Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 1,186 ಕೊರೊನಾ ಕೇಸ್ ಪತ್ತೆ; 24 ಮಂದಿ ಸಾವು
ಕರ್ನಾಟಕದ ಕೊರೊನಾ ಪಾಸಿಟಿವಿಟಿ ದರ ಶೇಕಡಾ 0.89 ಆಗಿದೆ. ಕರ್ನಾಟಕದಲ್ಲಿ 1,776 ಕೊರೊನಾ ಸೋಂಕಿತರು ಹಾಗೂ ಬೆಂಗಳೂರಿನಲ್ಲಿ 410 ಕೊರೊನಾ ಸೋಂಕಿತರು ಇಂದು ಬಿಡುಗಡೆಯಾಗಿದ್ದಾರೆ.
ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು (ಆಗಸ್ಟ್ 9) ಹೊಸದಾಗಿ 1,186 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 24 ಜನರ ಸಾವು ಸಂಭವಿಸಿದೆ. ರಾಜ್ಯದಲ್ಲಿ 23,316 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ. ಬೆಂಗಳೂರಿನಲ್ಲಿ ಇಂದು ಒಂದೇ ದಿನ 296 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ರಾಜ್ಯ ರಾಜಧಾನಿಯಲ್ಲಿ ಇಂದು ಕೊರೊನಾ ಸೋಂಕಿಗೆ ಒಬ್ಬರು ಬಲಿಯಾಗಿದ್ದಾರೆ. ಬೆಂಗಳೂರಲ್ಲಿ 8,512 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.
ಕರ್ನಾಟಕದ ಕೊರೊನಾ ಪಾಸಿಟಿವಿಟಿ ದರ ಶೇಕಡಾ 0.89 ಆಗಿದೆ. ಕರ್ನಾಟಕದಲ್ಲಿ 1,776 ಕೊರೊನಾ ಸೋಂಕಿತರು ಹಾಗೂ ಬೆಂಗಳೂರಿನಲ್ಲಿ 410 ಕೊರೊನಾ ಸೋಂಕಿತರು ಇಂದು ಬಿಡುಗಡೆಯಾಗಿದ್ದಾರೆ. ಬೆಂಗಳೂರಿನಲ್ಲಿ 8,378 ಕೊವಿಡ್19 ಸಕ್ರಿಯ ಪ್ರಕರಣಗಳಿವೆ. ರಾಜ್ಯದಲ್ಲಿ ಇಂದು ಒಟ್ಟು 1,32,192 ಕೊರೊನಾ ಪರೀಕ್ಷೆ ನಡೆಸಲಾಗಿದೆ.
ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 29,19,711 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 28,59,552 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 36,817 ಜನ ಸಾವನ್ನಪ್ಪಿದ್ದಾರೆ.
ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,30,782 ಕ್ಕೆ ಏರಿಕೆಯಾಗಿದೆ. 12,30,782 ಸೋಂಕಿತರ ಪೈಕಿ 12,06,488 ಜನರು ಗುಣಮುಖರಾಗಿದ್ದಾರೆ. ಬೆಂಗಳೂರು ನಗರದಲ್ಲಿ ಕೊರೊನಾದಿಂದ ಈವರೆಗೆ 15,915 ಜನರ ಸಾವು ಸಂಭವಿಸಿದೆ.
ಜಿಲ್ಲಾವಾರು ಕೊರೊನಾ ಪ್ರಕರಣಗಳ ವಿವರ ಬಾಗಲಕೋಟೆ 0, ಬಳ್ಳಾರಿ 6, ಬೆಳಗಾವಿ 29, ಬೆಂಗಳೂರು ಗ್ರಾಮಾಂತರ 19, ಬೆಂಗಳೂರು ನಗರ 296, ಬೀದರ್ 1, ಚಾಮರಾಜನಗರ 31, ಚಿಕ್ಕಬಳ್ಳಾಪುರ 7, ಚಿಕ್ಕಮಗಳೂರು 24, ಚಿತ್ರದುರ್ಗ 15, ದಕ್ಷಿಣ ಕನ್ನಡ 273, ದಾವಣಗೆರೆ 4, ಧಾರವಾಡ 1, ಗದಗ 3, ಹಾಸನ 54, ಹಾವೇರಿ 1, ಕಲಬುರಗಿ 6, ಕೊಡಗು 83, ಕೋಲಾರ 28, ಕೊಪ್ಪಳ 5, ಮಂಡ್ಯ 29, ಮೈಸೂರು 82, ರಾಯಚೂರು 0, ರಾಮನಗರ 2, ಶಿವಮೊಗ್ಗ 34, ತುಮಕೂರು 40, ಉಡುಪಿ 81, ಉತ್ತರ ಕನ್ನಡ 30, ವಿಜಯಪುರ 1, ಯಾದಗಿರಿ ಜಿಲ್ಲೆಯಲ್ಲಿ 1 ಕೊವಿಡ್ 19 ಪ್ರಕರಣಗಳು ದಾಖಲಾಗಿವೆ.
ಜಿಲ್ಲಾವಾರು ಕೊರೊನಾದಿಂದ ಮೃತಪಟ್ಟವರ ಸಂಖ್ಯೆ ಬೆಂಗಳೂರಿನಲ್ಲಿ ಇಂದು ಕೊರೊನಾ ಸೋಂಕಿಗೆ 1 ಮಂದಿ ಬಲಿಯಾಗಿದ್ದಾರೆ. ದಕ್ಷಿಣ ಕನ್ನಡ, ಉಡುಪಿ, ಕೋಲಾರ ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ತಲಾ 3 ಮಂದಿ ಬಲಿಯಾಗಿದ್ದಾರೆ. ಧಾರವಾಡ, ಹಾಸನ, ತುಮಕೂರು, ಉತ್ತರ ಕನ್ನಡ ಜಿಲ್ಲೆಯಲ್ಲಿ ತಲಾ 2 ಮಂದಿ ಕೊರೊನಾದಿಂದ ಮೃತರಾಗಿದ್ದಾರೆ. ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ದಾವಣಗೆರೆ, ಹಾವೇರಿ, ಮೈಸೂರು, ಶಿವಮೊಗ್ಗ ಜಿಲ್ಲೆಯಲ್ಲಿ ತಲಾ 1 ಕೊರೊನಾ ಮರಣಗಳು ವರದಿಯಾಗಿವೆ.
ಇದನ್ನೂ ಓದಿ: ಮೈಸೂರು ದಸರಾ ಆಚರಣೆ, ಕೊವಿಡ್ 3ನೇ ಅಲೆಯ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಮಹತ್ವದ ಸುದ್ದಿಗೋಷ್ಠಿಯ ವಿವರ ಇಲ್ಲಿದೆ
Coronavirus cases in India: ದೇಶದಲ್ಲಿ 35,499 ಹೊಸ ಕೊವಿಡ್ ಪ್ರಕರಣ, 447 ಮಂದಿ ಸಾವು
(Karnataka New Corona Cases Death Toll Total Covid19 Active Coronavirus Cases on August 9)
Published On - 6:36 pm, Mon, 9 August 21