Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 1,769 ಕೊರೊನಾ ಕೇಸ್ ಪತ್ತೆ; 30 ಮಂದಿ ಸಾವು

| Updated By: ganapathi bhat

Updated on: Aug 04, 2021 | 9:56 PM

ಬೆಂಗಳೂರಿನಲ್ಲಿ ಇಂದು ಒಂದೇ ದಿನ 411 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,28,926 ಕ್ಕೆ ಏರಿಕೆಯಾಗಿದೆ. 12,28,926 ಸೋಂಕಿತರ ಪೈಕಿ 12,04,324 ಜನರು ಗುಣಮುಖರಾಗಿದ್ದಾರೆ.

Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 1,769 ಕೊರೊನಾ ಕೇಸ್ ಪತ್ತೆ; 30 ಮಂದಿ ಸಾವು
ಪ್ರಾತಿನಿಧಿಕ ಚಿತ್ರ
Follow us on

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು (ಆಗಸ್ಟ್ 4) ಹೊಸದಾಗಿ 1,769 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 29,11,727 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 28,50,717 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 30 ಜನರ ಸಾವು ಸಂಭವಿಸಿದೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 36,680 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 24,305 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ ಇಂದು ಒಂದೇ ದಿನ 411 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,28,926 ಕ್ಕೆ ಏರಿಕೆಯಾಗಿದೆ. 12,28,926 ಸೋಂಕಿತರ ಪೈಕಿ 12,04,324 ಜನರು ಗುಣಮುಖರಾಗಿದ್ದಾರೆ. ರಾಜ್ಯ ರಾಜಧಾನಿಯಲ್ಲಿ ಇಂದು ಕೊರೊನಾ ಸೋಂಕಿಗೆ 4 ಮಂದಿ ಬಲಿಯಾಗಿದ್ದಾರೆ. ಅದರಂತೆ, ನಗರದಲ್ಲಿ ಕೊರೊನಾದಿಂದ ಈವರೆಗೆ 15,896 ಜನರ ಸಾವು ಸಂಭವಿಸಿದೆ. ಬೆಂಗಳೂರಲ್ಲಿ 8,705 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.

ಜಿಲ್ಲಾವಾರು ಕೊರೊನಾ ಪ್ರಕರಣಗಳ ವಿವರ
ಬಾಗಲಕೋಟೆ 6, ಬಳ್ಳಾರಿ 9, ಬೆಳಗಾವಿ 31, ಬೆಂಗಳೂರು ಗ್ರಾಮಾಂತರ 22, ಬೆಂಗಳೂರು ನಗರ 411, ಬೀದರ್ 2, ಚಾಮರಾಜನಗರ 33, ಚಿಕ್ಕಬಳ್ಳಾಪುರ 7, ಚಿಕ್ಕಮಗಳೂರು 67, ಚಿತ್ರದುರ್ಗ 25, ದಕ್ಷಿಣ ಕನ್ನಡ 350, ದಾವಣಗೆರೆ 10, ಧಾರವಾಡ 8, ಗದಗ 1, ಹಾಸನ 112, ಹಾವೇರಿ 0, ಕಲಬುರಗಿ 2, ಕೊಡಗು 99, ಕೋಲಾರ 49, ಕೊಪ್ಪಳ 3, ಮಂಡ್ಯ 43, ಮೈಸೂರು 143, ರಾಯಚೂರು 1, ರಾಮನಗರ 10, ಶಿವಮೊಗ್ಗ 38, ತುಮಕೂರು 53, ಉಡುಪಿ 140, ಉತ್ತರ ಕನ್ನಡ 86, ವಿಜಯಪುರ 8, ಯಾದಗಿರಿ ಜಿಲ್ಲೆಯಲ್ಲಿ 0 ಕೊವಿಡ್ 19 ಪ್ರಕರಣಗಳು ದಾಖಲಾಗಿವೆ.

ಜಿಲ್ಲಾವಾರು ಕೊರೊನಾದಿಂದ ಮೃತಪಟ್ಟವರ ಸಂಖ್ಯೆ
ಬೆಂಗಳೂರಿನಲ್ಲಿ ಇಂದು ಕೊರೊನಾ ಸೋಂಕಿಗೆ 4 ಮಂದಿ ಬಲಿಯಾಗಿದ್ದಾರೆ. ದಕ್ಷಿಣ ಕನ್ನಡ 6 ಮತ್ತು ಮೈಸೂರು ಜಿಲ್ಲೆಯಲ್ಲಿ 4 ಮಂದಿ ಸಾವನ್ನಪ್ಪಿದ್ದಾರೆ. ಮಂಡ್ಯದಲ್ಲಿ 3 ಮರಣಗಳು ವರದಿಯಾಗಿದೆ. ಹಾಸನ, ಕೋಲಾರ, ಉಡುಪಿ, ವಿಜಯಪುರ ಜಿಲ್ಲೆಯಲ್ಲಿ ತಲಾ 2, ಬೆಳಗಾವಿ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿತ್ರದುರ್ಗ, ತುಮಕೂರು ಜಿಲ್ಲೆಯಲ್ಲಿ ತಲಾ 1 ಕೊವಿಡ್ ಮರಣಗಳು ದಾಖಲಾಗಿವೆ. ರಾಜ್ಯದಲ್ಲಿ ಇದುವರೆಗೆ ಕೊರೊನಾದಿಂದ 36,680 ಜನರ ಸಾವು ಸಂಭವಿಸಿದೆ.

ಇದನ್ನೂ ಓದಿ: ಕೊರೊನಾ ನಿರ್ವಹಣೆ, ನೆರೆ ಪರಿಹಾರಕ್ಕೆ ನೂತನ ಸಚಿವರಿಗೆ ಜಿಲ್ಲೆ ಹಂಚಿಕೆ; ಯಾವ ಜಿಲ್ಲೆಗೆ ಯಾರು ಉಸ್ತುವಾರಿ? ಇಲ್ಲಿದೆ ವಿವರ

ವರ್ಷದ ಬಳಿಕ ವುಹಾನ್​ನಲ್ಲಿ ಮತ್ತೆ ಕಾಣಿಸಿಕೊಂಡ ಕೊರೊನಾ; ಪ್ರತಿಯೊಬ್ಬರಿಗೂ ಎನ್​​ಎಟಿ ಮಾಡುವುದಾಗಿ ಹೇಳಿದ ಸ್ಥಳೀಯ ಆಡಳಿತ

(Karnataka New Corona Cases Death Toll Total Covid19 Active Coronavirus Cases on August 4)