Karnataka Covid Update: ಕರ್ನಾಟಕದಲ್ಲಿ ಹೊಸದಾಗಿ 1,001 ಕೊರೊನಾ ಕೇಸ್ ಪತ್ತೆ; 22 ಮಂದಿ ಸಾವು

ಬೆಂಗಳೂರಿನಲ್ಲಿ ಇಂದು ಒಂದೇ ದಿನ 165 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,24,760 ಕ್ಕೆ ಏರಿಕೆಯಾಗಿದೆ. 12,24,760 ಸೋಂಕಿತರ ಪೈಕಿ 12,00,712 ಜನರು ಗುಣಮುಖರಾಗಿದ್ದಾರೆ.

Karnataka Covid Update: ಕರ್ನಾಟಕದಲ್ಲಿ ಹೊಸದಾಗಿ 1,001 ಕೊರೊನಾ ಕೇಸ್ ಪತ್ತೆ; 22 ಮಂದಿ ಸಾವು
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ganapathi bhat

Updated on:Jul 25, 2021 | 11:15 PM

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು (ಜುಲೈ 25) ಹೊಸದಾಗಿ 1,001 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 28,94,557 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 28,34,741 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 22 ಜನರ ಸಾವು ಸಂಭವಿಸಿದೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 36,374 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 23,419 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ ಇಂದು ಒಂದೇ ದಿನ 165 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,24,760 ಕ್ಕೆ ಏರಿಕೆಯಾಗಿದೆ. 12,24,760 ಸೋಂಕಿತರ ಪೈಕಿ 12,00,712 ಜನರು ಗುಣಮುಖರಾಗಿದ್ದಾರೆ. ರಾಜ್ಯ ರಾಜಧಾನಿಯಲ್ಲಿ ಇಂದು ಕೊರೊನಾ ಸೋಂಕಿಗೆ ಮೂವರು ಬಲಿಯಾಗಿದ್ದಾರೆ. ಅದರಂತೆ, ನಗರದಲ್ಲಿ ಕೊರೊನಾದಿಂದ ಈವರೆಗೆ 15,832 ಜನರ ಸಾವು ಸಂಭವಿಸಿದೆ. ಬೆಂಗಳೂರಲ್ಲಿ 8,215 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.

ಜಿಲ್ಲಾವಾರು ಕೊರೊನಾ ಪ್ರಕರಣಗಳ ವಿವರ ಬಳ್ಳಾರಿ 6, ಬೆಳಗಾವಿ 10, ಬೆಂಗಳೂರು ಗ್ರಾಮಾಂತರ 14, ಬೆಂಗಳೂರು ನಗರ 165, ಬೀದರ್ 1, ಚಾಮರಾಜನಗರ 5, ಚಿಕ್ಕಬಳ್ಳಾಪುರ 10, ಚಿಕ್ಕಮಗಳೂರು 62, ಚಿತ್ರದುರ್ಗ 15, ದಕ್ಷಿಣ ಕನ್ನಡ 115, ದಾವಣಗೆರೆ 1, ಧಾರವಾಡ 6, ಗದಗ 5, ಹಾಸನ 90, ಹಾವೇರಿ 4, ಕಲಬುರಗಿ 4, ಕೊಡಗು 63, ಕೋಲಾರ 25, ಕೊಪ್ಪಳ 2, ಮಂಡ್ಯ 35, ಮೈಸೂರು 97, ರಾಮನಗರ 7, ಶಿವಮೊಗ್ಗ 51, ತುಮಕೂರು 42, ಉಡುಪಿ 110, ಉತ್ತರ ಕನ್ನಡ 54, ವಿಜಯಪುರ 1, ಯಾದಗಿರಿ ಜಿಲ್ಲೆಯಲ್ಲಿ 1 ಕೊವಿಡ್ 19 ಪ್ರಕರಣಗಳು ದಾಖಲಾಗಿವೆ.

ಜಿಲ್ಲಾವಾರು ಕೊರೊನಾದಿಂದ ಮೃತಪಟ್ಟವರ ಸಂಖ್ಯೆ ಬೆಂಗಳೂರಿನಲ್ಲಿ ಇಂದು ಕೊರೊನಾ ಸೋಂಕಿಗೆ ಮೂವರ ಬಲಿಯಾಗಿದೆ. ಬೆಳಗಾವಿ, ಹಾಸನ, ಹಾವೇರಿ, ಕೋಲಾರ, ಮೈಸೂರು ಜಿಲ್ಲೆಯಲ್ಲಿಂದು ಕೊರೊನಾ ಸೋಂಕಿಗೆ ತಲಾ ಇಬ್ಬರು ನಿಧನ ಹೊಂದಿದ್ದಾರೆ. ಉಳಿದಂತೆ, ಬೀದರ್, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಕೊಡಗು, ಮಂಡ್ಯ, ಶಿವಮೊಗ್ಗ, ತುಮಕೂರು, ವಿಜಯಪುರ ಜಿಲ್ಲೆಯಲ್ಲಿಂದು ಕೊರೊನಾ ಸೋಂಕಿಗೆ ಒಬ್ಬರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಇದುವರೆಗೆ ಕೊರೊನಾದಿಂದ 36,374 ಜನರ ಸಾವು ಸಂಭವಿಸಿದೆ.

ಇದನ್ನೂ ಓದಿ: ಬ್ರಿಟನ್​ನಲ್ಲಿ ಕೊರೊನಾ ವೈರಾಣುವಿನ ಮತ್ತೊಂದು ರೂಪಾಂತರಿ ಪತ್ತೆ: ಈವರೆಗೆ ಗೊತ್ತಿರುವ ವಿಷಯಗಳು ಇಷ್ಟು

Explainer: ಕೊವಿಡ್ ಲಸಿಕೆ ಹಾಕಿಸಿಕೊಂಡವರಲ್ಲಿ ಕಂಡುಬರುವ ಕೊರೊನಾವೈರಸ್ ಸೋಂಕು ಲಕ್ಷಣಗಳು

(Karnataka New Corona Cases Death Toll Total Covid19 Active Coronavirus Cases)

Published On - 10:10 pm, Sun, 25 July 21

ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM