Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 1,065 ಜನರಿಗೆ ಕೊರೊನಾ ದೃಢ; 28 ಮಂದಿ ಸಾವು
ಬೆಂಗಳೂರಿನಲ್ಲಿ ಇಂದು ಒಂದೇ ದಿನ 270 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,33,172 ಕ್ಕೆ ಏರಿಕೆಯಾಗಿದೆ. 12,33,172 ಸೋಂಕಿತರ ಪೈಕಿ 12,09,176 ಜನರು ಗುಣಮುಖರಾಗಿದ್ದಾರೆ.
ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು (ಆಗಸ್ಟ್ 16) ಹೊಸದಾಗಿ 1,065 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 29,30,529 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 28,71,448 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 28 ಜನರ ಸಾವು ಸಂಭವಿಸಿದೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 37,007 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 22,048 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.
ಬೆಂಗಳೂರಿನಲ್ಲಿ ಇಂದು ಒಂದೇ ದಿನ 270 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,33,172 ಕ್ಕೆ ಏರಿಕೆಯಾಗಿದೆ. 12,33,172 ಸೋಂಕಿತರ ಪೈಕಿ 12,09,176 ಜನರು ಗುಣಮುಖರಾಗಿದ್ದಾರೆ. ರಾಜ್ಯ ರಾಜಧಾನಿಯಲ್ಲಿ ಇಂದು ಕೊರೊನಾ ಸೋಂಕಿಗೆ 4 ಮಂದಿ ಬಲಿಯಾಗಿದ್ದಾರೆ. ಅದರಂತೆ, ನಗರದಲ್ಲಿ ಕೊರೊನಾದಿಂದ ಈವರೆಗೆ 15,941 ಜನರ ಸಾವು ಸಂಭವಿಸಿದೆ. ಬೆಂಗಳೂರಲ್ಲಿ 8,054 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.
ಜಿಲ್ಲಾವಾರು ಕೊರೊನಾ ಪ್ರಕರಣಗಳ ವಿವರ ಬಾಗಲಕೋಟೆ 1, ಬಳ್ಳಾರಿ 3, ಬೆಳಗಾವಿ 11, ಬೆಂಗಳೂರು ಗ್ರಾಮಾಂತರ 10, ಬೆಂಗಳೂರು ನಗರ 270, ಬೀದರ್ 2, ಚಾಮರಾಜನಗರ 11, ಚಿಕ್ಕಬಳ್ಳಾಪುರ 3, ಚಿಕ್ಕಮಗಳೂರು 22, ಚಿತ್ರದುರ್ಗ 11, ದಕ್ಷಿಣ ಕನ್ನಡ 284, ದಾವಣಗೆರೆ 5, ಧಾರವಾಡ 7, ಗದಗ 0, ಹಾಸನ 54, ಹಾವೇರಿ 1, ಕಲಬುರಗಿ 6, ಕೊಡಗು 34, ಕೋಲಾರ 21, ಕೊಪ್ಪಳ 0, ಮಂಡ್ಯ 18, ಮೈಸೂರು 63, ರಾಯಚೂರು 0, ರಾಮನಗರ 4, ಶಿವಮೊಗ್ಗ 45, ತುಮಕೂರು 31, ಉಡುಪಿ 107, ಉತ್ತರ ಕನ್ನಡ 38, ವಿಜಯಪುರ 2, ಯಾದಗಿರಿ ಜಿಲ್ಲೆಯಲ್ಲಿ 1 ಕೊವಿಡ್ 19 ಪ್ರಕರಣಗಳು ದಾಖಲಾಗಿವೆ.
ಇಂದಿನ 16/08/2021 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/ZkJFlD2oKN @CMofKarnataka @BSBommai @mla_sudhakar @BBMPCOMM @mysurucitycorp @mangalurucorp @WFRising @DDChandanaNews @AIRBENGALURU1 @KarnatakaVarthe @PIBBengaluru pic.twitter.com/zQqk136a7O
— K’taka Health Dept (@DHFWKA) August 16, 2021
ಕೊರೊನಾದಿಂದ ಮೃತಪಟ್ಟವರ ವಿವರ ಬೆಂಗಳೂರು ನಗರ ಜಿಲ್ಲೆಯಲ್ಲಿ ಕೊರೊನಾದಿಂದ 4 ಮಂದಿ ಮೃತಪಟ್ಟಿದ್ದಾರೆ. ದಕ್ಷಿಣ ಕನ್ನಡ 5, ಮೈಸೂರು ಜಿಲ್ಲೆಯಲ್ಲಿ 4 ಮಂದಿ ಸಾವನ್ನಪ್ಪಿದ್ದಾರೆ. ಹಾಸನ ಹಾಗೂ ಕೊಡಗು ಜಿಲ್ಲೆಯಲ್ಲಿ 3 ಕೊವಿಡ್ ಮರಣಗಳು ವರದಿಯಾಗಿದೆ. ಚಿತ್ರದುರ್ಗ, ಕೋಲಾರ, ಉತ್ತರ ಕನ್ನಡ ಜಿಲ್ಲೆಯಲ್ಲಿ ತಲಾ 2 ಕೊವಿಡ್ ಮರಣ ಸಂಭವಿಸಿದೆ. ಚಿಕ್ಕಮಗಳೂರು, ಮಂಡ್ಯ, ವಿಜಯಪುರ ಜಿಲ್ಲೆಯಲ್ಲಿ ತಲಾ 1 ಸಾವು ಸಂಭವಿಸಿದೆ.
ಇದನ್ನೂ ಓದಿ: Corona 3rd Wave: ಕೊರೊನಾ 3ನೇ ಅಲೆಯ ಆತಂಕ, ಆಗಸ್ಟ್ 18ರಿಂದ ಬೆಂಗಳೂರಿನಲ್ಲಿ ಹೊಸ ರೂಲ್ಸ್ ಸಾಧ್ಯತೆ
Viral Video: ಕೊವಿಡ್ ಲಸಿಕೆ ಪಡೆಯಲು ವ್ಯಕ್ತಿಯ ಸಕತ್ ಪ್ಲಾನ್! ವಿಡಿಯೋ ನೋಡಿದ್ರೆ ನೀವೂ ನಗ್ತೀರಾ
(Karnataka New Corona Cases Death Toll Total Covid19 Active Coronavirus Cases on August 16)