AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 1,610 ಕೊರೊನಾ ಕೇಸ್ ಪತ್ತೆ; 32 ಮಂದಿ ಸಾವು

ಬೆಂಗಳೂರಿನಲ್ಲಿ ಇಂದು ಒಂದೇ ದಿನ 357 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,30,138 ಕ್ಕೆ ಏರಿಕೆಯಾಗಿದೆ. 12,30,138 ಸೋಂಕಿತರ ಪೈಕಿ 12,05,712 ಜನರು ಗುಣಮುಖರಾಗಿದ್ದಾರೆ.

Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 1,610 ಕೊರೊನಾ ಕೇಸ್ ಪತ್ತೆ; 32 ಮಂದಿ ಸಾವು
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Aug 07, 2021 | 11:03 PM

Share

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು (ಆಗಸ್ಟ್ 7) ಹೊಸದಾಗಿ 1,610 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 29,16,927 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 28,55,862 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 32 ಜನರ ಸಾವು ಸಂಭವಿಸಿದೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 36,773 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 24,266 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ ಇಂದು ಒಂದೇ ದಿನ 357 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,30,138 ಕ್ಕೆ ಏರಿಕೆಯಾಗಿದೆ. 12,30,138 ಸೋಂಕಿತರ ಪೈಕಿ 12,05,712 ಜನರು ಗುಣಮುಖರಾಗಿದ್ದಾರೆ. ರಾಜ್ಯ ರಾಜಧಾನಿಯಲ್ಲಿ ಇಂದು ಕೊರೊನಾ ಸೋಂಕಿಗೆ 5 ಮಂದಿ ಬಲಿಯಾಗಿದ್ದಾರೆ. ಅದರಂತೆ, ನಗರದಲ್ಲಿ ಕೊರೊನಾದಿಂದ ಈವರೆಗೆ 15,913 ಜನರ ಸಾವು ಸಂಭವಿಸಿದೆ. ಬೆಂಗಳೂರಲ್ಲಿ 8,512 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.

ಜಿಲ್ಲಾವಾರು ಕೊರೊನಾ ಪ್ರಕರಣಗಳ ವಿವರ ಬಾಗಲಕೋಟೆ 0, ಬಳ್ಳಾರಿ 9, ಬೆಳಗಾವಿ 26, ಬೆಂಗಳೂರು ಗ್ರಾಮಾಂತರ 21, ಬೆಂಗಳೂರು ನಗರ 357, ಬೀದರ್ 2, ಚಾಮರಾಜನಗರ 27, ಚಿಕ್ಕಬಳ್ಳಾಪುರ 6, ಚಿಕ್ಕಮಗಳೂರು 66, ಚಿತ್ರದುರ್ಗ 20, ದಕ್ಷಿಣ ಕನ್ನಡ 342, ದಾವಣಗೆರೆ 8, ಧಾರವಾಡ 11, ಗದಗ 3, ಹಾಸನ 129, ಹಾವೇರಿ 2, ಕಲಬುರಗಿ 4, ಕೊಡಗು 81, ಕೋಲಾರ 33, ಕೊಪ್ಪಳ 2, ಮಂಡ್ಯ 27, ಮೈಸೂರು 141, ರಾಯಚೂರು 10, ರಾಮನಗರ 5, ಶಿವಮೊಗ್ಗ 37, ತುಮಕೂರು 53, ಉಡುಪಿ 131, ಉತ್ತರ ಕನ್ನಡ 55, ವಿಜಯಪುರ 2, ಯಾದಗಿರಿ ಜಿಲ್ಲೆಯಲ್ಲಿ 0 ಕೊವಿಡ್ 19 ಪ್ರಕರಣಗಳು ದಾಖಲಾಗಿವೆ.

ಜಿಲ್ಲಾವಾರು ಕೊರೊನಾದಿಂದ ಮೃತಪಟ್ಟವರ ಸಂಖ್ಯೆ ಬೆಂಗಳೂರಿನಲ್ಲಿ ಇಂದು ಕೊರೊನಾ ಸೋಂಕಿಗೆ 5 ಮಂದಿ ಬಲಿಯಾಗಿದ್ದಾರೆ. ಕೋಲಾರದಲ್ಲಿ 5 ಮಂದಿ, ದಕ್ಷಿಣ ಕನ್ನಡ 4 ಮತ್ತು ಹಾಸನ ಜಿಲ್ಲೆಯಲ್ಲಿ 6 ಮಂದಿ ಸಾವನ್ನಪ್ಪಿದ್ದಾರೆ. ಧಾರವಾಡ, ಮಂಡ್ಯ, ಉಡುಪಿಯಲ್ಲಿ ತಲಾ 2 ಮರಣಗಳು ವರದಿಯಾಗಿವೆ. ಬೆಳಗಾವಿ, ದಾವಣಗೆರೆ, ಹಾವೇರಿ, ಮೈಸೂರು, ರಾಮನಗರ, ವಿಜಯಪುರದಲ್ಲಿ ತಲಾ 1 ಕೊರೊನಾದಿಂದ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಇದುವರೆಗೆ ಕೊರೊನಾದಿಂದ 36,773 ಜನರ ಸಾವು ಸಂಭವಿಸಿದೆ.

ಇದನ್ನೂ ಓದಿ: ಭಾರತಕ್ಕೆ ಸಿಕ್ಕಿತು ಮತ್ತೊಂದು ಕೊರೊನಾ ವ್ಯಾಕ್ಸಿನ್ -ಸಿಂಗಲ್ ಡೋಸ್ ಜಾನ್ಸನ್ ಲಸಿಕೆ: ಏನಿದರ ಮಹತ್ವ?

ಜನರಿಗೊಂದು ನ್ಯಾಯ, ರಾಜಕಾರಣಿಗಳಿಗೊಂದು ನ್ಯಾಯ?; ಎಚ್​ಡಿ ಕುಮಾರಸ್ವಾಮಿ ಸಮ್ಮುಖದಲ್ಲೇ ಕೊರೊನಾ ನಿಯಮ ಉಲ್ಲಂಘನೆ

(Karnataka New Corona Cases Death Toll Total Covid19 Active Coronavirus Cases on August 7)

Follow Us
Web contact
Web contact

TV9 Kannada

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ಗಂಡನ ಜೊತೆಗಿದ್ದರೂ ಬರ್ತೀಯಾ ಎಂದು ಕೇಳ್ತಾರೆ
ಗಂಡನ ಜೊತೆಗಿದ್ದರೂ ಬರ್ತೀಯಾ ಎಂದು ಕೇಳ್ತಾರೆ