Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 188 ಜನರಿಗೆ ಕೊರೊನಾ ದೃಢ; 2 ಮಂದಿ ಸಾವು

ಬೆಂಗಳೂರಿನಲ್ಲಿ ಇಂದು ಒಂದೇ ದಿನ 95 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,51,967 ಕ್ಕೆ ಏರಿಕೆಯಾಗಿದೆ. 12,51,967 ಸೋಂಕಿತರ ಪೈಕಿ 12,29,207 ಜನರು ಗುಣಮುಖರಾಗಿದ್ದಾರೆ.

Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 188 ಜನರಿಗೆ ಕೊರೊನಾ ದೃಢ; 2 ಮಂದಿ ಸಾವು
ಪ್ರಾತಿನಿಧಿಕ ಚಿತ್ರ
Edited By:

Updated on: Nov 01, 2021 | 7:50 PM

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು (ನವೆಂಬರ್ 1) ಹೊಸದಾಗಿ 188 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 29,88,521 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 29,41,896 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 2 ಜನರ ಸಾವು ಸಂಭವಿಸಿದೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 38,084 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 8,512 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ ಇಂದು ಒಂದೇ ದಿನ 95 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,51,967 ಕ್ಕೆ ಏರಿಕೆಯಾಗಿದೆ. 12,51,967 ಸೋಂಕಿತರ ಪೈಕಿ 12,29,207 ಜನರು ಗುಣಮುಖರಾಗಿದ್ದಾರೆ. ರಾಜ್ಯ ರಾಜಧಾನಿಯಲ್ಲಿ ಇಂದು ಕೊರೊನಾ ಸೋಂಕಿನಿಂದ ಯಾರೂ ಮೃತಪಟ್ಟಿಲ್ಲ. ಅದರಂತೆ, ನಗರದಲ್ಲಿ ಕೊರೊನಾದಿಂದ ಈವರೆಗೆ 16,281 ಜನರ ಸಾವು ಸಂಭವಿಸಿದೆ. ಬೆಂಗಳೂರಲ್ಲಿ 6,478 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.

ಜಿಲ್ಲಾವಾರು ಕೊರೊನಾ ಪ್ರಕರಣಗಳ ವಿವರ
ಬಾಗಲಕೋಟೆ 0, ಬಳ್ಳಾರಿ 4, ಬೆಳಗಾವಿ 3, ಬೆಂಗಳೂರು ಗ್ರಾಮಾಂತರ 1, ಬೆಂಗಳೂರು ನಗರ 95, ಬೀದರ್ 0, ಚಾಮರಾಜನಗರ 0, ಚಿಕ್ಕಬಳ್ಳಾಪುರ 2, ಚಿಕ್ಕಮಗಳೂರು 2, ಚಿತ್ರದುರ್ಗ 4, ದಕ್ಷಿಣ ಕನ್ನಡ 12, ದಾವಣಗೆರೆ 1, ಧಾರವಾಡ 0, ಗದಗ 0, ಹಾಸನ 11, ಹಾವೇರಿ 0, ಕಲಬುರಗಿ 2, ಕೊಡಗು 10, ಕೋಲಾರ 1, ಕೊಪ್ಪಳ 0, ಮಂಡ್ಯ 4, ಮೈಸೂರು 16, ರಾಯಚೂರು 0, ರಾಮನಗರ 0, ಶಿವಮೊಗ್ಗ 1, ತುಮಕೂರು 5, ಉಡುಪಿ 6, ಉತ್ತರ ಕನ್ನಡ 7, ವಿಜಯಪುರ 1, ಯಾದಗಿರಿ ಜಿಲ್ಲೆಯಲ್ಲಿ 0 ಕೊವಿಡ್ 19 ಪ್ರಕರಣಗಳು ದಾಖಲಾಗಿವೆ.

ಕೊರೊನಾದಿಂದ ಮೃತಪಟ್ಟವರ ವಿವರ
ಬೆಂಗಳೂರು ನಗರ ಜಿಲ್ಲೆಯಲ್ಲಿ ಕೊವಿಡ್19 ಸೋಂಕಿನಿಂದ ಯಾರೂ ಮೃತಪಟ್ಟಿಲ್ಲ. ಮೈಸೂರು ಜಿಲ್ಲೆಯಲ್ಲಿ 2 ಮಂದಿ ಕೊರೊನಾದಿಂದ ಸಾವನ್ನಪ್ಪಿದ್ದಾರೆ. ಉಳಿದಂತೆ ಕರ್ನಾಟಕದ ಯಾವ ಜಿಲ್ಲೆಗಳಲ್ಲಿ ಕೂಡ ಕೊರೊನಾದಿಂದ ಸಾವು ಸಂಭವಿಸಿಲ್ಲ. ಅದರಂತೆ ಇಂದು ಅತಿ ಕಡಿಮೆ ಸಾವು ಸಂಭವಿಸಿದೆ. ಕೇವಲ 2 ಜನರು ಮೃತಪಟ್ಟಿದ್ದಾರೆ. ಕೊರೊನಾ ಸೋಂಕು ದೃಢಪಟ್ಟವರ ಸಂಖ್ಯೆ ಕೂಡ ಗಣನೀಯ ಪ್ರಮಾಣದಲ್ಲಿ ಇಳಿಕೆ ಕಂಡಿದೆ.

ಇದನ್ನೂ ಓದಿ: Covaxin Vaccine: ಕೊವ್ಯಾಕ್ಸಿನ್ ಲಸಿಕೆಯನ್ನು ಅಂಗೀಕರಿಸಿದ ಆಸ್ಟ್ರೇಲಿಯಾ

ಇದನ್ನೂ ಓದಿ: ಕೊರೊನಾ ಕಾಟ: ಪ್ರಸಿದ್ಧ ಚಾರ್ ಧಾಮ್ ಯಾತ್ರೆಗೆ ಭಕ್ತರ ಭೇಟಿ ಕ್ಷೀಣ, 30 ಲಕ್ಷಕ್ಕೂ ಹೆಚ್ಚು ಭಕ್ತಾದಿಗಳಿಂದ 4 ಲಕ್ಷಕ್ಕೆ ಕುಸಿತ