋವಿಂದ ಕಾರಜೋಳ ಬಸವರಾಜ ಬೊಮ್ಮಾಯಿ ಹೆಸರನ್ನು ಅನುಮೋದಿಸಿದರು. ಬಸವರಾಜ ಬೊಮ್ಮಾಯಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಕಾಲಿಗೆ ಬಿದ್ದು ನಮಸ್ಕರಿಸಿದರು.

Basavaraj Bommai: ಕೊವಿಡ್ ನಿಯಂತ್ರಿಸಲು ಹಗಲಿರುಳು ಶ್ರಮಿಸುವೆ: ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಸಾಂಕೇತಿಕ ಚಿತ್ರ
Follow us
TV9 Web
| Updated By: guruganesh bhat

Updated on: Jul 27, 2021 | 8:48 PM

ಬೆಂಗಳೂರು: ನೂತನ ಸಿಎಂ ಆಗಿ ಆಯ್ಕೆ ಮಾಡಿದ್ದಕ್ಕಾಗಿ ಬಸವರಾಜ ಬೊಮ್ಮಾಯಿ (Basavaraj Bommai) ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾಗೆ ಧನ್ಯವಾದ ತಿಳಿಸಿದ್ದಾರೆ. ನನ್ನ ಹೆಸರನ್ನು ಸೂಚಿಸಿ ಬಿ.ಎಸ್‌ ಯಡಿಯೂರಪ್ಪ ಆಶೀರ್ವಾದ ಮಾಡಿದ್ದಾರೆ. ನನ್ನನ್ನು ಮುಖ್ಯಮಂತ್ರಿಯಾಗಿ ಆರಿಸಿದ (New Karnataka Chief Minister) ಪಕ್ಷದ ಎಲ್ಲಾ ಶಾಸಕರಿಗೆ ಹೃದಯಪೂರ್ವಕ ಧನ್ಯವಾದಗಳು. ಪಕ್ಷದ ನಾಯಕರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡುವೆ. ರಾಜ್ಯವನ್ನು ಉನ್ನತ ಸ್ಥಾನಕ್ಕೆ ಕೊಂಡೊಯ್ಯಲು ಶ್ರಮಿಸುವೆ. ಕೊವಿಡ್ ನಿಯಂತ್ರಿಸಲು ಹಗಲಿರುಳು ಶ್ರಮಿಸುತ್ತೇನೆ ಎಂದು ಅವರು ನೂತನ ಮುಖ್ಯಮಂತ್ರಿ (Karnataka New Chief Minister) ಆದ ನಂತರ ಸುದ್ದಿಗಾರರಿಗೆ ತಿಳಿಸಿದರು.

ಕರ್ನಾಟಕದ ಮುಖ್ಯಮಂತ್ರಿಯಾಗಿ (New Karnataka Chief Minister) ಹಾವೇರಿಯ ಶಿಗ್ಗಾಂವ್ ವಿಧಾನಸಭಾ ಕ್ಷೇತ್ರದ ಶಾಸಕ ಬಸವರಾಜ ಬೊಮ್ಮಾಯಿ (Basavaraj Bommai) ಬಿಜೆಪಿ ಶಾಸಕಾಂಗ ಸಭೆಯಲ್ಲಿ ಆಯ್ಕೆಯಾಗಿದ್ದಾರೆ. ಮಾಜಿ ಮುಖ್ಯಮಂತ್ರಿ ದಿವಂಗತ ಎಸ್.ಆರ್.ಬೊಮ್ಮಾಯಿಯವರ ಪುತ್ರನಾಗಿರುವ ಅವರು, ಜನತಾದಳದಿಂದ ಎರಡು ಬಾರಿ ವಿಧಾನ ಪರಿಷತ್ ಸದಸ್ಯರಾಗಿ ಜವಾಬ್ಧಾರಿ ನಿರ್ವಹಿಸಿದ ಅನುಭವ ಹೊಂದಿದ್ದಾರೆ. ಜತೆಗೆ 2008ರಿಂದ ಸತತ ಮೂರು ಬಾರಿ ಶಿಗ್ಗಾಂವ ಕ್ಷೇತ್ರದಿಂದ ಬಿಜೆಪಿ ಶಾಸಕರಾಗಿ ಆಯ್ಕೆಯಾಗಿದ್ದು, ಬಿ.ಎಸ್.ಯಡಿಯೂರಪ್ಪ, ಡಿ.ವಿ.ಸದಾನಂದಗೌಡ ಮತ್ತು ಜಗದೀಶ ಶೆಟ್ಟರ ಸಿಎಂ ಆಗಿದ್ದ ವೇಳೆ ಐದು ವರ್ಷ ಜಲಸಂಪನ್ಮೂಲ ಖಾತೆ ನಿರ್ವಹಣೆ ಮಾಡಿದ ಅನುಭವ ಹೊಂದಿದ್ದಾರೆ. ಅಲ್ಲದೇ, ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರ, ಶಾಸನ ರಚನಾ ಸಚಿವ ಹಾಗೂ ಹಾವೇರಿ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ಕೆಲಸ ನಿರ್ವಹಿಸಿದ ಅನುಭವಗಳನ್ನು ಬಸವರಾಜ ಬೊಮ್ಮಾಯಿ (Baaavaraj Bommai Wiki) ಹೊಂದಿದ್ದಾರೆ.

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಹೆಸರನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಿಸಿದರು. ಗೋವಿಂದ ಕಾರಜೋಳ ಬಸವರಾಜ ಬೊಮ್ಮಾಯಿ ಹೆಸರನ್ನು ಅನುಮೋದಿಸಿದರು. ಬಸವರಾಜ ಬೊಮ್ಮಾಯಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಕಾಲಿಗೆ ಬಿದ್ದು ನಮಸ್ಕರಿಸಿದರು. (Who is Basavaraj Bommai)

ಇದನ್ನೂ ಓದಿ: 

Basavaraj Bommai: ಯಡಿಯೂರಪ್ಪ ಉತ್ತರಾಧಿಕಾರಿ ಬಸವರಾಜ ಬೊಮ್ಮಾಯಿ, ಹೋರಾಟದ ಹಾದಿಯಲ್ಲಿ ಅರಳಿದ ನಾಯಕ

BS Yediyurappa: ಮುಖ್ಯಮಂತ್ರಿಯಾಗಿ ಬಿಎಸ್ ಯಡಿಯೂರಪ್ಪ ಮುಂದುವರಿಕೆ; ಸಿಎಂ ಬದಲಾವಣೆ ಚರ್ಚೆ ಅನಗತ್ಯ: ಬಸವರಾಜ ಬೊಮ್ಮಾಯಿ

(Karnataka New Chief Minister Basavaraj Bommai says will work day and night to control Covid in state)

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ