AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Covid Update: ಕರ್ನಾಟಕದಲ್ಲಿ ಹೊಸದಾಗಿ 1,890 ಕೊರೊನಾ ಕೇಸ್ ಪತ್ತೆ; 34 ಮಂದಿ ಸಾವು

ಬೆಂಗಳೂರಿನಲ್ಲಿ ಇಂದು ಒಂದೇ ದಿನ 426 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,26,889 ಕ್ಕೆ ಏರಿಕೆಯಾಗಿದೆ. 12,26,889 ಸೋಂಕಿತರ ಪೈಕಿ 12,02,560 ಜನರು ಗುಣಮುಖರಾಗಿದ್ದಾರೆ.

Karnataka Covid Update: ಕರ್ನಾಟಕದಲ್ಲಿ ಹೊಸದಾಗಿ 1,890 ಕೊರೊನಾ ಕೇಸ್ ಪತ್ತೆ; 34 ಮಂದಿ ಸಾವು
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jul 30, 2021 | 9:55 PM

Share

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು (ಜುಲೈ 30) ಹೊಸದಾಗಿ 1,890 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 29,03,137 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 28,43,110 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 34 ಜನರ ಸಾವು ಸಂಭವಿಸಿದೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 36,525 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 23,478 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ ಇಂದು ಒಂದೇ ದಿನ 426 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,26,889 ಕ್ಕೆ ಏರಿಕೆಯಾಗಿದೆ. 12,26,889 ಸೋಂಕಿತರ ಪೈಕಿ 12,02,560 ಜನರು ಗುಣಮುಖರಾಗಿದ್ದಾರೆ. ರಾಜ್ಯ ರಾಜಧಾನಿಯಲ್ಲಿ ಇಂದು ಕೊರೊನಾ ಸೋಂಕಿಗೆ 9 ಮಂದಿ ಬಲಿಯಾಗಿದ್ದಾರೆ. ಅದರಂತೆ, ನಗರದಲ್ಲಿ ಕೊರೊನಾದಿಂದ ಈವರೆಗೆ 15,861 ಜನರ ಸಾವು ಸಂಭವಿಸಿದೆ. ಬೆಂಗಳೂರಲ್ಲಿ 8,467 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.

ಜಿಲ್ಲಾವಾರು ಕೊರೊನಾ ಪ್ರಕರಣಗಳ ವಿವರ ಬಾಗಲಕೋಟೆ 2, ಬಳ್ಳಾರಿ 20, ಬೆಳಗಾವಿ 103, ಬೆಂಗಳೂರು ಗ್ರಾಮಾಂತರ 17, ಬೆಂಗಳೂರು ನಗರ 426, ಬೀದರ್ 4, ಚಾಮರಾಜನಗರ 27, ಚಿಕ್ಕಬಳ್ಳಾಪುರ 10, ಚಿಕ್ಕಮಗಳೂರು 88, ಚಿತ್ರದುರ್ಗ 31, ದಕ್ಷಿಣ ಕನ್ನಡ 345, ದಾವಣಗೆರೆ 4, ಧಾರವಾಡ 9, ಹಾಸನ 135, ಹಾವೇರಿ 2, ಕಲಬುರಗಿ 6, ಕೊಡಗು 77, ಕೋಲಾರ 28, ಕೊಪ್ಪಳ 1, ಮಂಡ್ಯ 48, ಮೈಸೂರು 142, ರಾಯಚೂರು 1, ಶಿವಮೊಗ್ಗ 88, ತುಮಕೂರು 54, ಉಡುಪಿ 155, ಉತ್ತರ ಕನ್ನಡ 47, ವಿಜಯಪುರ 8, ಯಾದಗಿರಿ ಜಿಲ್ಲೆಯಲ್ಲಿ 1 ಕೊವಿಡ್ 19 ಪ್ರಕರಣಗಳು ದಾಖಲಾಗಿವೆ.

ಜಿಲ್ಲಾವಾರು ಕೊರೊನಾದಿಂದ ಮೃತಪಟ್ಟವರ ಸಂಖ್ಯೆ ಬೆಂಗಳೂರಿನಲ್ಲಿ ಇಂದು ಕೊರೊನಾ ಸೋಂಕಿಗೆ 9 ಮಂದಿ ಬಲಿಯಾಗಿದ್ದಾರೆ. ದಕ್ಷಿಣ ಕನ್ನಡ 7, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಮೈಸೂರು, ಉತ್ತರ ಕನ್ನಡ ಜಿಲ್ಲೆಯಲ್ಲಿ ತಲಾ 2, ಬೆಳಗಾವಿ, ಧಾರವಾಡ, ಹಾಸನ, ಕಲಬುರಗಿ, ಕೊಡಗು, ಶಿವಮೊಗ್ಗ, ಉಡುಪಿ, ವಿಜಯಪುರ ಜಿಲ್ಲೆಯಲ್ಲಿ ತಲಾ 1 ಕೊವಿಡ್ ಮರಣಗಳು ದಾಖಲಾಗಿವೆ. ರಾಜ್ಯದಲ್ಲಿ ಇದುವರೆಗೆ ಕೊರೊನಾದಿಂದ 36,525 ಜನರ ಸಾವು ಸಂಭವಿಸಿದೆ.

ಇದನ್ನೂ ಓದಿ: Corona Cases: ಕೇರಳದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಳ: ದಕ್ಷಿಣ ಕನ್ನಡ ಜಿಲ್ಲೆ ಗಡಿಯಲ್ಲಿ ಕಟ್ಟುನಿಟ್ಟಿನ ತಪಾಸಣೆ

Exclusive: ದೇಶದಲ್ಲಿ ಕೊರೊನಾ ಲಸಿಕೆ ವಿತರಣೆಯ ವೇಗ ಕುಂಠಿತವಾಗಲು ಕಾರಣವೇನು?

(Karnataka New Corona Cases Death Toll Total Covid19 Active Coronavirus Cases on July 30)

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ