Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 1,301 ಜನರಿಗೆ ಕೊರೊನಾ ದೃಢ; 17 ಮಂದಿ ಸಾವು

ಬೆಂಗಳೂರಿನಲ್ಲಿ ಇಂದು ಒಂದೇ ದಿನ 386 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,36,615 ಕ್ಕೆ ಏರಿಕೆಯಾಗಿದೆ. 12,36,615 ಸೋಂಕಿತರ ಪೈಕಿ 12,13,296 ಜನರು ಗುಣಮುಖರಾಗಿದ್ದಾರೆ.

Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 1,301 ಜನರಿಗೆ ಕೊರೊನಾ ದೃಢ; 17 ಮಂದಿ ಸಾವು
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ganapathi bhat

Updated on: Aug 27, 2021 | 7:37 PM

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು (ಆಗಸ್ಟ್ 27) ಹೊಸದಾಗಿ 1,301 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 29,44,764 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 28,88,520 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 17 ಜನರ ಸಾವು ಸಂಭವಿಸಿದೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 37,248 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 18,970 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ ಇಂದು ಒಂದೇ ದಿನ 386 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,36,615 ಕ್ಕೆ ಏರಿಕೆಯಾಗಿದೆ. 12,36,615 ಸೋಂಕಿತರ ಪೈಕಿ 12,13,296 ಜನರು ಗುಣಮುಖರಾಗಿದ್ದಾರೆ. ರಾಜ್ಯ ರಾಜಧಾನಿಯಲ್ಲಿ ಇಂದು ಕೊರೊನಾ ಸೋಂಕಿನಿಂದ 2 ಮಂದಿ ಸಾವನ್ನಪ್ಪಿದ್ದಾರೆ. ಅದರಂತೆ, ನಗರದಲ್ಲಿ ಕೊರೊನಾದಿಂದ ಈವರೆಗೆ 15,977 ಜನರ ಸಾವು ಸಂಭವಿಸಿದೆ. ಬೆಂಗಳೂರಲ್ಲಿ 7,341 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.

ಜಿಲ್ಲಾವಾರು ಕೊರೊನಾ ಪ್ರಕರಣಗಳ ವಿವರ ಬಾಗಲಕೋಟೆ 1, ಬಳ್ಳಾರಿ 5, ಬೆಳಗಾವಿ 19, ಬೆಂಗಳೂರು ಗ್ರಾಮಾಂತರ 13, ಬೆಂಗಳೂರು ನಗರ 386, ಬೀದರ್ 1, ಚಾಮರಾಜನಗರ 5, ಚಿಕ್ಕಬಳ್ಳಾಪುರ 2, ಚಿಕ್ಕಮಗಳೂರು 25, ಚಿತ್ರದುರ್ಗ 5, ದಕ್ಷಿಣ ಕನ್ನಡ 248, ದಾವಣಗೆರೆ 14, ಧಾರವಾಡ 6, ಗದಗ 1, ಹಾಸನ 117, ಹಾವೇರಿ 4, ಕಲಬುರಗಿ 7, ಕೊಡಗು 78, ಕೋಲಾರ 14, ಕೊಪ್ಪಳ 1, ಮಂಡ್ಯ 26, ಮೈಸೂರು 72, ರಾಯಚೂರು 0, ರಾಮನಗರ 3, ಶಿವಮೊಗ್ಗ 62, ತುಮಕೂರು 37, ಉಡುಪಿ 106, ಉತ್ತರ ಕನ್ನಡ 38, ವಿಜಯಪುರ 4, ಯಾದಗಿರಿ ಜಿಲ್ಲೆಯಲ್ಲಿ 1 ಕೊವಿಡ್ 19 ಪ್ರಕರಣಗಳು ದಾಖಲಾಗಿವೆ.

ಕೊರೊನಾದಿಂದ ಮೃತಪಟ್ಟವರ ವಿವರ ಹಾಸನ ಜಿಲ್ಲೆಯಲ್ಲಿ ಕೊರೊನಾದಿಂದ 3 ಮಂದಿ ಸಾವನ್ನಪ್ಪಿದ್ದಾರೆ. ಬೆಂಗಳೂರು ನಗರ ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ ಇಂದು 2 ಮಂದಿ ಮೃತಪಟ್ಟಿದ್ದಾರೆ. ಬೆಂಗಳೂರು ಗ್ರಾಮಾಂತರ, ಕೊಡಗು, ಮೈಸೂರು ಜಿಲ್ಲೆಯಲ್ಲಿ ತಲಾ 2 ಮಂದಿ ಕೊವಿಡ್​ನಿಂದ ಮರಣಿಸಿದ್ದಾರೆ. ಚಿಕ್ಕಮಗಳೂರು, ದಕ್ಷಿಣ ಕನ್ನಡ, ಧಾರವಾಡ, ಶಿವಮೊಗ್ಗ, ತುಮಕೂರು, ಉಡುಪಿ ಜಿಲ್ಲೆಯಲ್ಲಿ ಕೊವಿಡ್19ನಿಂದ ತಲಾ 1 ಮಂದಿ ಮೃತಪಟ್ಟಿದ್ದಾರೆ.

ಇದನ್ನೂ ಓದಿ: ಕೊರೊನಾ ಲಸಿಕೆ ಪಡೆಯದಿದ್ದರೆ ಪಡಿತರ ಕೊಡೋದಿಲ್ಲ; ಚರ್ಚೆಗೆ ಗ್ರಾಸವಾಯ್ತು ತಹಶೀಲ್ದಾರ್ ಆದೇಶ

ಕೊರೊನಾ ಲಸಿಕೆಯಲ್ಲಿ ಭಾರತ ಹೊಸ ದಾಖಲೆ; ದೇಶದಲ್ಲಿ 59 ಕೋಟಿ ಡೋಸ್ ಲಸಿಕೆ ವಿತರಣೆ

(Karnataka New Corona Cases Death Toll Total Covid19 Active Coronavirus Cases on August 27)

‘ಪಿನಾಕ’ ಸಿನಿಮಾಗೆ ಪವರ್​ಫುಲ್ ಡೈಲಾಗ್ ಬರೆದ ರಘುಗೆ ಗಣೇಶ್​ ಮೆಚ್ಚುಗೆ
‘ಪಿನಾಕ’ ಸಿನಿಮಾಗೆ ಪವರ್​ಫುಲ್ ಡೈಲಾಗ್ ಬರೆದ ರಘುಗೆ ಗಣೇಶ್​ ಮೆಚ್ಚುಗೆ
ಸಿಡ್ನಿ ಟೆಸ್ಟ್ ಆಡುತ್ತಿಲ್ಲ ರೋಹಿತ್ ಶರ್ಮಾ
ಸಿಡ್ನಿ ಟೆಸ್ಟ್ ಆಡುತ್ತಿಲ್ಲ ರೋಹಿತ್ ಶರ್ಮಾ
ಬೆಳಗಾವಿಯ ಮಹಿಳೆಯೊಬ್ಬರಿಗೆ ಬೇಡವಂತೆ ಉಚಿತ ಬಸ್ ಪ್ರಯಾಣ!
ಬೆಳಗಾವಿಯ ಮಹಿಳೆಯೊಬ್ಬರಿಗೆ ಬೇಡವಂತೆ ಉಚಿತ ಬಸ್ ಪ್ರಯಾಣ!
ರಾಜ್ಯ ಬಿಜೆಪಿ ಘಟಕಗಳಿಗೆ ಅಧ್ಯಕ್ಷನನ್ನು ಆಯ್ಕೆಮಾಡುವ ಪ್ರಕ್ರಿಯೆ ಶುರು:ಜೋಶಿ
ರಾಜ್ಯ ಬಿಜೆಪಿ ಘಟಕಗಳಿಗೆ ಅಧ್ಯಕ್ಷನನ್ನು ಆಯ್ಕೆಮಾಡುವ ಪ್ರಕ್ರಿಯೆ ಶುರು:ಜೋಶಿ
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ