Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 1,151 ಜನರಿಗೆ ಕೊರೊನಾ ದೃಢ; 10 ಮಂದಿ ಸಾವು

ಬೆಂಗಳೂರಿನಲ್ಲಿ ಇಂದು ಒಂದೇ ದಿನ 270 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,35,306 ಕ್ಕೆ ಏರಿಕೆಯಾಗಿದೆ. 12,35,306 ಸೋಂಕಿತರ ಪೈಕಿ 12,11,677 ಜನರು ಗುಣಮುಖರಾಗಿದ್ದಾರೆ.

Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 1,151 ಜನರಿಗೆ ಕೊರೊನಾ ದೃಢ; 10 ಮಂದಿ ಸಾವು
ಸಾಂದರ್ಭಿಕ ಚಿತ್ರ
Follow us
TV9 Web
| Updated By: ganapathi bhat

Updated on:Aug 23, 2021 | 7:10 PM

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು (ಆಗಸ್ಟ್ 23) ಹೊಸದಾಗಿ 1,151 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 29,39,767 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 28,82,331 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 10 ಜನರ ಸಾವು ಸಂಭವಿಸಿದೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 37,155 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 20,255 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ ಇಂದು ಒಂದೇ ದಿನ 270 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,35,306 ಕ್ಕೆ ಏರಿಕೆಯಾಗಿದೆ. 12,35,306 ಸೋಂಕಿತರ ಪೈಕಿ 12,11,677 ಜನರು ಗುಣಮುಖರಾಗಿದ್ದಾರೆ. ರಾಜ್ಯ ರಾಜಧಾನಿಯಲ್ಲಿ ಇಂದು ಕೊರೊನಾ ಸೋಂಕಿನಿಂದ ಯಾವುದೇ ಸಾವು ಸಂಭವಿಸಿಲ್ಲ. ಅದರಂತೆ, ನಗರದಲ್ಲಿ ಕೊರೊನಾದಿಂದ ಈವರೆಗೆ 15,959 ಜನರ ಸಾವು ಸಂಭವಿಸಿದೆ. ಬೆಂಗಳೂರಲ್ಲಿ 7,669 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.

ಬೆಂಗಳೂರಿನಲ್ಲಿ 2ನೇ ಅಲೆಯಲ್ಲಿ ಮೊದಲ ಬಾರಿಗೆ ಮರಣ ದಾಖಲಾಗಿಲ್ಲ ಕೊರೊನಾ ಎರಡನೇ ಅಲೆಯಲ್ಲಿ ಇಂದು ಮೊದಲ ಬಾರಿಗೆ ಬೆಂಗಳೂರಿನಲ್ಲಿ ಸಾವು ದಾಖಲಾಗಿಲ್ಲ. ಕೊರೊನಾದಿಂದ ನಗರದಲ್ಲಿ ಯಾರೂ ಸಾವನ್ನಪ್ಪಿಲ್ಲ.  ರಾಜ್ಯದಲ್ಲಿ ಒಟ್ಟು 1,06,364 ಕೊರೊನಾ ಟೆಸ್ಟ್ ಮಾಡಲಾಗಿದೆ. ಕರ್ನಾಟಕದ ಕೊರೊನಾ ಪಾಸಿಟಿವಿಟಿ ದರ ಶೇಕಡಾ 1.08 ಇದೆ. ಕೊರೊನಾದಿಂದ ಮೃತಪಟ್ಟವರ ಪ್ರಮಾಣ ಶೇಕಡಾ 0.86 ಇದೆ.

ಜಿಲ್ಲಾವಾರು ಕೊರೊನಾ ಪ್ರಕರಣಗಳ ವಿವರ ಬಾಗಲಕೋಟೆ 0, ಬಳ್ಳಾರಿ 4, ಬೆಳಗಾವಿ 12, ಬೆಂಗಳೂರು ಗ್ರಾಮಾಂತರ 10, ಬೆಂಗಳೂರು ನಗರ 270, ಬೀದರ್ 0, ಚಾಮರಾಜನಗರ 5, ಚಿಕ್ಕಬಳ್ಳಾಪುರ 4, ಚಿಕ್ಕಮಗಳೂರು 42, ಚಿತ್ರದುರ್ಗ 18, ದಕ್ಷಿಣ ಕನ್ನಡ 236, ದಾವಣಗೆರೆ 1, ಧಾರವಾಡ 0, ಗದಗ 3, ಹಾಸನ 115, ಹಾವೇರಿ 1, ಕಲಬುರಗಿ 17, ಕೊಡಗು 54, ಕೋಲಾರ 7, ಕೊಪ್ಪಳ 5, ಮಂಡ್ಯ 32, ಮೈಸೂರು 76, ರಾಯಚೂರು 0, ರಾಮನಗರ 1, ಶಿವಮೊಗ್ಗ 8, ತುಮಕೂರು 44, ಉಡುಪಿ 137, ಉತ್ತರ ಕನ್ನಡ 42, ವಿಜಯಪುರ 2, ಯಾದಗಿರಿ ಜಿಲ್ಲೆಯಲ್ಲಿ 5 ಕೊವಿಡ್ 19 ಪ್ರಕರಣಗಳು ದಾಖಲಾಗಿವೆ.

ಕೊರೊನಾದಿಂದ ಮೃತಪಟ್ಟವರ ವಿವರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 3 ಮಂದಿ ಸಾವನ್ನಪ್ಪಿದ್ದಾರೆ. ಹಾಸನ ಜಿಲ್ಲೆಯಲ್ಲಿ 2 ಕೊವಿಡ್ ಮರಣಗಳು ವರದಿಯಾಗಿದೆ. ಬೆಳಗಾವಿ, ಕೊಡಗು, ಮೈಸೂರು, ತುಮಕೂರು, ಉಡುಪಿ ಜಿಲ್ಲೆಯಲ್ಲಿ ತಲಾ 1 ಕೊವಿಡ್ ಮರಣ ಸಂಭವಿಸಿದೆ.

ಇದನ್ನೂ ಓದಿ: ಶಾಲೆ ಆರಂಭ: ಕೊರೊನಾ ಬಗ್ಗೆಯೇ ಮಕ್ಕಳಿಗೆ ಮೊದಲ ಪಾಠ; ಜಾಗೃತಿ ಮೂಡಿಸುತ್ತಿರುವ ಶಿಕ್ಷಕರು

ಡಿಸೆಂಬರ್ 2022ರವರೆಗೆ ಮಾಸ್ಕ್ ಬಳಸಬೇಕಾಗಿ ಬರಬಹುದು: ಮಹಾರಾಷ್ಟ್ರ ಕೊವಿಡ್​ ಕಾರ್ಯಪಡೆ

Published On - 6:44 pm, Mon, 23 August 21

ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ