ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು (ಆಗಸ್ಟ್ 3) ಹೊಸದಾಗಿ 1,674 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 29,09,958 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 28,49,003 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 38 ಜನರ ಸಾವು ಸಂಭವಿಸಿದೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 36,650 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 24,280 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.
ಬೆಂಗಳೂರಿನಲ್ಲಿ ಇಂದು ಒಂದೇ ದಿನ 477 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,28,515 ಕ್ಕೆ ಏರಿಕೆಯಾಗಿದೆ. 12,28,515 ಸೋಂಕಿತರ ಪೈಕಿ 12,03,636 ಜನರು ಗುಣಮುಖರಾಗಿದ್ದಾರೆ. ರಾಜ್ಯ ರಾಜಧಾನಿಯಲ್ಲಿ ಇಂದು ಕೊರೊನಾ ಸೋಂಕಿಗೆ 7 ಮಂದಿ ಬಲಿಯಾಗಿದ್ದಾರೆ. ಅದರಂತೆ, ನಗರದಲ್ಲಿ ಕೊರೊನಾದಿಂದ ಈವರೆಗೆ 15,892 ಜನರ ಸಾವು ಸಂಭವಿಸಿದೆ. ಬೆಂಗಳೂರಲ್ಲಿ 8,986 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.
ಜಿಲ್ಲಾವಾರು ಕೊರೊನಾ ಪ್ರಕರಣಗಳ ವಿವರ ಬಾಗಲಕೋಟೆ 1, ಬಳ್ಳಾರಿ 8, ಬೆಳಗಾವಿ 36, ಬೆಂಗಳೂರು ಗ್ರಾಮಾಂತರ 21, ಬೆಂಗಳೂರು ನಗರ 477, ಬೀದರ್ 0, ಚಾಮರಾಜನಗರ 19, ಚಿಕ್ಕಬಳ್ಳಾಪುರ 6, ಚಿಕ್ಕಮಗಳೂರು 61, ಚಿತ್ರದುರ್ಗ 15, ದಕ್ಷಿಣ ಕನ್ನಡ 307, ದಾವಣಗೆರೆ 12, ಧಾರವಾಡ 9, ಗದಗ 3, ಹಾಸನ 104, ಹಾವೇರಿ 1, ಕಲಬುರಗಿ 3, ಕೊಡಗು 94, ಕೋಲಾರ 17, ಕೊಪ್ಪಳ 4, ಮಂಡ್ಯ 44, ಮೈಸೂರು 147, ರಾಯಚೂರು 0, ರಾಮನಗರ 11, ಶಿವಮೊಗ್ಗ 26, ತುಮಕೂರು 80, ಉಡುಪಿ 104, ಉತ್ತರ ಕನ್ನಡ 60, ವಿಜಯಪುರ 4, ಯಾದಗಿರಿ ಜಿಲ್ಲೆಯಲ್ಲಿ 0 ಕೊವಿಡ್ 19 ಪ್ರಕರಣಗಳು ದಾಖಲಾಗಿವೆ.
ಜಿಲ್ಲಾವಾರು ಕೊರೊನಾದಿಂದ ಮೃತಪಟ್ಟವರ ಸಂಖ್ಯೆ ಬೆಂಗಳೂರಿನಲ್ಲಿ ಇಂದು ಕೊರೊನಾ ಸೋಂಕಿಗೆ 7 ಮಂದಿ ಬಲಿಯಾಗಿದ್ದಾರೆ. ದಕ್ಷಿಣ ಕನ್ನಡ 8 ಮತ್ತು ಮೈಸೂರು ಜಿಲ್ಲೆಯಲ್ಲಿ 4 ಮಂದಿ ಸಾವನ್ನಪ್ಪಿದ್ದಾರೆ. ಚಿಕ್ಕಬಳ್ಳಾಪುರ, ಧಾರವಾಡ, ಹಾಸನ, ಕೋಲಾರ, ತುಮಕೂರು ಜಿಲ್ಲೆಯಲ್ಲಿ ತಲಾ 2, ಬಳ್ಳಾರಿ, ಬೆಳಗಾವಿ, ಚಿಕ್ಕಮಗಳೂರು, ಗದಗ, ಕೊಡಗು, ರಾಯಚೂರು, ಶಿವಮೊಗ್ಗ, ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ತಲಾ 1 ಕೊವಿಡ್ ಮರಣಗಳು ದಾಖಲಾಗಿವೆ. ರಾಜ್ಯದಲ್ಲಿ ಇದುವರೆಗೆ ಕೊರೊನಾದಿಂದ 36,650 ಜನರ ಸಾವು ಸಂಭವಿಸಿದೆ.
ಇದನ್ನೂ ಓದಿ: Covid Vaccine: ಡಿಸೆಂಬರ್ ವೇಳೆಗೆ ಭಾರತದಲ್ಲಿ 12 ಕೋಟಿ ಕೊವಿಶೀಲ್ಡ್ ಹಾಗೂ 5.8 ಕೋಟಿ ಡೋಸ್ ಕೊವ್ಯಾಕ್ಸಿನ್ ಲಸಿಕೆ ಉತ್ಪಾದನೆ
(Karnataka New Corona Cases Death Toll Total Covid19 Active Coronavirus Cases on August 3)