Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 236 ಜನರಿಗೆ ಕೊರೊನಾ ದೃಢ; 2 ಮಂದಿ ಸಾವು

Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 236 ಜನರಿಗೆ ಕೊರೊನಾ ದೃಢ; 2 ಮಂದಿ ಸಾವು
ಪ್ರಾತಿನಿಧಿಕ ಚಿತ್ರ

ಬೆಂಗಳೂರಿನಲ್ಲಿ ಇಂದು ಒಂದೇ ದಿನ 152 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,53,975 ಕ್ಕೆ ಏರಿಕೆಯಾಗಿದೆ. 12,53,975 ಸೋಂಕಿತರ ಪೈಕಿ 12,31,062 ಜನರು ಗುಣಮುಖರಾಗಿದ್ದಾರೆ.

TV9kannada Web Team

| Edited By: ganapathi bhat

Nov 14, 2021 | 7:30 PM

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು (ನವೆಂಬರ್ 14) ಹೊಸದಾಗಿ 236 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 29,91,850 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 29,45,679 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 2 ಜನರ ಸಾವು ಸಂಭವಿಸಿದೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 38,145 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 7,997 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ ಇಂದು ಒಂದೇ ದಿನ 152 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,53,975 ಕ್ಕೆ ಏರಿಕೆಯಾಗಿದೆ. 12,53,975 ಸೋಂಕಿತರ ಪೈಕಿ 12,31,062 ಜನರು ಗುಣಮುಖರಾಗಿದ್ದಾರೆ. ರಾಜ್ಯ ರಾಜಧಾನಿಯಲ್ಲಿ ಇಂದು ಕೊರೊನಾ ಸೋಂಕಿನಿಂದ ಇಬ್ಬರು ಮೃತಪಟ್ಟಿದ್ದಾರೆ. ಅದರಂತೆ, ನಗರದಲ್ಲಿ ಕೊರೊನಾದಿಂದ ಈವರೆಗೆ 16,312 ಜನರ ಸಾವು ಸಂಭವಿಸಿದೆ. ಬೆಂಗಳೂರಲ್ಲಿ 6,600 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.

ಜಿಲ್ಲಾವಾರು ಕೊರೊನಾ ಪ್ರಕರಣಗಳ ವಿವರ ಬಾಗಲಕೋಟೆ 0, ಬಳ್ಳಾರಿ 3, ಬೆಳಗಾವಿ 2, ಬೆಂಗಳೂರು ಗ್ರಾಮಾಂತರ 9, ಬೆಂಗಳೂರು ನಗರ 152, ಬೀದರ್ 0, ಚಾಮರಾಜನಗರ 1, ಚಿಕ್ಕಬಳ್ಳಾಪುರ 0, ಚಿಕ್ಕಮಗಳೂರು 0, ಚಿತ್ರದುರ್ಗ 0, ದಕ್ಷಿಣ ಕನ್ನಡ 11, ದಾವಣಗೆರೆ 1, ಧಾರವಾಡ 2, ಗದಗ 0, ಹಾಸನ 11, ಹಾವೇರಿ 0, ಕಲಬುರಗಿ 0, ಕೊಡಗು 4, ಕೋಲಾರ 7, ಕೊಪ್ಪಳ 0, ಮಂಡ್ಯ 1, ಮೈಸೂರು 10, ರಾಯಚೂರು 0, ರಾಮನಗರ 0, ಶಿವಮೊಗ್ಗ 5, ತುಮಕೂರು 5, ಉಡುಪಿ 6, ಉತ್ತರ ಕನ್ನಡ 6, ವಿಜಯಪುರ 0, ಯಾದಗಿರಿ ಜಿಲ್ಲೆಯಲ್ಲಿ 0 ಕೊವಿಡ್ 19 ಪ್ರಕರಣಗಳು ದಾಖಲಾಗಿವೆ.

ಕೊರೊನಾದಿಂದ ಮೃತಪಟ್ಟವರ ವಿವರ ಬೆಂಗಳೂರು ನಗರ ಜಿಲ್ಲೆಯಲ್ಲಿ ಕೊವಿಡ್19 ಸೋಂಕಿನಿಂದ ಇಬ್ಬರು ಮೃತಪಟ್ಟಿದ್ದಾರೆ. ಉಳಿದ ಜಿಲ್ಲೆಗಳಲ್ಲಿ ಕೊರೊನಾದಿಂದ ಸಾವು ಸಂಭವಿಸಿಲ್ಲ. ಕೊರೊನಾದಿಂದ ಸಾವನ್ನಪ್ಪುವರ ಸಂಖ್ಯೆ ಗಣನೀಯವಾಗಿ ಇಳಿಕೆ ಕಂಡಿದೆ. ಹೊಸತಾಗಿ ದಾಖಲಾಗುತ್ತಿರುವ ಕೊರೊನಾ ಪ್ರಕರಣಗಳು ಕೂಡ ಕಡಿಮೆ ಆಗಿದೆ.

ಇದನ್ನೂ ಓದಿ: ಕೊಡಗಿನಲ್ಲೀಗ ಕೌಟುಂಬಿಕ ಕ್ರೀಡಾಕೂಟದ ಸುಗ್ಗಿ; ಕೊರೊನಾ ಮರೆತು ಸಂಭ್ರಮಿಸುತ್ತಿರುವ ಕ್ರೀಡಾಪಟುಗಳು

ಇದನ್ನೂ ಓದಿ: ಕೊರೊನಾ ಲಸಿಕೆ ಹಾಕಿಸಿಕೊಳ್ಳಲು ಒಪ್ಪದ ಟೀಂ ಇಂಡಿಯಾ ಸ್ಟಾರ್ ಆಟಗಾರ! ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಿಂದ ಔಟ್

Follow us on

Related Stories

Most Read Stories

Click on your DTH Provider to Add TV9 Kannada