AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 1,826 ಜನರಿಗೆ ಕೊರೊನಾ ದೃಢ; 33 ಮಂದಿ ಸಾವು

ಬೆಂಗಳೂರಿನಲ್ಲಿ ಇಂದು ಒಂದೇ ದಿನ 377 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,31,474 ಕ್ಕೆ ಏರಿಕೆಯಾಗಿದೆ. 12,31,474 ಸೋಂಕಿತರ ಪೈಕಿ 12,07,260 ಜನರು ಗುಣಮುಖರಾಗಿದ್ದಾರೆ.

Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 1,826 ಜನರಿಗೆ ಕೊರೊನಾ ದೃಢ; 33 ಮಂದಿ ಸಾವು
ಪ್ರಾತಿನಿಧಿಕ ಚಿತ್ರ
TV9 Web
| Updated By: ganapathi bhat|

Updated on:Aug 11, 2021 | 7:53 PM

Share

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು (ಆಗಸ್ಟ್ 11) ಹೊಸದಾಗಿ 1,826 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 29,22,875 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 28,63,117 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 33 ಜನರ ಸಾವು ಸಂಭವಿಸಿದೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 36,881 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 22,851 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ ಇಂದು ಒಂದೇ ದಿನ 377 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,31,474 ಕ್ಕೆ ಏರಿಕೆಯಾಗಿದೆ. 12,31,474 ಸೋಂಕಿತರ ಪೈಕಿ 12,07,260 ಜನರು ಗುಣಮುಖರಾಗಿದ್ದಾರೆ. ರಾಜ್ಯ ರಾಜಧಾನಿಯಲ್ಲಿ ಇಂದು ಕೊರೊನಾ ಸೋಂಕಿಗೆ 5 ಮಂದಿ ಬಲಿಯಾಗಿದ್ದಾರೆ. ಅದರಂತೆ, ನಗರದಲ್ಲಿ ಕೊರೊನಾದಿಂದ ಈವರೆಗೆ 15,923 ಜನರ ಸಾವು ಸಂಭವಿಸಿದೆ. ಬೆಂಗಳೂರಲ್ಲಿ 8,290 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.

ಜಿಲ್ಲಾವಾರು ಕೊರೊನಾ ಪ್ರಕರಣಗಳ ವಿವರ ಬಾಗಲಕೋಟೆ 3, ಬಳ್ಳಾರಿ 13, ಬೆಳಗಾವಿ 47, ಬೆಂಗಳೂರು ಗ್ರಾಮಾಂತರ 26, ಬೆಂಗಳೂರು ನಗರ 377, ಬೀದರ್ 0, ಚಾಮರಾಜನಗರ 15, ಚಿಕ್ಕಬಳ್ಳಾಪುರ 7, ಚಿಕ್ಕಮಗಳೂರು 65, ಚಿತ್ರದುರ್ಗ 16, ದಕ್ಷಿಣ ಕನ್ನಡ 422, ದಾವಣಗೆರೆ 13, ಧಾರವಾಡ 17, ಗದಗ 0, ಹಾಸನ 175, ಹಾವೇರಿ 5, ಕಲಬುರಗಿ 4, ಕೊಡಗು 71, ಕೋಲಾರ 36, ಕೊಪ್ಪಳ 4, ಮಂಡ್ಯ 35, ಮೈಸೂರು 118, ರಾಯಚೂರು 2, ರಾಮನಗರ 6, ಶಿವಮೊಗ್ಗ 47, ತುಮಕೂರು 88, ಉಡುಪಿ 130, ಉತ್ತರ ಕನ್ನಡ 79, ವಿಜಯಪುರ 2, ಯಾದಗಿರಿ ಜಿಲ್ಲೆಯಲ್ಲಿ 3 ಕೊವಿಡ್ 19 ಪ್ರಕರಣಗಳು ದಾಖಲಾಗಿವೆ.

ಜಿಲ್ಲಾವಾರು ಕೊರೊನಾದಿಂದ ಮೃತಪಟ್ಟವರ ಸಂಖ್ಯೆ ಬೆಂಗಳೂರು ನಗರ ಹಾಗೂ ದಕ್ಷಿಣ ಕನ್ನಡದಲ್ಲಿ ಇಂದು ಕೊರೊನಾ ಸೋಂಕಿಗೆ 5 ಮಂದಿ ಬಲಿಯಾಗಿದ್ದಾರೆ. ಬೆಳಗಾವಿ, ಹಾಸನ, ಕೋಲಾರ, ಮೈಸೂರು, ಜಿಲ್ಲೆಯಲ್ಲಿ ತಲಾ 3 ಮಂದಿ ಕೊವಿಡ್​19 ನಿಂದ ಮೃತಪಟ್ಟಿದ್ದಾರೆ. ಚಿತ್ರದುರ್ಗ, ಕೊಡಗು, ಮಂಡ್ಯ ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ತಲಾ 2, ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ ಹಾಗೂ ಉಡುಪಿಯಲ್ಲಿ ತಲಾ 1 ಕೊರೊನಾ ಮರಣಗಳು ವರದಿಯಾಗಿವೆ. ರಾಜ್ಯದಲ್ಲಿ ಇದುವರೆಗೆ ಕೊರೊನಾದಿಂದ 36,881 ಜನರ ಸಾವು ಸಂಭವಿಸಿದೆ.

ಇದನ್ನೂ ಓದಿ: Wedding Loan: ಕೊರೊನಾ ಎರಡನೇ ಅಲೆಯ ವೇಳೆ ಮದುವೆ ಉದ್ದೇಶಕ್ಕೆ ಸಾಲ ಪಡೆದವರು ಹೆಚ್ಚು

Bengaluru Coronavirus: ಬೆಂಗಳೂರಿನಲ್ಲಿ ಐದೇ ದಿನದಲ್ಲಿ 242 ಮಕ್ಕಳಿಗೆ ಕೊರೊನಾ; ಹೆಚ್ಚಾಯ್ತು 3ನೇ ಅಲೆಯ ಭೀತಿ

(Karnataka New Corona Cases Death Toll Total Covid19 Active Coronavirus Cases on August 11)

Published On - 7:47 pm, Wed, 11 August 21

ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?