Karnataka Covid19 Update: ಬೆಂಗಳೂರನ್ನು ಮೀರಿಸಿದ ದಕ್ಷಿಣ ಕನ್ನಡ; ಜಿಲ್ಲಾವಾರು ಕೊರೊನಾ ವರದಿ ಇಲ್ಲಿದೆ

| Updated By: ganapathi bhat

Updated on: Aug 10, 2021 | 9:08 PM

ಬೆಂಗಳೂರಿನಲ್ಲಿ ಇಂದು ಒಂದೇ ದಿನ 315 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,31,097 ಕ್ಕೆ ಏರಿಕೆಯಾಗಿದೆ. 12,31,097 ಸೋಂಕಿತರ ಪೈಕಿ 12,06,980 ಜನರು ಗುಣಮುಖರಾಗಿದ್ದಾರೆ.

Karnataka Covid19 Update: ಬೆಂಗಳೂರನ್ನು ಮೀರಿಸಿದ ದಕ್ಷಿಣ ಕನ್ನಡ; ಜಿಲ್ಲಾವಾರು ಕೊರೊನಾ ವರದಿ ಇಲ್ಲಿದೆ
ಪ್ರಾತಿನಿಧಿಕ ಚಿತ್ರ
Follow us on

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು (ಆಗಸ್ಟ್ 10) ಹೊಸದಾಗಿ 1,338 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 29,21,049 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 28,61,499 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 31 ಜನರ ಸಾವು ಸಂಭವಿಸಿದೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 36,848 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 22,676 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ ಇಂದು ಒಂದೇ ದಿನ 315 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,31,097 ಕ್ಕೆ ಏರಿಕೆಯಾಗಿದೆ. 12,31,097 ಸೋಂಕಿತರ ಪೈಕಿ 12,06,980 ಜನರು ಗುಣಮುಖರಾಗಿದ್ದಾರೆ. ರಾಜ್ಯ ರಾಜಧಾನಿಯಲ್ಲಿ ಇಂದು ಕೊರೊನಾ ಸೋಂಕಿಗೆ 3 ಮಂದಿ ಬಲಿಯಾಗಿದ್ದಾರೆ. ಅದರಂತೆ, ನಗರದಲ್ಲಿ ಕೊರೊನಾದಿಂದ ಈವರೆಗೆ 15,918 ಜನರ ಸಾವು ಸಂಭವಿಸಿದೆ. ಬೆಂಗಳೂರಲ್ಲಿ 8,198 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.

ಜಿಲ್ಲಾವಾರು ಕೊರೊನಾ ಪ್ರಕರಣಗಳ ವಿವರ
ಬಾಗಲಕೋಟೆ 1, ಬಳ್ಳಾರಿ 3, ಬೆಳಗಾವಿ 21, ಬೆಂಗಳೂರು ಗ್ರಾಮಾಂತರ 11, ಬೆಂಗಳೂರು ನಗರ 315, ಬೀದರ್ 5, ಚಾಮರಾಜನಗರ 18, ಚಿಕ್ಕಬಳ್ಳಾಪುರ 6, ಚಿಕ್ಕಮಗಳೂರು 93, ಚಿತ್ರದುರ್ಗ 12, ದಕ್ಷಿಣ ಕನ್ನಡ 378, ದಾವಣಗೆರೆ 7, ಧಾರವಾಡ 16, ಗದಗ 0, ಹಾಸನ 47, ಹಾವೇರಿ 5, ಕಲಬುರಗಿ 5, ಕೊಡಗು 50, ಕೋಲಾರ 16, ಕೊಪ್ಪಳ 3, ಮಂಡ್ಯ 26, ಮೈಸೂರು 71, ರಾಯಚೂರು 1, ರಾಮನಗರ 6, ಶಿವಮೊಗ್ಗ 48, ತುಮಕೂರು 18, ಉಡುಪಿ 92, ಉತ್ತರ ಕನ್ನಡ 61, ವಿಜಯಪುರ 3, ಯಾದಗಿರಿ ಜಿಲ್ಲೆಯಲ್ಲಿ 0 ಕೊವಿಡ್ 19 ಪ್ರಕರಣಗಳು ದಾಖಲಾಗಿವೆ.

ಜಿಲ್ಲಾವಾರು ಕೊರೊನಾದಿಂದ ಮೃತಪಟ್ಟವರ ಸಂಖ್ಯೆ
ದಕ್ಷಿಣ ಕನ್ನಡದಲ್ಲಿ ಇಂದು ಕೊರೊನಾ ಸೋಂಕಿಗೆ 8 ಮಂದಿ ಬಲಿಯಾಗಿದ್ದಾರೆ. ಉತ್ತರ ಕನ್ನಡದಲ್ಲಿ 4 ಮಂದಿ ಸಾವನ್ನಪ್ಪಿದ್ದಾರೆ. ಬೆಂಗಳೂರು ನಗರ, ಹಾಸನದಲ್ಲಿ ತಲಾ 3 ಮಂದಿ ಕೊವಿಡ್​19ರಿಂದ ಮೃತಪಟ್ಟಿದ್ದಾರೆ. ಕೋಲಾರ, ಮೈಸೂರು ಜಿಲ್ಲೆಯಲ್ಲಿ ತಲಾ 2, ಬೆಳಗಾವಿ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ಧಾರವಾಡ, ಕೊಡಗು, ಕೊಪ್ಪಳ, ಮಂಡ್ಯ, ತುಮಕೂರು ಹಾಗೂ ಉಡುಪಿಯಲ್ಲಿ ತಲಾ 1 ಕೊರೊನಾ ಮರಣಗಳು ವರದಿಯಾಗಿವೆ. ರಾಜ್ಯದಲ್ಲಿ ಇದುವರೆಗೆ ಕೊರೊನಾದಿಂದ 36,848 ಜನರ ಸಾವು ಸಂಭವಿಸಿದೆ.

ಇದನ್ನೂ ಓದಿ: ಕೊರೊನಾ ಆತಂಕ: ಬೆಂಗಳೂರಿನ ಎಲ್ಲಾ ಕ್ಷೇತ್ರದಲ್ಲೂ ಮಕ್ಕಳ ಆಸ್ಪತ್ರೆ ನಿರ್ಮಾಣಕ್ಕೆ ನಿರ್ಧಾರ: ಆರ್. ಅಶೋಕ್

Coronavirus cases in India ದೇಶದಲ್ಲಿ ಕೊವಿಡ್ ಪ್ರಕರಣಗಳ ಸಂಖ್ಯೆ ಇಳಿಮುಖ; 28204 ಹೊಸ ಪ್ರಕರಣ ಪತ್ತೆ, 373 ಸಾವು

(Karnataka New Corona Cases Death Toll Total Covid19 Active Coronavirus Cases on August 10)