ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು (ಜುಲೈ 20) ಹೊಸದಾಗಿ 1,464 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 28,86,702ಕ್ಕೆ ಏರಿಕೆ ಆಗಿದೆ. ಸೋಂಕಿತರ ಪೈಕಿ 28,24,197 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 29 ಜನರ ಸಾವು ಸಂಭವಿಸಿದೆ. ತನ್ಮೂಲಕ ಈವರೆಗೆ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 36,226 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ 26,256 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಈ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಬೆಂಗಳೂರಿನಲ್ಲಿ ಇಂದು ಒಂದೇ ದಿನ 352 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ನಗರದಲ್ಲಿ ಇಂದು ಕೊರೊನಾ ಸೋಂಕಿಗೆ 5 ಮಂದಿ ಬಲಿಯಾಗಿದ್ದಾರೆ. ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,22,807ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 11,96,953 ಜನರು ಗುಣಮುಖ ಹೊಂದಿದ್ದಾರೆ. ಬೆಂಗಳೂರಲ್ಲಿ ಕೊರೊನಾದಿಂದ ಈವರೆಗೆ 15,807 ಜನರ ಸಾವು ಸಂಭವಿಸಿದೆ. ಒಟ್ಟು 10,046 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ರಾಜ್ಯದಲ್ಲಿ ಕೊವಿಡ್ ಪಾಸಿಟಿವಿಟಿ ರೇಟ್ ಶೇಕಡಾ 1.29 ರಷ್ಟು ಇದೆ.
ಜಿಲ್ಲಾವಾರು ಕೊರೊನಾ ಸೋಂಕಿತರ ವಿವರ
ಬೆಂಗಳೂರು ನಗರ 352, ದಕ್ಷಿಣ ಕನ್ನಡ ಜಿಲ್ಲೆ 200, ಮೈಸೂರು 117, ಹಾಸನ 108, ಚಿಕ್ಕಮಗಳೂರು 81, ತುಮಕೂರು 86, ಬೆಳಗಾವಿ 75, ಉಡುಪಿ 68, ಶಿವಮೊಗ್ಗ 63, ಕೊಡಗು 56, ಉತ್ತರ ಕನ್ನಡ 53, ಮಂಡ್ಯ 37, ಕೋಲಾರ 36, ಬೆಂಗಳೂರು ಗ್ರಾಮಾಂತರ 35, ಚಾಮರಾಜನಗರ 16, ಧಾರವಾಡ 14, ದಾವಣಗೆರೆ 13, ಚಿತ್ರದುರ್ಗ 11, ಬಳ್ಳಾರಿ 8, ಚಿಕ್ಕಬಳ್ಳಾಪುರ 8, ಕಲಬುರಗಿ 8, ರಾಮನಗರ 4, ವಿಜಯಪುರ 4, ಹಾವೇರಿ 3, ರಾಯಚೂರು 3, ಬೀದರ್ ಜಿಲ್ಲೆ 2, ಬಾಗಲಕೋಟೆ, ಗದಗ, ಯಾದಗಿರಿ ಜಿಲ್ಲೆಯಲ್ಲಿ ತಲಾ 1 ಕೊರೊನಾ ಪ್ರಕರಣಗಳು ಪತ್ತೆಯಾಗಿದೆ.
ಜಿಲ್ಲಾವಾರು ಕೊರೊನಾದಿಂದ ಮೃತರ ಸಂಖ್ಯೆ
ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 29 ಜನರ ಸಾವು ಸಂಭವಿಸಿದೆ. ಬೆಂಗಳೂರಲ್ಲಿ ಕೊರೊನಾ ಸೋಂಕಿನಿಂದ 5, ದಕ್ಷಿಣ ಕನ್ನಡ ಜಿಲ್ಲೆ, ಮೈಸೂರು ಜಿಲ್ಲೆ,
ಹಾಸನ ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ 3, ಹಾವೇರಿ, ಕೋಲಾರ ಜಿಲ್ಲೆಯಲ್ಲಿ ತಲಾ 2, ಮಂಡ್ಯ, ತುಮಕೂರು ಜಿಲ್ಲೆಯಲ್ಲಿ ತಲಾ 2, ಬೆಳಗಾವಿ, ಚಿಕ್ಕಬಳ್ಳಾಪುರ, ಧಾರವಾಡ, ಕಲಬುರಗಿ, ಕೊಡಗು, ಶಿವಮೊಗ್ಗ, ಉಡುಪಿ ಜಿಲ್ಲೆಯಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 36,226 ಜನರ ಸಾವು ಸಂಭವಿಸಿದೆ.
ಇದನ್ನೂ ಓದಿ: Tokyo Olympics: ಒಲಂಪಿಕ್ಸ್ನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳ; ಜೆಕ್ ಗಣರಾಜ್ಯದ ಒಲಿಂಪಿಕ್ ತಂಡದ ಇಬ್ಬರಿಗೆ ಸೋಂಕು
Published On - 8:17 pm, Tue, 20 July 21