Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 1,350 ಜನರಿಗೆ ಕೊರೊನಾ ದೃಢ; 18 ಮಂದಿ ಸಾವು
ಬೆಂಗಳೂರಿನಲ್ಲಿ ಇಂದು ಒಂದೇ ದಿನ 260 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,34,769 ಕ್ಕೆ ಏರಿಕೆಯಾಗಿದೆ. 12,34,769 ಸೋಂಕಿತರ ಪೈಕಿ 12,11,014 ಜನರು ಗುಣಮುಖರಾಗಿದ್ದಾರೆ.
ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು (ಆಗಸ್ಟ್ 21) ಹೊಸದಾಗಿ 1,350 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 29,37,427 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 28,79,433 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 18 ಜನರ ಸಾವು ಸಂಭವಿಸಿದೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 37,123 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 20,845 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.
ಬೆಂಗಳೂರಿನಲ್ಲಿ ಇಂದು ಒಂದೇ ದಿನ 260 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,34,769 ಕ್ಕೆ ಏರಿಕೆಯಾಗಿದೆ. 12,34,769 ಸೋಂಕಿತರ ಪೈಕಿ 12,11,014 ಜನರು ಗುಣಮುಖರಾಗಿದ್ದಾರೆ. ರಾಜ್ಯ ರಾಜಧಾನಿಯಲ್ಲಿ ಇಂದು ಕೊರೊನಾ ಸೋಂಕಿಗೆ ಒಬ್ಬರು ಬಲಿಯಾಗಿದ್ದಾರೆ. ಅದರಂತೆ, ನಗರದಲ್ಲಿ ಕೊರೊನಾದಿಂದ ಈವರೆಗೆ 15,957 ಜನರ ಸಾವು ಸಂಭವಿಸಿದೆ. ಬೆಂಗಳೂರಲ್ಲಿ 7,797 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.
ಇಂದಿನ 21/08/2021 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/BPxH75fXLB @CMofKarnataka @BSBommai @mla_sudhakar @BBMPCOMM @mysurucitycorp @mangalurucorp @WFRising @DDChandanaNews @AIRBENGALURU1 @KarnatakaVarthe @PIBBengaluru pic.twitter.com/ReEcB1Lxr6
— K’taka Health Dept (@DHFWKA) August 21, 2021
ಜಿಲ್ಲಾವಾರು ಕೊರೊನಾ ಪ್ರಕರಣಗಳ ವಿವರ ಬಾಗಲಕೋಟೆ 1, ಬಳ್ಳಾರಿ 2, ಬೆಳಗಾವಿ 43, ಬೆಂಗಳೂರು ಗ್ರಾಮಾಂತರ 5, ಬೆಂಗಳೂರು ನಗರ 260, ಬೀದರ್ 1, ಚಾಮರಾಜನಗರ 6, ಚಿಕ್ಕಬಳ್ಳಾಪುರ 2, ಚಿಕ್ಕಮಗಳೂರು 17, ಚಿತ್ರದುರ್ಗ 16, ದಕ್ಷಿಣ ಕನ್ನಡ 320, ದಾವಣಗೆರೆ 15, ಧಾರವಾಡ 5, ಗದಗ 2, ಹಾಸನ 101, ಹಾವೇರಿ 0, ಕಲಬುರಗಿ 2, ಕೊಡಗು 63, ಕೋಲಾರ 17, ಕೊಪ್ಪಳ 0, ಮಂಡ್ಯ 26, ಮೈಸೂರು 102, ರಾಯಚೂರು 0, ರಾಮನಗರ 3, ಶಿವಮೊಗ್ಗ 50, ತುಮಕೂರು 68, ಉಡುಪಿ 177, ಉತ್ತರ ಕನ್ನಡ 40, ವಿಜಯಪುರ 6, ಯಾದಗಿರಿ ಜಿಲ್ಲೆಯಲ್ಲಿ 0 ಕೊವಿಡ್ 19 ಪ್ರಕರಣಗಳು ದಾಖಲಾಗಿವೆ.
ಕೊರೊನಾದಿಂದ ಮೃತಪಟ್ಟವರ ವಿವರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 4 ಮಂದಿ ಸಾವನ್ನಪ್ಪಿದ್ದಾರೆ. ಹಾಸನ, ಕೋಲಾರ, ಶಿವಮೊಗ್ಗ ಜಿಲ್ಲೆಯಲ್ಲಿ 2 ಕೊವಿಡ್ ಮರಣಗಳು ವರದಿಯಾಗಿದೆ. ಬಳ್ಳಾರಿ, ಬೆಳಗಾವಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ದಾವಣಗೆರೆ, ಹಾವೇರಿ, ಮೈಸೂರು, ರಾಮನಗರ ಜಿಲ್ಲೆಯಲ್ಲಿ ತಲಾ 1 ಕೊವಿಡ್ ಮರಣ ಸಂಭವಿಸಿದೆ.
ಇದನ್ನೂ ಓದಿ: ಉಡುಪಿಯಲ್ಲಿ ಕೊರೊನಾ ಇಳಿಕೆ ಆಗಿಲ್ಲ; ಸೋಮವಾರದಿಂದ ಶಾಲೆ ತೆರೆಯುವುದಿಲ್ಲ: ಸಚಿವ ಸುನಿಲ್ ಕುಮಾರ್
(Karnataka New Corona Cases Death Toll Total Covid19 Active Coronavirus Cases on August 21)
Published On - 7:35 pm, Sat, 21 August 21