Basavaraj Bommai: ಶುಕ್ರವಾರ ದೆಹಲಿಗೆ ತೆರಳಿ ವರಿಷ್ಠರನ್ನು ಭೇಟಿಯಾಗಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

TV9 Digital Desk

| Edited By: ganapathi bhat

Updated on:Jul 28, 2021 | 6:55 PM

ಬೆಂಗಳೂರು: ಜುಲೈ 30ರಂದು, ಶುಕ್ರವಾರ ದೆಹಲಿಗೆ ತೆರಳಿ ವರಿಷ್ಠರನ್ನು ಭೇಟಿಯಾಗುತ್ತೇನೆ ಎಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಇದೇ ವೇಳೆ, ಜಗದೀಶ್ ಶೆಟ್ಟರ್ ಸಂಪುಟದಿಂದ ಹೊರಗುಳಿಯುವ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ನನಗೆ ಮಾಹಿತಿ ಇಲ್ಲ. ಅವರೊಂದಿಗೆ ಮಾತಾಡ್ತೇನೆ ಎಂದು ಹೇಳಿದ್ದಾರೆ. ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟಕ್ಕೆ ನಾನು ಸೇರಲ್ಲ ಎಂದು ಬಿಜೆಪಿ ನಾಯಕ ಹಾಗೂ ಮಾಜಿ ಸಚಿವ ಜಗದೀಶ್ ಶೆಟ್ಟರ್ ಹೇಳಿಕೆ ನೀಡಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ ಸಂಪುಟಕ್ಕೆ ನಾನು […]

Basavaraj Bommai: ಶುಕ್ರವಾರ ದೆಹಲಿಗೆ ತೆರಳಿ ವರಿಷ್ಠರನ್ನು ಭೇಟಿಯಾಗಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ (ಸಂಗ್ರಹ ಚಿತ್ರ)

ಬೆಂಗಳೂರು: ಜುಲೈ 30ರಂದು, ಶುಕ್ರವಾರ ದೆಹಲಿಗೆ ತೆರಳಿ ವರಿಷ್ಠರನ್ನು ಭೇಟಿಯಾಗುತ್ತೇನೆ ಎಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಇದೇ ವೇಳೆ, ಜಗದೀಶ್ ಶೆಟ್ಟರ್ ಸಂಪುಟದಿಂದ ಹೊರಗುಳಿಯುವ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ನನಗೆ ಮಾಹಿತಿ ಇಲ್ಲ. ಅವರೊಂದಿಗೆ ಮಾತಾಡ್ತೇನೆ ಎಂದು ಹೇಳಿದ್ದಾರೆ.

ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟಕ್ಕೆ ನಾನು ಸೇರಲ್ಲ ಎಂದು ಬಿಜೆಪಿ ನಾಯಕ ಹಾಗೂ ಮಾಜಿ ಸಚಿವ ಜಗದೀಶ್ ಶೆಟ್ಟರ್ ಹೇಳಿಕೆ ನೀಡಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ ಸಂಪುಟಕ್ಕೆ ನಾನು ಸೇರಲ್ಲ. ನಾನು ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ಆಗಿರುವುದರಿಂದ ಈ ನಿರ್ಧಾರ ತೆಗೆದುಕೊಂಡಿದ್ದೇನೆ. bಇ.ಎಸ್. ಯಡಿಯೂರಪ್ಪ ಜೊತೆ ಕೆಲಸ ಮಾಡಿರುವುದರಿಂದ ಹೀಗೆ ನಿರ್ಧಾರ ಕೈಗೊಂಡಿದ್ದೇನೆ ಎಂದು ಟಿವಿ9ಗೆ ಮಾಜಿ ಸಚಿವ ಜಗದೀಶ್ ಶೆಟ್ಟರ್ ಪ್ರತಿಕ್ರಿಯೆ ನೀಡಿದ್ದಾರೆ.

ಹಿಂದೆ ನಾನು ರಾಜ್ಯಾದ್ಯಂತ ಪಕ್ಷ ಸಂಘಟನೆ ಮಾಡಿದ್ದೇನೆ. ತಳಮಟ್ಟದಿಂದ ಮೇಲ್ಮಟ್ಟದವರೆಗೂ ಕೆಲಸ ಮಾಡಿದ್ದೇನೆ. ಮುಂದೆ ಪಕ್ಷದ ಸಾಮಾನ್ಯ ಕಾರ್ಯಕರ್ತನಾಗಿ ಕೆಲಸ ಮಾಡುತ್ತೇನೆ. ವರಿಷ್ಠರು ಜವಾಬ್ದಾರಿ ಕೊಟ್ಟರೆ ನಿರ್ವಹಿಸುತ್ತೇನೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆಡಿಯೋಗೂ ನನ್ನ ನಿರ್ಧಾರಕ್ಕೂ ಸಂಬಂಧವಿಲ್ಲ. ನೈತಿಕ ಕಾರಣದಿಂದ ನಾನು ಸಂಪುಟಕ್ಕೆ ಸೇರುವುದಿಲ್ಲ. ಇದು ನನ್ನ ವೈಯಕ್ತಿಕ ನಿರ್ಧಾರ ಎಂದು ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ. ನನ್ನ ನಿರ್ಧಾರವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಸಿಎಂ ಯಡಿಯೂರಪ್ಪನವರ ಗಮನಕ್ಕೆ ತಂದಿದ್ದೇನೆ ಎಂದೂ ಅವರು ಹೇಳಿದ್ದಾರೆ.

ಇತ್ತ, ಈ ಬಾರಿ ನನಗೆ ಸಂಪುಟದಲ್ಲಿ ಸ್ಥಾನ ನೀಡುವ ವಿಶ್ವಾಸ ಇದೆ. ನನ್ನ ಹಿರಿತನ ಬಗ್ಗೆ ಬಿ.ಎಸ್. ಯಡಿಯೂರಪ್ಪಗೆ ಹೇಳಿ ಸಚಿವ ಸ್ಥಾನ ನೀಡಲು ಕೇಳಿದ್ದೆ ಎಂದು ಬೆಂಗಳೂರಿನಲ್ಲಿ ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಶಾಸಕ ಜಿ.ಹೆಚ್​. ತಿಪ್ಪಾರೆಡ್ಡಿ ಹೇಳಿಕೆ ನೀಡಿದ್ದಾರೆ.

ಈಗಲೂ ನನಗೆ ಕೇಂದ್ರದ ನಾಯಕರು, ಪಕ್ಷದ ಮೇಲೆ ವಿಶ್ವಾಸವಿದೆ. ನನಗೆ ಅನುಕೂಲ ಮಾಡಿಕೊಡುತ್ತಾರೆಂಬ ವಿಶ್ವಾಸವಿದೆ. ಬೊಮ್ಮಾಯಿ ಸಂಪುಟದಲ್ಲಿ ಸ್ಥಾನ ನೀಡುವಂತೆ ಕೇಳಿದ್ದೇನೆ. 3 ಬಾರಿ ನಮ್ಮ ಸರ್ಕಾರದಲ್ಲಿ ಆಗಿದ್ದವರೇ ಸಚಿವರಾಗಿದ್ದಾರೆ. ಈ ಬಾರಿ ಹೊಸಬರಿಗೆ ಅವಕಾಶ ಮಾಡಿಕೊಡುವುದು ಸೂಕ್ತ. ಚಿತ್ರದುರ್ಗದವರಿಗೆ ಸಚಿವ ಸ್ಥಾನ ನೀಡುತ್ತಾರೆಂಬ ವಿಶ್ವಾಸವಿದೆ ಎಂದು ಅವರು ತಿಳಿಸಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಳೂರಿನ ಆರ್​.ಟಿ.ನಗರದ ನಿವಾಸಕ್ಕೆ ಬೆಳಗಾವಿ ಜಿಲ್ಲೆ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಭೇಟಿ ನೀಡಿದ್ದಾರೆ.

ಇದನ್ನೂ ಓದಿ: Jagadish Shettar: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟಕ್ಕೆ ನಾನು ಸೇರಲ್ಲ: ಜಗದೀಶ್ ಶೆಟ್ಟರ್

Siddaramaiah: ಗಾಂಧೀಜಿ ಮಗ ಕುಡುಕನಾಗಲಿಲ್ವ?; ಬಸವರಾಜ​ ಬೊಮ್ಮಾಯಿಗೂ ಅಪ್ಪನ ಗುಣ ಇರುತ್ತದೆ ಎನ್ನಲಾಗದು ಎಂದ ಸಿದ್ದರಾಮಯ್ಯ

(Karnataka New CM Basavaraj Bommai to meet Central BJP Leaders on July 30)

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada