Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 1,298 ಜನರಿಗೆ ಕೊರೊನಾ ದೃಢ; 32 ಮಂದಿ ಸಾವು

ಬೆಂಗಳೂರಿನಲ್ಲಿ ಇಂದು ಒಂದೇ ದಿನ 340 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,33,512 ಕ್ಕೆ ಏರಿಕೆಯಾಗಿದೆ. 12,33,512 ಸೋಂಕಿತರ ಪೈಕಿ 12,09,647 ಜನರು ಗುಣಮುಖರಾಗಿದ್ದಾರೆ.

Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 1,298 ಜನರಿಗೆ ಕೊರೊನಾ ದೃಢ; 32 ಮಂದಿ ಸಾವು
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ganapathi bhat

Updated on: Aug 17, 2021 | 7:42 PM

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು (ಆಗಸ್ಟ್ 17) ಹೊಸದಾಗಿ 1,298 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 29,31,827 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 28,73,281 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 32 ಜನರ ಸಾವು ಸಂಭವಿಸಿದೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 37,039 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 21,481 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ ಇಂದು ಒಂದೇ ದಿನ 340 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,33,512 ಕ್ಕೆ ಏರಿಕೆಯಾಗಿದೆ. 12,33,512 ಸೋಂಕಿತರ ಪೈಕಿ 12,09,647 ಜನರು ಗುಣಮುಖರಾಗಿದ್ದಾರೆ. ರಾಜ್ಯ ರಾಜಧಾನಿಯಲ್ಲಿ ಇಂದು ಕೊರೊನಾ ಸೋಂಕಿಗೆ 10 ಮಂದಿ ಬಲಿಯಾಗಿದ್ದಾರೆ. ಅದರಂತೆ, ನಗರದಲ್ಲಿ ಕೊರೊನಾದಿಂದ ಈವರೆಗೆ 15,951 ಜನರ ಸಾವು ಸಂಭವಿಸಿದೆ. ಬೆಂಗಳೂರಲ್ಲಿ 7,913 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.

ಜಿಲ್ಲಾವಾರು ಕೊರೊನಾ ಪ್ರಕರಣಗಳ ವಿವರ ಬಾಗಲಕೋಟೆ 0, ಬಳ್ಳಾರಿ 5, ಬೆಳಗಾವಿ 27, ಬೆಂಗಳೂರು ಗ್ರಾಮಾಂತರ 30, ಬೆಂಗಳೂರು ನಗರ 340, ಬೀದರ್ 0, ಚಾಮರಾಜನಗರ 7, ಚಿಕ್ಕಬಳ್ಳಾಪುರ 2, ಚಿಕ್ಕಮಗಳೂರು 59, ಚಿತ್ರದುರ್ಗ 7, ದಕ್ಷಿಣ ಕನ್ನಡ 288, ದಾವಣಗೆರೆ 14, ಧಾರವಾಡ 5, ಗದಗ 1, ಹಾಸನ 66, ಹಾವೇರಿ 1, ಕಲಬುರಗಿ 4, ಕೊಡಗು 37, ಕೋಲಾರ 17, ಕೊಪ್ಪಳ 1, ಮಂಡ್ಯ 18, ಮೈಸೂರು 88, ರಾಯಚೂರು 0, ರಾಮನಗರ 3, ಶಿವಮೊಗ್ಗ 51, ತುಮಕೂರು 52, ಉಡುಪಿ 122, ಉತ್ತರ ಕನ್ನಡ 48, ವಿಜಯಪುರ 2, ಯಾದಗಿರಿ ಜಿಲ್ಲೆಯಲ್ಲಿ 3 ಕೊವಿಡ್ 19 ಪ್ರಕರಣಗಳು ದಾಖಲಾಗಿವೆ.

ಕೊರೊನಾದಿಂದ ಮೃತಪಟ್ಟವರ ವಿವರ ಬೆಂಗಳೂರು ನಗರ ಜಿಲ್ಲೆಯಲ್ಲಿ ಕೊರೊನಾದಿಂದ 10 ಮಂದಿ ಮೃತಪಟ್ಟಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 5 ಮಂದಿ ಸಾವನ್ನಪ್ಪಿದ್ದಾರೆ. ಹಾಸನ, ಕೊಡಗು, ಕೋಲಾರ, ಮೈಸೂರು, ಶಿವಮೊಗ್ಗ ಜಿಲ್ಲೆಯಲ್ಲಿ 2 ಕೊವಿಡ್ ಮರಣಗಳು ವರದಿಯಾಗಿದೆ. ಬಳ್ಳಾರಿ, ಬೆಳಗಾವಿ, ದಾವಣಗೆರೆ, ಮಂಡ್ಯ, ತುಮಕೂರು, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ತಲಾ 1 ಕೊವಿಡ್ ಮರಣ ಸಂಭವಿಸಿದೆ.

ಇದನ್ನೂ ಓದಿ: ಕೊವಿಡ್ ಟೆಸ್ಟ್ ಶೇಕಡಾ 50ರಷ್ಟು ಹೆಚ್ಚಿಸುತ್ತೇವೆ; ಮಕ್ಕಳಿಗೂ ಕೊರೊನಾ ಪರೀಕ್ಷೆ: ಬಿಬಿಎಂಪಿ ಆಯುಕ್ತ ಗೌರವ್ ಗುಪ್ತಾ

ದೇಶದಲ್ಲಿ 154 ದಿನಗಳಲ್ಲೇ ಅತಿ ಕಡಿಮೆ ಕೊರೊನಾ ಕೇಸ್​ಗಳು ದಾಖಲು; ಚೇತರಿಕೆ ಪ್ರಮಾಣದಲ್ಲೂ ಏರಿಕೆ

(Karnataka New Corona Cases Death Toll Total Covid19 Active Coronavirus Cases on August 17)