Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 1,229 ಜನರಿಗೆ ಕೊರೊನಾ ದೃಢ; 13 ಮಂದಿ ಸಾವು
ಬೆಂಗಳೂರಿನಲ್ಲಿ ಇಂದು ಒಂದೇ ದಿನ 310 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,36,925 ಕ್ಕೆ ಏರಿಕೆಯಾಗಿದೆ. 12,36,925 ಸೋಂಕಿತರ ಪೈಕಿ 12,13,625 ಜನರು ಗುಣಮುಖರಾಗಿದ್ದಾರೆ.
ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು (ಆಗಸ್ಟ್ 28) ಹೊಸದಾಗಿ 1,229 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 29,45,993 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 28,89,809 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 13 ಜನರ ಸಾವು ಸಂಭವಿಸಿದೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 37,261 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 18,897 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.
ಬೆಂಗಳೂರಿನಲ್ಲಿ ಇಂದು ಒಂದೇ ದಿನ 310 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,36,925 ಕ್ಕೆ ಏರಿಕೆಯಾಗಿದೆ. 12,36,925 ಸೋಂಕಿತರ ಪೈಕಿ 12,13,625 ಜನರು ಗುಣಮುಖರಾಗಿದ್ದಾರೆ. ರಾಜ್ಯ ರಾಜಧಾನಿಯಲ್ಲಿ ಇಂದು ಕೊರೊನಾ ಸೋಂಕಿನಿಂದ ಯಾವುದೇ ಸಾವು ಸಂಭವಿಸಿಲ್ಲ. ಅದರಂತೆ, ನಗರದಲ್ಲಿ ಕೊರೊನಾದಿಂದ ಈವರೆಗೆ 15,977 ಜನರ ಸಾವು ಸಂಭವಿಸಿದೆ. ಬೆಂಗಳೂರಲ್ಲಿ 7,322 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.
ಜಿಲ್ಲಾವಾರು ಕೊರೊನಾ ಪ್ರಕರಣಗಳ ವಿವರ ಬಾಗಲಕೋಟೆ 0, ಬಳ್ಳಾರಿ 5, ಬೆಳಗಾವಿ 29, ಬೆಂಗಳೂರು ಗ್ರಾಮಾಂತರ 15, ಬೆಂಗಳೂರು ನಗರ 310, ಬೀದರ್ 0, ಚಾಮರಾಜನಗರ 7, ಚಿಕ್ಕಬಳ್ಳಾಪುರ 4, ಚಿಕ್ಕಮಗಳೂರು 35, ಚಿತ್ರದುರ್ಗ 15, ದಕ್ಷಿಣ ಕನ್ನಡ 207, ದಾವಣಗೆರೆ 12, ಧಾರವಾಡ 7, ಗದಗ 2, ಹಾಸನ 103, ಹಾವೇರಿ 3, ಕಲಬುರಗಿ 2, ಕೊಡಗು 75, ಕೋಲಾರ 15, ಕೊಪ್ಪಳ 2, ಮಂಡ್ಯ 21, ಮೈಸೂರು 82, ರಾಯಚೂರು 0, ರಾಮನಗರ 3, ಶಿವಮೊಗ್ಗ 42, ತುಮಕೂರು 44, ಉಡುಪಿ 146, ಉತ್ತರ ಕನ್ನಡ 42, ವಿಜಯಪುರ 1, ಯಾದಗಿರಿ ಜಿಲ್ಲೆಯಲ್ಲಿ 0 ಕೊವಿಡ್ 19 ಪ್ರಕರಣಗಳು ದಾಖಲಾಗಿವೆ.
ಇಂದಿನ 28/08/2021 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/VWRlsx2bVl@CMofKarnataka @BSBommai @mla_sudhakar @BBMPCOMM @mysurucitycorp @mangalurucorp @WFRising @DDChandanaNews @AIRBENGALURU1 @KarnatakaVarthe @PIBBengaluru pic.twitter.com/pvDCsqIc1v
— K’taka Health Dept (@DHFWKA) August 28, 2021
ಕೊರೊನಾದಿಂದ ಮೃತಪಟ್ಟವರ ವಿವರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾದಿಂದ 5 ಮಂದಿ ಸಾವನ್ನಪ್ಪಿದ್ದಾರೆ. ಹಾಸನ ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ ಇಂದು 2 ಮಂದಿ ಮೃತಪಟ್ಟಿದ್ದಾರೆ. ಬೆಂಗಳೂರು ನಗರದಲ್ಲಿ ಕೊರೊನಾದಿಂದ ಯಾವುದೇ ಸಾವು ಸಂಭವಿಸಿಲ್ಲ. ಉಳಿದಂತೆ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಹಾವೇರಿ, ಕೋಲಾರ, ಶಿವಮೊಗ್ಗ ಹಾಗೂ ಉಡುಪಿ ಜಿಲ್ಲೆಯಲ್ಲಿ ತಲಾ 1 ಮಂದಿ ಕೊವಿಡ್ನಿಂದ ಮರಣಿಸಿದ್ದಾರೆ.
ಇದನ್ನೂ ಓದಿ: ಕೊರೊನಾದಿಂದ ಶಾಲೆಗಳಿಲ್ಲದೆ ಓದಲು..ಬರೆಯಲು ಮರೆತ ಮಕ್ಕಳು; ಇದು ಯಾವ ರಾಜ್ಯದಲ್ಲಿ ಗೊತ್ತಾ?
ಫೇಸ್ಬುಕ್ ಪುಟದಲ್ಲಿ ಕೊವಿಡ್ ಸಂಬಂಧಿತ ಮಾಹಿತಿ ಒದಗಿಸುವ ಕೇರಳದ ವ್ಯಕ್ತಿಗೆ ಇಂಡಿಯನ್ ಬುಕ್ ಆಫ್ ರೆಕಾರ್ಡ್ಸ್ ಗೌರವ
(Karnataka New Corona Cases Death Toll Total Covid19 Active Coronavirus Cases on August 28)