Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 308 ಜನರಿಗೆ ಕೊರೊನಾ ದೃಢ; 8 ಮಂದಿ ಸಾವು

ಬೆಂಗಳೂರಿನಲ್ಲಿ ಇಂದು ಒಂದೇ ದಿನ 207 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,54,463 ಕ್ಕೆ ಏರಿಕೆಯಾಗಿದೆ. 12,54,463 ಸೋಂಕಿತರ ಪೈಕಿ 12,32,036 ಜನರು ಗುಣಮುಖರಾಗಿದ್ದಾರೆ.

Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 308 ಜನರಿಗೆ ಕೊರೊನಾ ದೃಢ; 8 ಮಂದಿ ಸಾವು
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ganapathi bhat

Updated on: Nov 17, 2021 | 7:32 PM

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು (ನವೆಂಬರ್ 17) ಹೊಸದಾಗಿ 308 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 29,92,584 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 29,46,985 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 8 ಮಂದಿ ಮೃತಪಟ್ಟಿದ್ದಾರೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 38,161 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 7,409 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ ಇಂದು ಒಂದೇ ದಿನ 207 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,54,463 ಕ್ಕೆ ಏರಿಕೆಯಾಗಿದೆ. 12,54,463 ಸೋಂಕಿತರ ಪೈಕಿ 12,32,036 ಜನರು ಗುಣಮುಖರಾಗಿದ್ದಾರೆ. ರಾಜ್ಯ ರಾಜಧಾನಿಯಲ್ಲಿ ಇಂದು ಕೊರೊನಾ ಸೋಂಕಿನಿಂದ ಇಬ್ಬರು ಸಾವನ್ನಪ್ಪಿದ್ದಾರೆ. ಅದರಂತೆ, ನಗರದಲ್ಲಿ ಕೊರೊನಾದಿಂದ ಈವರೆಗೆ 16,316 ಜನರ ಸಾವು ಸಂಭವಿಸಿದೆ. ಬೆಂಗಳೂರಲ್ಲಿ 6,110 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.

ಜಿಲ್ಲಾವಾರು ಕೊರೊನಾ ಪ್ರಕರಣಗಳ ವಿವರ ಬಾಗಲಕೋಟೆ 0, ಬಳ್ಳಾರಿ 0, ಬೆಳಗಾವಿ 1, ಬೆಂಗಳೂರು ಗ್ರಾಮಾಂತರ 4, ಬೆಂಗಳೂರು ನಗರ 207, ಬೀದರ್ 0, ಚಾಮರಾಜನಗರ 0, ಚಿಕ್ಕಬಳ್ಳಾಪುರ 0, ಚಿಕ್ಕಮಗಳೂರು 1, ಚಿತ್ರದುರ್ಗ 2, ದಕ್ಷಿಣ ಕನ್ನಡ 6, ದಾವಣಗೆರೆ 2, ಧಾರವಾಡ 0, ಗದಗ 0, ಹಾಸನ 1, ಹಾವೇರಿ 0, ಕಲಬುರಗಿ 0, ಕೊಡಗು 11, ಕೋಲಾರ 9, ಕೊಪ್ಪಳ 0, ಮಂಡ್ಯ 4, ಮೈಸೂರು 21, ರಾಯಚೂರು 0, ರಾಮನಗರ 1, ಶಿವಮೊಗ್ಗ 2, ತುಮಕೂರು 18, ಉಡುಪಿ 9, ಉತ್ತರ ಕನ್ನಡ 7, ವಿಜಯಪುರ 2, ಯಾದಗಿರಿ ಜಿಲ್ಲೆಯಲ್ಲಿ 0 ಕೊವಿಡ್ 19 ಪ್ರಕರಣಗಳು ದಾಖಲಾಗಿವೆ.

ಕೊರೊನಾದಿಂದ ಮೃತಪಟ್ಟವರ ವಿವರ ಬೆಂಗಳೂರು ನಗರ ಜಿಲ್ಲೆಯಲ್ಲಿ 2 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಚಿತ್ರದುರ್ಗ, ದಕ್ಷಿಣ ಕನ್ನಡ, ಹಾಸನ, ಕೋಲಾರ, ಕೊಪ್ಪಳ ಹಾಗೂ ಮೈಸೂರು ಜಿಲ್ಲೆಯಲ್ಲಿ ಕೊವಿಡ್19 ಸೋಂಕಿನಿಂದ ಒಬ್ಬರು ಮೃತಪಟ್ಟಿದ್ದಾರೆ. ಉಳಿದ ಜಿಲ್ಲೆಗಳಲ್ಲಿ ಕೊರೊನಾದಿಂದ ಸಾವು ಸಂಭವಿಸಿಲ್ಲ.

ಇದನ್ನೂ ಓದಿ: Namma Metro: ಬೆಂಗಳೂರು ಮೆಟ್ರೋ ರೈಲು ಸಂಚಾರ ಅವಧಿ ವಿಸ್ತರಣೆ: ಕೊರೊನಾ ಮೊದಲಿನ ವೇಳಾಪಟ್ಟಿ

ಇದನ್ನೂ ಓದಿ: ಕೊರೊನಾಗೆ ಬಲಿಯಾದ ಪೊಲೀಸರ ಕುಟುಂಬಕ್ಕೆ ತಲಾ 3 ಲಕ್ಷ ರೂ.ಗಳ ಚೆಕ್ ವಿತರಣೆ

ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ